ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.
“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.
ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”
ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.
ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.
ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.
ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ [*ಮೂವತ್ತು ಮಂದಿ ಶೂರರು ಪ್ರಖ್ಯಾತರಾಗಿದ್ದ ಹಾಗೂ ಬಹಳ ಧೈರ್ಯಶಾಲಿಗಳಾಗಿದ್ದ ಈ ಸೈನಿಕರು ದಾವೀದನ ಗುಂಪಿನವರು.] ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.
ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.
ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,
“ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು. Other Brave Soldiers
ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.
ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.
ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.
ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.
ಯೋವಾಬನ ಸೋದರನಾದ ಅಸಾಹೇಲನು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು. ಮೂವತ್ತು ಮಂದಿ ಪರಾಕ್ರಮಿಗಳ ಗುಂಪಿನಲ್ಲಿದ್ದ ಇತರ ಜನರೆಂದರೆ: ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನನು.