ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.
ಆದುದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.
ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.
ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.
ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.
ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡ ಬೇಕೆಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.
ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕಾರ್ಯಗಳಿಗೆ ಬಳಸುತ್ತಾರೆ.
ಹೀಗಿರಲಾಗಿ ಒಬ್ಬನು ತನ್ನ ದುಷ್ಟಕಾರ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.
ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ, ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.
ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.