ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;
ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;
ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.
ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.
ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.
ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.