1
|
ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು. |
2
|
ಆದರೆ ಪೇತ್ರನು ಜೆರುಸಲೇಮಿಗೆ ಬಂದಾಗ ಕೆಲವು ಯೆಹೂದ್ಯ ವಿಶ್ವಾಸಿಗಳು ಅವನೊಂದಿಗೆ ವಾದ ಮಾಡಿದರು. |
3
|
ಅವರು, “ಯೆಹೂದ್ಯರಲ್ಲದವರ ಮತ್ತು ಸುನ್ನತಿ ಮಾಡಿಸಿಕೊಂಡಿಲ್ಲದವರ ಮನೆಗಳಿಗೆ ನೀನು ಹೋದೆ! ನೀನು ಅವರೊಂದಿಗೆ ಊಟವನ್ನು ಸಹ ಮಾಡಿದೆ!” ಎಂದು ಹೇಳಿದರು. |
4
|
ಆದ್ದರಿಂದ ಪೇತ್ರನು ನಡೆದ ಸಂಗತಿಯನ್ನೆಲ್ಲಾ ಅವರಿಗೆ ವಿವರಿಸಿದನು. |
5
|
ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದು ಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು. |
6
|
ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು. |
7
|
ಆಗ, ಪೇತ್ರನೇ, ಎದ್ದೇಳು! ಇವುಗಳಲ್ಲಿ ಯಾವುದನ್ನು ಬೇಕಾದರೂ ಕೊಯ್ದುತಿನ್ನು!؆ ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು. |
8
|
”ಆದರೆ ನಾನು, ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ؆ ಎಂದು ಹೇಳಿದೆನು. |
9
|
”ಆದರೆ, ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!؆ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು. |
10
|
”ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು. |
11
|
ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು. |
12
|
ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು. |
13
|
ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ. |
14
|
ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ؆ ಎಂದು ಹೇಳಿದನು. |
15
|
”ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು. |
16
|
ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!؆ ಎಂದು ಪ್ರಭುವು ಹೇಳಿದ್ದನು. |
17
|
ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು. |
18
|
ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು. |
19
|
ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು. |
20
|
ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು. |
21
|
ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು. |
22
|
ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು. |
23
|
[This verse may not be a part of this translation] |
24
|
[This verse may not be a part of this translation] |
25
|
ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು. |
26
|
ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ ಕ್ರೈಸ್ತರು؆ ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ. |
27
|
ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು. |
28
|
ಈ ಪ್ರವಾದಿಗಳಲ್ಲಿ ಅಗಬ؆ ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.) |
29
|
ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು. |
30
|
ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾ ಹಿರಿಯರಿಗೆ ಕೊಟ್ಟರು. |
Acts 11:6 Kannada Language Bible Words basic statistical display
COMING SOON ...