1
|
ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು. |
2
|
ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು. |
3
|
ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು. |
4
|
ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು. |
5
|
ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. |
6
|
ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು. |
7
|
ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು. |
8
|
ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ. |
9
|
ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು, |
10
|
ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು. |
11
|
ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು. |
12
|
ಜನರು ಬಾರ್ನಬನನ್ನು ಜೆಯುಸ್؆ ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು ಹೆರ್ಮೆ؆ ದೇವರೆಂದೂ ಕರೆದರು. |
13
|
ಜೆಯುಸ್ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು. |
14
|
ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು: |
15
|
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ. |
16
|
”ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು. |
17
|
ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.” |
18
|
ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು. |
19
|
ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು. |
20
|
ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು. |
21
|
ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ, |
22
|
ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು; “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು. |
23
|
ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು. |
24
|
ಪೌಲಬಾರ್ನಬರು ಪಿಸಿದಿಯ ನಾಡಿನ ಮೂಲಕವಾಗಿ ಪಾಂಫೀಲಿಯ ನಾಡಿಗೆ ಬಂದರು. |
25
|
ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು. |
26
|
ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ. |
27
|
ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು. |
28
|
ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು. |
Acts 14:1 Kannada Language Bible Words basic statistical display
COMING SOON ...