1
|
ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು, ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು. |
2
|
ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು. |
3
|
ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು. |
4
|
ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು. |
5
|
ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು. |
6
|
ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು. |
7
|
ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು. |
8
|
ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ, ಮತ್ತು ಹಿರಿಯನಾಯಕರೇ, |
9
|
ಈ ಕುಂಟನಿಗಾದ ಒಳ್ಳೆಯದರ ಬಗ್ಗೆ ನೀವು ನಮ್ಮನ್ನು ಕೇಳುತ್ತಿದ್ದೀರಿ. |
10
|
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ! |
11
|
ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.؆ ಕೀರ್ತನೆ 118:22 |
12
|
ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು. |
13
|
ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು. |
14
|
ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ. |
15
|
ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ, |
16
|
”ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು. |
17
|
ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು. |
18
|
ಆದ್ದರಿಂದ ಯೆಹೂದ್ಯನಾಯಕರು ಪೇತ್ರ ಮತ್ತು ಯೋಹಾನರನ್ನು ಮತ್ತೆ ಒಳಗೆ ಕರೆಸಿ, ಯೇಸುವಿನ ಹೆಸರಿನಲ್ಲಿ ಏನೂ ಹೇಳಬಾರದೆಂದೂ, ಏನೂ ಬೋಧಿಸಬಾರದೆಂದೂ ಎಚ್ಚರಿಕೆ ಕೊಟ್ಟರು. |
19
|
ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ. |
20
|
ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು. |
21
|
[This verse may not be a part of this translation] |
22
|
[This verse may not be a part of this translation] |
23
|
ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು. |
24
|
ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ. |
25
|
ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಈ ಮಾತುಗಳನ್ನು ಬರೆದನು: ಜನಾಂಗಗಳು ಕೂಗಾಡುವುದೇಕೆ? ಈ ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ! |
26
|
ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.؆ ಕೀರ್ತನೆ 2:1-2 |
27
|
ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ. |
28
|
ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು. |
29
|
ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು. |
30
|
ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು. |
31
|
ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು. |
32
|
ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು. |
33
|
ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು. |
34
|
ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ, |
35
|
ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಡುತ್ತಿದ್ದರು. ಬಳಿಕ ಅದನ್ನು ಪ್ರತಿಯೊಬ್ಬರಿಗೂ ಅವರವರ ಅಗತ್ಯತೆಗಳಿಗನುಸಾರವಾಗಿ ಹಂಚಲಾಗುತ್ತಿತ್ತು. |
36
|
ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ ಧೈರ್ಯದಾಯಕ؆) ಸೈಪ್ರಸ್ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು. |
37
|
ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು. |
Acts 4:24 Kannada Language Bible Words basic statistical display
COMING SOON ...