ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು. ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು. ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.
ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”
ವರ್ತಕರಾದ ನೀವು ಹೇಳುವುದೇನೆಂದರೆ, “ಅಮಾವಾಸ್ಯೆ ಯಾವಾಗ ಮುಗಿಯುವುದು? ಆಗ ನಾವು ಧಾನ್ಯವನ್ನು ಮಾರಾಟ ಮಾಡುವೆವು. ಸಬ್ಬತ್ ಯಾವಾಗ ಮುಗಿಯುವುದು? ಆಗ ನಾವು ನಮ್ಮ ಗೋದಿಯನ್ನು ಮಾರಾಟ ಮಾಡಲು ತರುವೆವು. ಅದರ ಬೆಲೆಯನ್ನು ಅಧಿಕಗೊಳಿಸಿ ಅಳತೆಯನ್ನು ಕಡಿಮೆ ಮಾಡುವೆವು. ತ್ರಾಸನ್ನು ಕಡಿಮೆ ಮಾಡಿ ಜನರಿಗೆ ಮೋಸ ಮಾಡುವೆವು.
ಬಡಜನರಿಗೆ ಸಾಲ ಸಂದಾಯ ಮಾಡಲು ಸಾಧ್ಯವಾಗದಿರುವದರಿಂದ ಅವರನ್ನು ನಾವು ಗುಲಾಮರನ್ನಾಗಿ ತೆಗೆದುಕೊಳ್ಳೋಣ. ಒಂದು ಜೊತೆ ಚಪ್ಪಲಿಯ ಕ್ರಯಕೊಟ್ಟು ಅವರನ್ನು ಖರೀದಿಸೋಣ. ಮತ್ತು ನೆಲದಲ್ಲಿ ಬಿದ್ದ ಗೋದಿಯನ್ನು ಒಟ್ಟುಗೂಡಿಸಿ ಮಾರೋಣ.”
ನಿಮ್ಮ ಸಂತಸದ ದಿವಸಗಳನ್ನು ಸತ್ತವರಿಗಾಗಿ ರೋದಿಸುವ ದಿವಸಗಳನ್ನಾಗಿ ಮಾಡುವೆನು. ನಿಮ್ಮ ಹಾಡುಗಳೆಲ್ಲಾ ಶೋಕಗೀತೆಯಾಗುವವು. ಎಲ್ಲರೂ ಶೋಕಬಟ್ಟೆಯನ್ನು ಧರಿಸುವಂತೆ ಮಾಡುವೆನು. ಪ್ರತಿ ತಲೆಯನ್ನು ಬೋಳು ತಲೆಯನ್ನಾಗಿ ಮಾಡುವೆನು. ಒಬ್ಬನೇ ಮಗನನ್ನು ಕಳೆದುಕೊಳ್ಳುವಾಗ ರೋದಿಸುವ ಹಾಗೆ ಗಟ್ಟಿಯಾಗಿ ರೋದಿಸುವಂತೆ ಮಾಡುತ್ತೇನೆ. ಅದರ ಅಂತ್ಯ ಕಹಿಯಾಗಿರುವುದು.”
ಆ ಜನರು ಸಮಾರ್ಯದ ಪಾಪದ [*ಸಮಾರ್ಯದ ಪಾಪ ಅಂದರೆ ಬಸವನ ವಿಗ್ರಹ.] ಮೇಲೆ ಆಣೆಯಿಡುವರು, ‘ದಾನೇ, ನಿನ್ನ ದೇವರಾಣೆ ….’ ‘ಬೇರ್ಷೆಬದ ದೇವರಾಣೆ ….’ ಎಂಬುದಾಗಿ ಹೇಳುವರು. ಆದರೆ ಆ ಜನರು ಬಿದ್ದುಹೋಗುವರು. ಅಲ್ಲಿಂದ ತಿರುಗಿ ಏಳುವದೇ ಇಲ್ಲ.”