ಅಲ್ಲದೆ ನಿಮ್ಮ ಮಧ್ಯದಲ್ಲಿ ಕೆಟ್ಟಮಾತುಗಳು ಇರಕೂಡದು. ನೀವು ಮೂರ್ಖತನದಿಂದ ಮಾತಾಡಕೂಡದು ಮತ್ತು ಹೊಲಸಾದ ಹಾಸ್ಯನುಡಿಗಳನ್ನು ಹೇಳಕೂಡದು. ಇವುಗಳು ನಿಮಗೆ ಯೋಗ್ಯವಾದವುಗಳಲ್ಲ. ಆದರೆ ನೀವು ದೇವರಿಗೆ ಸ್ತೋತ್ರ ಸಲ್ಲಿಸುವವರಾಗಿರಬೇಕು.
ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.
ಕತ್ತಲೆಯಲ್ಲಿರುವ ಜನರು ಮಾಡುವಂಥ ಕಾರ್ಯಗಳನ್ನು ಮಾಡಬೇಡಿ. ಅವುಗಳಿಂದ ಒಳ್ಳೆಯದೇನೂ ಆಗುವುದಿಲ್ಲ. ಆದರೆ ಕತ್ತಲೆಯಲ್ಲಿ ನಡೆಯುವ ಕಾರ್ಯಗಳು ತಪ್ಪಾದವುಗಳೆಂದು ತೋರಿಸಲು ಒಳ್ಳೆಯ ಕಾರ್ಯಗಳನ್ನು ಮಾಡಿರಿ.
ಪ್ರತಿಯೊಂದನ್ನು ಸ್ಪಷ್ಟವಾಗಿ ತೋರಿಸುವಂಥದ್ದೇ ಬೆಳಕು. ಆದ್ದರಿಂದಲೇ ಹೀಗೆ ಬರೆದದೆ: “ನಿದ್ರೆಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”
ಮಹಿಮಾಪೂರ್ಣಳಾದ ಕನ್ನಿಕೆಯೋ ಎಂಬಂತಿರುವ ಸಭೆಯನ್ನು ತನಗೇ ಕೊಡಬೇಕೆಂದು ಆತನು ಪ್ರಾಣಕೊಟ್ಟನು. ಸಭೆಯು ದೋಷವಿಲ್ಲದೆ ಶುದ್ಧವಾಗಿರಬೇಕೆಂದು ಮತ್ತು ದುಷ್ಟತ್ವವಾಗಲಿ ಪಾಪವಾಗಲಿ ಅಥವಾ ಬೇರೆ ಯಾವುದೇ ತಪ್ಪಾಗಲಿ ಸಭೆಯಲ್ಲಿರಕೂಡದೆಂದು ಆತನು ಪ್ರಾಣಕೊಟ್ಟನು.
ಏಕೆಂದರೆ ಯಾವನೂ ತನ್ನ ದೇಹವನ್ನು ದ್ವೇಷಿಸುವುದಿಲ್ಲ. ಪ್ರತಿಯೊಬ್ಬನು ತನ್ನ ದೇಹವನ್ನು ಪೋಷಿಸಿ ಜಾಗ್ರತೆಯಿಂದ ನೋಡಿಕೊಳ್ಳುತ್ತಾನೆ. ಕ್ರಿಸ್ತನು ಸಭೆಗೋಸ್ಕರ ಮಾಡುವಂಥದ್ದು ಅದೇ ಆಗಿದೆ.
ಪವಿತ್ರ ಗ್ರಂಥವು ಹೇಳುವಂತೆ, “ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು ಮತ್ತು ಅವರಿಬ್ಬರು ಒಂದೇ ದೇಹವಾಗುವರು.” [✡ಉಲ್ಲೇಖನ: ಆದಿಕಾಂಡ 2:24.]