ನಾನು ಈಜಿಪ್ಟಿನಲ್ಲಿ ಮಾಡಿದ ಸೂಚಕಕಾರ್ಯಗಳನ್ನೂ ಇತರ ಅದ್ಭುತಕಾರ್ಯಗಳನ್ನೂ ನೀವು ನಿಮ್ಮ ಮಕ್ಕಳಿಗೆ ಮತ್ತು ಮೊಮ್ಮಕ್ಕಳಿಗೆ ವಿವರಿಸಿ, ‘ಯೆಹೋವನು ಈಜಿಪ್ಟಿನವರನ್ನು ತನಗೆ ಇಷ್ಟ ಬಂದಂತೆ ಶಿಕ್ಷಿಸಿದನು’ ಎಂಬುದಾಗಿ ತಿಳಿಸಬೇಕೆಂದು ನಾನು ಫರೋಹನ ಮತ್ತು ಅವನ ಅಧಿಕಾರಿಗಳ ಹೃದಯಗಳನ್ನು ಕಠಿಣಪಡಿಸಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳ ಮೂಲಕ ನಾನೇ ಯೆಹೋವನೆಂದು ತಿಳಿದುಕೊಳ್ಳುವಿರಿ” ಎಂದು ಹೇಳಿದನು.
ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋಗಿ, “ಇಬ್ರಿಯರ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ನೀನು ಎಲ್ಲಿಯವರೆಗೆ ನನಗೆ ವಿಧೇಯನಾಗುವುದಿಲ್ಲ? ನನ್ನನ್ನು ಆರಾಧಿಸಲು ನನ್ನ ಜನರನ್ನು ಕಳುಹಿಸಿಕೊಡು!
ಮಿಡತೆಗಳು ಬಂದು ಭೂಮಿಯನ್ನು ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವುದು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವುದನ್ನು ಮಿಡತೆಗಳು ತಿಂದುಬಿಡುತ್ತವೆ; ಹೊಲದಲ್ಲಿರುವ ಎಲ್ಲಾ ಮರಗಳ ಎಲೆಗಳನ್ನು ತಿಂದುಬಿಡುತ್ತವೆ.
ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿರುತ್ತವೆ. ನಿನ್ನ ತಂದೆತಾತಂದಿರೂ ನೋಡಿಲ್ಲದಷ್ಟು ಮಿಡತೆಗಳಿರುತ್ತವೆ’ ” ಎಂದು ಹೇಳಿದರು. ಬಳಿಕ ಅವರು ಫರೋಹನ ಬಳಿಯಿಂದ ಹೊರಟುಹೋದರು.
ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.
ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.
ಯೆಹೋವನು ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ನಿನ್ನ ಕೈಯನ್ನೆತ್ತು. ಆಗ ಮಿಡತೆಗಳು ಬರುವವು! ಮಿಡತೆಗಳು ಈಜಿಪ್ಟ್ ದೇಶದಲ್ಲೆಲ್ಲಾ ಹರಡಿಕೊಳ್ಳುವವು. ಆಲಿಕಲ್ಲಿನ ಮಳೆಯಿಂದ ನಾಶವಾಗದೆ ಉಳಿದುಕೊಂಡ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡುವವು” ಎಂದು ಹೇಳಿದನು.
ಅಂತೆಯೇ ಮೋಶೆ ಈಜಿಪ್ಟ್ ದೇಶದ ಮೇಲೆ ಕೈ ಚಾಚಿದನು. ಆಗ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಗಾಳಿಯು ಹಗಲಿರುಳು ಬೀಸಿತು. ಮುಂಜಾನೆಯಾದಾಗ ಆ ಗಾಳಿಯಿಂದ ಈಜಿಪ್ಟ್ ದೇಶಕ್ಕೆ ಮಿಡತೆಗಳು ಬಂದವು.
ಆದ್ದರಿಂದ ಯೆಹೋವನು ಗಾಳಿಯ ದಿಕ್ಕನ್ನು ಬದಲಾಯಿಸಿ, ಪಶ್ಚಿಮದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು; ಅದು ಮಿಡತೆಗಳನ್ನು ಕೆಂಪು ಸಮುದ್ರಕ್ಕೆ ಹಾರಿಸಿತು. ಈಜಿಪ್ಟಿನಲ್ಲಿ ಒಂದು ಮಿಡತೆಯೂ ಉಳಿಯಲಿಲ್ಲ.
ಫರೋಹನು ಮತ್ತೆ ಮೋಶೆಯನ್ನು ಕರೆಸಿ, “ಹೋಗಿ, ಯೆಹೋವನನ್ನು ಆರಾಧಿಸಿರಿ! ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಬಹುದು. ಆದರೆ ನೀವು ನಿಮ್ಮ ಕುರಿಗಳನ್ನು ದನಕರುಗಳನ್ನು ಇಲ್ಲಿಯೇ ಬಿಟ್ಟುಹೋಗಬೇಕು” ಎಂದು ಹೇಳಿದನು.
ನಮ್ಮ ಪ್ರಾಣಿಗಳನ್ನೆಲ್ಲಾ ತೆಗೆದುಕೊಂಡು ಹೋಗುವೆವು. ಒಂದನ್ನಾದರೂ ಬಿಟ್ಟುಹೋಗುವುದಿಲ್ಲ; ಯಾವ ಪಶುಗಳನ್ನು ಅರ್ಪಿಸಬೇಕೆಂಬುದು ಅಲ್ಲಿಗೆ ಹೋದಾಗಲೇ ನಮಗೆ ತಿಳಿಯುವುದು. ಆದ್ದರಿಂದ, ನಾವು ಇವುಗಳನ್ನೆಲ್ಲಾ ನಮ್ಮ ಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು” ಎಂದು ಹೇಳಿದನು.