ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.
ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.
ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ
ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.
ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.
ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.