ಆಗ ಮೋಶೆಯು ಯೆಹೋವನಿಗೆ, “ಆದರೆ ನೀನು ನನ್ನನ್ನು ಕಳುಹಿಸಿರುವೆ ಎಂದು ಇಸ್ರೇಲರು ನಂಬುವುದೂ ಇಲ್ಲ; ಕೇಳುವುದೂ ಇಲ್ಲ. ಅವರು, ‘ಯೆಹೋವನು ನಿನಗೆ ಪ್ರತ್ಯಕ್ಷನಾಗಲಿಲ್ಲ’ ಎಂದು ಹೇಳುವರು” ಎಂದು ಹೇಳಿದನು.
ಆಗ ದೇವರು, “ನಿನ್ನ ಕೋಲನ್ನು ಈ ರೀತಿಯಲ್ಲಿ ಉಪಯೋಗಿಸು. ನಿನ್ನ ಪೂರ್ವಿಕರ, ಅಬ್ರಹಾಮನ, ಇಸಾಕನ ಮತ್ತು ಯಾಕೋಬನ ದೇವರು ನಿನಗೆ ಪ್ರತ್ಯಕ್ಷನಾದನೆಂದು ಆಗ ಅವರು ನಂಬುವರು” ಎಂದು ಹೇಳಿದನು.
ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.
ನೀನು ಈ ಎರಡು ಸೂಚಕಕಾರ್ಯಗಳನ್ನು ತೋರಿಸಿದ ನಂತರವೂ ಅವರು ನಂಬದಿದ್ದರೆ, ನೈಲ್ ನದಿಯಿಂದ ಸ್ವಲ್ಪ ನೀರನ್ನು ತೆಗೆದುಕೊಂಡು ಅದನ್ನು ನೆಲದ ಮೇಲೆ ಸುರಿ; ನೀರು ನೆಲವನ್ನು ಮುಟ್ಟಿದ ಕೊಡಲೇ ರಕ್ತವಾಗುವುದು” ಎಂದು ಹೇಳಿದನು.
ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನೂ ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.
ಆರೋನನು ಜನರೊಂದಿಗೂ ನಿನ್ನ ಪರವಾಗಿಯೂ ಮಾತಾಡುವನು. ನೀನು ಮಹಾರಾಜನಂತೆ ಇರುವೆ; ಅವನು ನಿನಗೆ ಅಧಿಕೃತ ಮಾತುಗಾರನಂತೆ ಇರುವನು. [*ನೀನು … ಮಾತುಗಾರನಂತೆ ಇರುವನು ಅಕ್ಷರಶಃ, “ಅವನು ನಿನ್ನ ಬಾಯಾಗಿರುವನು, ಮತ್ತು ನೀನು ಅವನಿಗೆ ದೇವರಂತಿರುವೆ.”]
ಬಳಿಕ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂತಿರುಗಿದನು. ಮೋಶೆ ಇತ್ರೋನನಿಗೆ, “ಈಜಿಪ್ಟಿನಲ್ಲಿರುವ ನನ್ನ ಜನರ ಬಳಿಗೆ ಹೋಗಿ ಅವರು ಇನ್ನೂ ಜೀವಂತವಾಗಿದ್ದಾರೋ ಏನೋ ನೋಡುವೆನು” ಎಂದು ಹೇಳಿದನು. ಇತ್ರೋನನು ಮೋಶೆಗೆ, “ನೀನು ಸಮಾಧಾನದಿಂದ ಹೋಗಿ ಬಾ” ಎಂದು ಹೇಳಿದನು.
ಆದ್ದರಿಂದ ಮೋಶೆ ತನ್ನ ಹೆಂಡತಿಯನ್ನೂ ಗಂಡುಮಕ್ಕಳನ್ನೂ ಕತ್ತೆಗಳ ಮೇಲೆ ಕುಳ್ಳಿರಿಸಿ ಈಜಿಪ್ಟ್ ದೇಶಕ್ಕೆ ಮರಳಿ ಪ್ರಯಾಣ ಮಾಡಿದನು. ಮೋಶೆಯು ಯೆಹೋವನ ಶಕ್ತಿಯಿಂದ ಕೂಡಿದ ತನ್ನ ಊರುಗೋಲನ್ನು ಹಿಡಿದುಕೊಂಡು ಹೋದನು. [†ಮೋಶೆ … ಹೋದನು ಅಕ್ಷರಶಃ, “ಮೋಶೆಯು ದೇವರ ಊರುಗೋಲನ್ನು ತೆಗೆದುಕೊಂಡು ಹೋದನು.”]
ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.
ನನ್ನ ಮಗನು ನಿನ್ನ ದೇಶದಿಂದ ಹೋಗಿ ನನ್ನನ್ನು ಆರಾಧಿಸಲು ನೀನು ಅಪ್ಪಣೆಕೊಡಬೇಕು. ಇಲ್ಲವಾದರೆ ನಾನು ನಿನ್ನ ಚೊಚ್ಚಲಮಗನನ್ನು ಕೊಲ್ಲುವೆನು’ ಎಂದು ಯೆಹೋವನು ಹೇಳುತ್ತಾನೆ” ಎಂಬುದಾಗಿ ತಿಳಿಸಬೇಕು.
ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು.
ಯೆಹೋವನು ಆರೋನನೊಡನೆ ಮಾತಾಡಿ ಅವನಿಗೆ, “ಅರಣ್ಯಕ್ಕೆ ಹೋಗಿ ಮೋಶೆಯನ್ನು ಭೇಟಿಯಾಗು” ಎಂದು ಹೇಳಿದ್ದನು. ಆದ್ದರಿಂದ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಭೇಟಿಯಾದನು. ಆರೋನನು ಮೋಶೆಯನ್ನು ಕಂಡು ಅವನಿಗೆ ಮುದ್ದಿಟ್ಟನು.
ಯೆಹೋವನು ಮೋಶೆಯನ್ನು ಕಳುಹಿಸಿದ್ದಾನೆಂದು ಜನರು ನಂಬಿದರು. ಯೆಹೋವನು ಇಸ್ರೇಲರಿಗೆ ಸಹಾಯಮಾಡಬೇಕೆಂದಿರುವುದನ್ನು ಅವರು ತಿಳಿದು ತಲೆಬಾಗಿ ಆತನನ್ನು ಆರಾಧಿಸಿದರು. ಯೆಹೋವನು ತಮ್ಮ ಸಂಕಟಗಳನ್ನು ನೋಡಿದ್ದರಿಂದ ಅವರು ಆತನನ್ನು ಆರಾಧಿಸಿದರು.