ಅವರು ಈಜಿಪ್ಟಿನಲ್ಲಿ ಇನ್ನೂ ಎಳೆ ಪ್ರಾಯದಲ್ಲಿರುವಾಗಲೇ ಸೂಳೆಯರಾದರು. ಈಜಿಪ್ಟಿನಲ್ಲಿ ಅವರು ಮೊದಲ ಬಾರಿ ಸಂಭೋಗಿಸಿದರು. ಪುರುಷರು ತಮ್ಮ ಮೊಲೆತೊಟ್ಟುಗಳನ್ನು ಮುಟ್ಟಿ ಅವರ ಎಳೆಸ್ತನಗಳನ್ನು ಹಿಡಿಯಲು ಬಿಟ್ಟರು.
ಹಿರಿಯ ಅಕ್ಕನ ಹೆಸರು ಒಹೊಲ. ತಂಗಿಯ ಹೆಸರು ಒಹೊಲೀಬ. ಅವರಿಬ್ಬರೂ ನನ್ನ ಹೆಂಡತಿಯರಾದರು. ಅವರು ಗಂಡುಮಕ್ಕಳನ್ನು ಮತ್ತು ಹೆಣ್ಣುಮಕ್ಕಳನ್ನು ಹೆತ್ತರು. ಒಹೊಲ ಎಂದರೆ ಸಮಾರ್ಯ; ಮತ್ತು ಒಹೊಲೀಬ ಎಂದರೆ ಜೆರುಸಲೇಮ್.
ಇದರ ಜೊತೆಯಲ್ಲಿಯೇ ಈಜಿಪ್ಟಿನೊಂದಿಗೆ ತನ್ನ ಪ್ರಣಯ ಸಂಬಂಧವನ್ನು ಮುಂದುವರಿಸುತ್ತಿದ್ದಳು. ಆಕೆಯು ಇನ್ನೂ ಎಳೆಯ ಹುಡುಗಿಯಾಗಿದ್ದಾಗಲೇ ಈಜಿಪ್ಟ್ ಆಕೆಯೊಂದಿಗೆ ಸಂಭೋಗ ಮಾಡಿತ್ತು. ಅವಳ ಎಳೆ ಸ್ತನಗಳನ್ನು ಹಿಸುಕಿದವರಲ್ಲಿ ಮೊದಲನೆಯವರು ಈಜಿಪ್ಟಿನವರೇ. ಈಜಿಪ್ಟ್ ತನ್ನ ಅನೈತಿಕ ಪ್ರೀತಿಯನ್ನು ಆಕೆಯ ಮೇಲೆ ಸುರಿಯಿತು.
ಅವರು ಬಲವಂತದಿಂದ ಆಕೆಯನ್ನು ಸಂಭೋಗಿಸಿದರು. ಆಕೆಯ ಮಕ್ಕಳನ್ನು ತೆಗೆದುಕೊಂಡರು. ಖಡ್ಗವನ್ನು ತೆಗೆದುಕೊಂಡು ಆಕೆಯನ್ನು ಕೊಂದುಹಾಕಿದರು. ಆಕೆಯನ್ನು ಶಿಕ್ಷಿಸಿದರು. ಸ್ತ್ರೀಯರು ಈಗಲೂ ಆಕೆಯ ವಿಷಯ ಮಾತನಾಡುತ್ತಿದ್ದಾರೆ.
“ಒಹೊಲೀಬಳು ನನಗೆ ಅಪನಂಬಿಗಸ್ತಳಾಗಿ ಮುಂದುವರಿದಳು. ಗೋಡೆಯ ಮೇಲೆ ಕೆತ್ತಲ್ಪಟ್ಟಿದ್ದ ಗಂಡಸರ ಚಿತ್ರಗಳನ್ನು ಆಕೆ ನೋಡಿದಳು. ಅವು ಕೆಂಪು ಸಮವಸ್ತ್ರ ಧರಿಸಿದ್ದ ಕಸ್ದೀಯ ಸೈನಿಕರ ಚಿತ್ರಗಳು.
“ತಾನು ಅಪನಂಬಿಗಸ್ತಳೆಂದು ಎಲ್ಲರೂ ತನ್ನನ್ನು ಗುರುತಿಸುವಂತೆ ಒಹೊಲೀಬಳು ಮಾಡಿದಳು. ಆಕೆಯು ತನ್ನ ನಗ್ನ ಶರೀರವನ್ನು ತೋರಿಸಿದಳು. ಆದ್ದರಿಂದ ಅವಳ ಅಕ್ಕ ನನಗೆ ಹೇಗೆ ಅಸಹ್ಯವಾದಳೋ ಅದೇ ರೀತಿ ಈಕೆಯೂ ನನಗೆ ಅಸಹ್ಯವಾದಳು. ನನಗೆ ಆಕೆಯ ಅಕ್ಕನ ಮೇಲಿದ್ದ ಅನುರಾಗ ಹೇಗೆ ತೊಲಗಿಹೋಯಿತೋ ಹಾಗೆಯೇ ಈಕೆಯ ಮೇಲಿನ ಅನುರಾಗವೂ ತೊಲಗಿಹೋಯಿತು.
“ಒಹೊಲೀಬಳೇ, ನಿನ್ನ ಯೌವನ ಕಾಲದಲ್ಲಿ ನೀನು ಅನುಭೋಗಿಸಿದ್ದನ್ನು ಕನಸು ಕಾಣುತ್ತಿ, ನಿನ್ನ ಈಜಿಪ್ಟಿನ ಪ್ರಿಯತಮರು ನಿನ್ನ ಸ್ತನದ ತೊಟ್ಟುಗಳನ್ನು ಮುಟ್ಟಿ ನಿನ್ನ ಎಳೆ ಸ್ತನಗಳನ್ನು ಹಿಸುಕಿದ್ದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳುತ್ತಿರುವೆ.
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ‘ಓಹೊಲೀಬಳೇ, ನಿನ್ನ ಪ್ರಿಯತಮರಲ್ಲಿ ಕೆಲವರು ನಿನಗೆ ಅಸಹ್ಯವಾಗಿದ್ದಾರೆ. ಆದರೆ ನಾನು ಆ ಪ್ರಿಯತಮರನ್ನು ಇಲ್ಲಿಗೆ ಕರೆದುಕೊಂಡು ಬರುವೆ. ಅವರು ನಿನ್ನನ್ನು ಸುತ್ತುವರಿಯುವರು.
ನಾನು ಬಾಬಿಲೋನಿನ ಕಸ್ದೀಯ ಪುರುಷರನ್ನು ಬರಮಾಡುವೆನು. ನಾನು ಪೆಕೋದ್, ಷೋಯ ಮತ್ತು ಕೋಯ ಇಲ್ಲಿಂದಲೂ, ಅಶ್ಶೂರದ ಯೌವನಸ್ಥರನ್ನು ಬರಮಾಡುವೆನು. ಅಲ್ಲಿಯ ಎಲ್ಲಾ ಅಧಿಕಾರಿಗಳನ್ನೂ ನಾಯಕರನ್ನೂ ಬರಮಾಡುವೆನು. ಅವರೆಲ್ಲರೂ ಸುಂದರವಾದ ಯುವಕರು, ಅಧಿಕಾರಿಗಳು, ಆರಿಸಲ್ಪಟ್ಟ ಯೋಧರು. ಅಶಬರೂಢರೂ ಆಗಿರುವರು.
ಅವರು ನಿನ್ನ ವಿರುದ್ಧವಾಗಿ ರಥಗಳಲ್ಲಿಯೂ ಅರಸರೂಢರಾಗಿಯೂ ಅಂತರಾಷ್ಟ್ರೀಯ ಸೈನ್ಯವಾಗಿ ಬರುವರು. ಅವರ ಕೈಯಲ್ಲಿ ಬರ್ಜಿ, ಗುರಾಣಿ, ಶಿರಸ್ತ್ರಾಣಗಳಿರುವವು. ಅವರು ನಿನ್ನನ್ನು ಸುತ್ತುವರಿಯುವರು. ನೀನು ನನಗೆ ಏನು ಮಾಡಿದ್ದೀ ಎಂದು ನಾನು ಹೇಳಿದಾಗ ಅವರು ತಮ್ಮ ಇಷ್ಟಪ್ರಕಾರ ನಿನ್ನನ್ನು ಶಿಕ್ಷಿಸುವರು.
ನಾನು ನಿನ್ನ ವಿರುದ್ಧವಾಗಿ ನನ್ನ ಈರ್ಷೆಯ ಕೋಪವನ್ನು ನಿನ್ನ ಮೇಲೆ ಸುರಿಸುವೆನು. ಅವರಿಗೆ ಸಿಟ್ಟು ಬಂದು ನಿನ್ನನ್ನು ಹಿಂಸಿಸುವರು. ನಿನ್ನ ಕಿವಿ ಮೂಗುಗಳನ್ನು ಕತ್ತರಿಸಿಹಾಕುವರು. ತಮ್ಮ ಖಡ್ಗದಿಂದ ನಿನ್ನನ್ನು ಸಂಹರಿಸುವರು. ಆಮೇಲೆ ನಿನ್ನ ಮಕ್ಕಳನ್ನು ತೆಗೆದುಕೊಳ್ಳುವರು ಮತ್ತು ನಿನ್ನಲ್ಲಿ ಉಳಿದಿರುವುದನ್ನೆಲ್ಲ ಸುಟ್ಟುಹಾಕುವರು.
ಬಳಿಕ, ಈಜಿಪ್ಟ್ ದೇಶದಲ್ಲಿ ಆರಂಭವಾದ ನಿನ್ನ ನೀಚತನಕ್ಕೆ ಮತ್ತು ಅನೈತಿಕ ಜೀವಿತಕ್ಕೆ ತಡೆಹಾಕುವೆನು. ನೀನು ನಿನ್ನ ಕಣ್ಣುಗಳನ್ನು ಅವರ ಕಡೆಗೆ ಇನ್ನೆಂದಿಗೂ ತಿರುಗಿಸುವದಿಲ್ಲ. ನೀನು ಅವರನ್ನು ಜ್ಞಾಪಿಸಿಕೊಳ್ಳುವುದಿಲ್ಲ.’ ”
ಆಗ ಅವರು ನಿನ್ನನ್ನು ಎಷ್ಟು ದೆಬಷೀಸುವರೆಂದು ನಿನಗೆ ತೋರಿಸುವರು. ನೀನು ದುಡಿದವುಗಳನ್ನೆಲ್ಲ ಅವರು ಕಿತ್ತುಕೊಳ್ಳುವರು. ನಿನ್ನನ್ನು ಬೆತ್ತಲೆಮಾಡಿ ಬಿಟ್ಟುಬಿಡುವರು. ಜನರು ನಿನ್ನ ಪಾಪಗಳನ್ನು ಪರಿಪೂರ್ಣವಾಗಿ ನೋಡುವರು. ನೀನು ಸೂಳೆಯಂತೆ ವರ್ತಿಸಿದ್ದನ್ನು ಅವರು ನೋಡುವರು. ನಿನ್ನ ನೀಚತನವೂ ನಿನ್ನ ಸೂಳೆತನವೂ
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನೀನು ನಿನ್ನ ಅಕ್ಕನ ಲೋಟದಿಂದ ಕುಡಿಯುವೆ. ಆ ಲೋಟವು ಆಳವಾಗಿಯೂ ಅಗಲವಾಗಿಯೂ ಇದ್ದು ಪೂರ್ತಿ ತುಂಬಿದೆ (ಶಿಕ್ಷೆ). ಜನರು ನಿನ್ನನ್ನು ನೋಡಿ ನಗಾಡುವರು. ನಿನ್ನನ್ನು ಕಂಡು ಹಾಸ್ಯ ಮಾಡುವರು.
ನೀನು ಆ ಲೋಟದಿಂದ ಕುಡಿಯುವೆ. ಕಡೆಯ ತೊಟ್ಟಿನವರೆಗೂ ನೀನು ಕುಡಿಯುವೆ. ನೀನು ಆ ಲೋಟವನ್ನು ಒಡೆದುಹಾಕುವೆ. ನಿನ್ನ ಸ್ತನಗಳನ್ನು ಬಗಿದುಕೊಳ್ಳುವೆ. ಒಡೆಯನೂ ಯೆಹೋವನೂ ಆದ ನಾನು ಇದನ್ನು ಹೇಳುವದರಿಂದ ಇದು ನಡೆಯುವುದು.
“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’ ”
ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನೀನು ಒಹೊಲ ಮತ್ತು ಒಹೊಲೀಬಳನ್ನು ನ್ಯಾಯವಿಚಾರಣೆ ಮಾಡುವಿಯೋ? ಆಗ ನೀನು, ಗಾಬರಿಗೊಳಿಸುವ ಅವರ ದುಷ್ಟತನವನ್ನು ಅವರಿಗೆ ತಿಳಿಸು.
ಅವರು ವ್ಯಭಿಚಾರ ಮಾಡಿದ್ದಾರೆ. ಅವರು ಕೊಲೆ ಮಾಡಿರುತ್ತಾರೆ. ಅವರು ಸೂಳೆಯಂತೆ ವರ್ತಿಸಿದ್ದಾರೆ. ಅವರು ತಮ್ಮ ಹೊಲಸು ವಿಗ್ರಹಗಳೊಂದಿಗೆ ಇರಲು ನನ್ನನ್ನು ತೊರೆದುಬಿಟ್ಟಿದ್ದಾರೆ. ಅವರಲ್ಲಿ ನನ್ನ ಮಕ್ಕಳು ಇದ್ದಾರೆ. ಆದರೆ ಅವರನ್ನು ಬಲವಂತದಿಂದ ಬೆಂಕಿಯ ಮೇಲೆ ದಾಟಿಸಿದರು. ತಮ್ಮ ಹೊಲಸು ವಿಗ್ರಹಗಳಿಗೆ ಆಹಾರ ಕೊಡುವಂತೆ ಅವರು ಹಾಗೆ ಮಾಡಿದರು.
“ಅವರು ದೂರ ಪ್ರಾಂತ್ಯಗಳಿಂದ ಪುರುಷರನ್ನು ಕರಿಸಿದರು. ಅವರಿಗೆ ನೀನು ಸಂದೇಶ ಕಳುಹಿಸಿದೆ. ಅವರು ನಿನ್ನನ್ನು ನೋಡಲು ಬಂದರು. ಅವರಿಗಾಗಿ ನೀನು ಸಾಐನ ಮಾಡಿ, ನಿನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿ, ನಿನ್ನ ಆಭರಣಗಳನ್ನು ಧರಿಸಿಕೊಂಡೆ.
“ನಿಶ್ಚಿಂತೆಯುಳ್ಳ ಗುಂಪಿನ ಆನಂದಪೂರ್ಣವಾದ ಗದ್ದಲವು ಆಕೆಯ ಸುತ್ತಲೂ ಇತ್ತು. ಔತಣಕ್ಕೆ ಅನೇಕರು ಬಂದರು. ಮರುಭೂಮಿಯ ಕಡೆಯಿಂದ ಜನರು ಬರುತ್ತಿರುವಾಗಲೇ ಅಮಲೇರಿಕೊಂಡು ಬಂದರು. ಅವರು ಬಳೆಗಳನ್ನು, ಸುಂದರವಾದ ಕಿರೀಟಗಳನ್ನು ಹೆಂಗಸರಿಗೆ ಕೊಟ್ಟರು.
“ನೀತಿವಂತರು ಅವರನ್ನು ವ್ಯಭಿಚಾರ ಮಾಡಿದ ಮತ್ತು ಕೊಲೆ ಮಾಡಿದ ಅಪರಾಧಿಗಳೆಂದು ತೀರ್ಪು ನೀಡುವರು. ಯಾಕೆಂದರೆ, ಒಹೊಲ ಮತ್ತು ಒಹೊಲೀಬಳ ವ್ಯಭಿಚಾರವನ್ನು ಆಚರಣೆ ಮಾಡುತ್ತಾರೆ ಮತ್ತು ರಕ್ತವು ಅವರ ಕೈಗಳ ಮೇಲಿದೆ.”
ನನ್ನ ಒಡೆಯನಾದ ಯೆಹೋವನು ನನಗೆ ಹೀಗೆ ಹೇಳಿದನು, “ಜನರನ್ನು ಒಟ್ಟುಗೂಡಿಸು. ಅವರು ಒಟ್ಟಾಗಿ ಸೇರಿ ಒಹೊಲ ಮತ್ತು ಒಹೊಲೀಬರನ್ನು ಶಿಕ್ಷಿಸಲಿ. ಆ ಜನರು ಈ ಸ್ತ್ರೀಯರನ್ನು ಶಿಕ್ಷಿಸಿ ಗೇಲಿ ಮಾಡುವರು.
ಆ ಬಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನ್ನು ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನ್ನು ತುಂಡುತುಂಡು ಮಾಡುವರು. ಅವರ ಮಕ್ಕಳನ್ನು ಕೊಂದು ಅವರ ಮನೆಗಳನ್ನು ಸುಟ್ಟುಹಾಕುವರು.
ನಿನ್ನ ನಾಚಿಕೆಕರವಾದ ಕಾರ್ಯಗಳಿಗಾಗಿ ಅವರು ನಿನ್ನನ್ನು ಶಿಕ್ಷಿಸುವರು. ನೀನು ಅಸಹ್ಯವಾದ ವಿಗ್ರಹಗಳನ್ನು ಪೂಜೆಮಾಡಿದ್ದಕ್ಕೆ ಶಿಕ್ಷಿಸಲ್ಪಡುವಿ. ಆಗ ನಾನೇ ಒಡೆಯನೂ ಯೆಹೋವನೂ ಎಂದು ನೀನು ತಿಳಿಯುವಿ.”