1
|
ದೇವಾಲಯದೆದುರು ಎಜ್ರನು ರೋಧಿಸುತ್ತಾ, ದೇವರಿಗೆ ಅಡ್ಡಬಿದ್ದು ಪ್ರಾರ್ಥಿಸುತ್ತಾ ಪಾಪದರಿಕೆ ಮಾಡುತ್ತಾ ಇರುವಾಗ ಅವನ ಸುತ್ತಲೂ ಅನೇಕ ಮಂದಿ ಇಸ್ರೇಲರ ಗಂಡಸರು, ಹೆಂಗಸರು, ಮಕ್ಕಳು ಸೇರಿಬಂದರು. ಅವರೂ ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. |
2
|
ಆಗ ಏಲಾಮನ ಸಂತತಿಯವನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ ಹೀಗಂದನು: “ನಾವು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾವು ಅನ್ಯಜನರೊಂದಿಗೆ ಮದುವೆಯಾಗಿದ್ದೇವೆ. ಹಾಗಿದ್ದರೂ ಇಸ್ರೇಲರಿಗೆ ಒಂದು ನಿರೀಕ್ಷೆ ಇದೆ. |
3
|
ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ. |
4
|
ಎಜ್ರನೇ, ಎದ್ದೇಳು, ಇದು ನಿನ್ನ ಜವಾಬ್ದಾರಿಕೆ. ನಾವು ನಿನ್ನನ್ನು ಬೆಂಬಲಿಸುತ್ತೇವೆ; ಧೈರ್ಯದಿಂದ ಈ ಕೆಲಸವನ್ನು ಪ್ರಾರಂಭಿಸು.” |
5
|
ಎಜ್ರನು ಎದ್ದುನಿಂತು ಮಹಾಯಾಜಕರೂ, ಲೇವಿಯರೂ ಮತ್ತು ಇಸ್ರೇಲಿನ ಜನರೂ ಅವನು ಹೇಳಿದ ಪ್ರಕಾರ ಮಾಡುತ್ತೇವೆ ಎಂಬ ಪ್ರತಿಜ್ಞೆಯನ್ನು ಅವರಿಂದ ತೆಗೆದುಕೊಂಡನು. |
6
|
ಎಜ್ರನು ಅಲ್ಲಿಂದೆದ್ದು ಎಲ್ಯಾಷೀಬನ ಮಗನಾದ ಯೆಹೋಹಾನನ ಕೋಣೆಗೆ ಹೋಗಿ ಅಲ್ಲಿ ಅನ್ನ ನೀರಿಲ್ಲದೆ ದುಃಖತಪ್ತನಾಗಿದ್ದನು. ಯಾಕಂದರೆ ಸೆರೆಯಿಂದ ಜೆರುಸಲೇಮಿಗೆ ಬಂದಿದ್ದ ಯೆಹೂದ್ಯರ ದ್ರೋಹದ ಬಗ್ಗೆ ಅವನು ತುಂಬಾ ದುಃಖಿತನಾಗಿದ್ದನು. |
7
|
ಆಮೇಲೆ ಅವನು ಯೆಹೂದಪ್ರಾಂತ್ಯ ಮತ್ತು ಜೆರುಸಲೇಮಿನಲ್ಲಿರುವ ಎಲ್ಲಾ ಯೆಹೂದ್ಯರಿಗೆ ಸಂದೇಶ ಕಳುಹಿಸಿದನು. ಅದರಲ್ಲಿ, ಸೆರೆಯಿಂದ ಹಿಂದಿರುಗಿದ್ದ ಯೆಹೂದ್ಯರೆಲ್ಲರೂ ಜೆರುಸಲೇಮಿನಲ್ಲಿ ಬಂದು ಸೇರಬೇಕು. |
8
|
ಮೂರು ದಿನಗಳೊಳಗೆ ಯಾರಾದರೂ ಬಾರದೆ ಹೋದಲ್ಲಿ ಅವರು ತಮ್ಮ ಆಸ್ತಿಯನ್ನು ಕಳೆದುಕೊಳ್ಳುವರು. ಈ ತೀರ್ಮಾನವನ್ನು ಪ್ರಮುಖರೂ ಅಧಿಕಾರಿಗಳೂ ಮಾಡಿದ್ದಾರೆ; ಆ ಮನುಷ್ಯನು ತಾನು ವಾಸಮಾಡುವ ಜನರ ಅನ್ಯೋನ್ಯತೆಯಿಂದ ತೆಗೆಯಲ್ಪಡುವನು. |
9
|
ಮೂರು ದಿನಗಳೊಳಗೆ ಯೆಹೂದ ಮತ್ತು ಬೆನ್ಯಾಮೀನ್ ಕುಲಗಳವರಿಂದ ಎಲ್ಲಾ ಗಂಡಸರು ಒಂಭತ್ತನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಜೆರುಸಲೇಮಿನ ದೇವಾಲಯದ ಅಂಗಳಕ್ಕೆ ಬಂದು ಸೇರಿದರು. ನಡೆಯಲಿಕ್ಕಿರುವ ಕೂಟದ ಉದ್ದೇಶದಿಂದಲೂ ಆ ದಿವಸ ಬಂದಿದ್ದ ಮಳೆಯ ದೆಸೆಯಿಂದಲೂ ನೆರೆದಿದ್ದ ಜನರು ನಡುಗುತ್ತಿದ್ದರು. |
10
|
ಆಗ ಎಜ್ರನು ಎದ್ದುನಿಂತು ಜನರನ್ನುದ್ದೇಶಿಸಿ ಹೇಳಿದ್ದೇನಂದರೆ: “ನೀವು ದೇವರಿಗೆ ವಿಧೇಯರಾಗಿರಲಿಲ್ಲ. ಅನ್ಯಮತದ ಹೆಂಗಸರನ್ನು ನೀವು ಮದುವೆಯಾಗಿರುತ್ತೀರಿ. ಹೀಗೆ ಇಸ್ರೇಲಿನ ಪಾಪವು ಹೆಚ್ಚುವಂತೆ ನೀವು ಮಾಡಿದಿರಿ. |
11
|
ಈಗ ನೀವು ಯೆಹೋವನಿಗೆ ವಿರೋಧವಾಗಿ ಪಾಪ ಮಾಡಿರುವುದಾಗಿ ಅರಿಕೆ ಮಾಡಬೇಕು. ಆತನೇ ನಮ್ಮ ಪೂರ್ವಿಕರ ದೇವರಾದ ಯೆಹೋವನು. ಆತನ ಆಜ್ಞೆಗಳಿಗೆ ನೀವು ವಿಧೇಯರಾಗಬೇಕು. ನಿಮ್ಮ ಅನ್ಯಜಾತಿಯ ಹೆಂಡತಿಯರಿಂದಲೂ ನಿಮ್ಮ ಸುತ್ತಲು ವಾಸಿಸುವ ಅನ್ಯ ಜನಾಂಗದವರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ.” |
12
|
ಆಗ ಅಲ್ಲಿ ನೆರೆದುಬಂದವರೆಲ್ಲರೂ ಗಟ್ಟಿಯಾಗಿ ಎಜ್ರನಿಗೆ ಉತ್ತರಿಸುತ್ತಾ, “ಎಜ್ರನೇ, ನೀನು ಸರಿಯಾಗಿ ಹೇಳಿರುವೆ! ನೀನು ಹೇಳಿದಂತೆಯೇ ನಾವು ಮಾಡಬೇಕು. |
13
|
ಆದರೆ ಇಲ್ಲಿ ಹೆಚ್ಚು ಜನರು ಸೇರಿ ಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪ ಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ. |
14
|
ಈ ಕೂಟದಲ್ಲಿ ನಮ್ಮ ಹಿರಿಯರು, ಪ್ರಧಾನರು ಒಂದು ತೀರ್ಮಾನಕ್ಕೆ ಬರಲಿ. ಆಮೇಲೆ ನಮ್ಮನಮ್ಮ ಊರಿನಲ್ಲಿ ಅನ್ಯಸ್ತ್ರೀಯರನ್ನು ಮದುವೆ ಆದವರು ತಮ್ಮ ಪ್ರಧಾನರೊಂದಿಗೆ ಒಂದು ನೇಮಿತ ಸಮಯದಲ್ಲಿ ಇಲ್ಲಿಗೆ ಬರಲಿ. ಆಗ ದೇವರು ನಮ್ಮ ಮೇಲಿರುವ ತನ್ನ ಕೋಪವನ್ನು ನಿವಾರಿಸುವನು” ಎಂದು ಹೇಳಿದರು. |
15
|
ಕೆಲವೇ ಮಂದಿ ಈ ಯೋಜನೆಗೆ ಒಪ್ಪಲಿಲ್ಲ. ಅವರಲ್ಲಿ ಅಸಾಹೇಲನ ಮಗನಾದ ಯೋನಾತಾನನೂ, ತಿಕ್ವನ ಮಗನಾದ ಯೆಹ್ಜೆಯನೂ ಇದ್ದರು. ಮೆಷುಲ್ಲಾಮ್ ಮತ್ತು ಲೇವಿಯನಾದ ಶಬ್ಚೆತೈ ಸಹ ಈ ಯೋಜನೆಗೆ ವಿರುದ್ಧವಾಗಿದ್ದರು. |
16
|
ಜೆರುಸಲೇಮಿಗೆ ಹಿಂತಿರುಗಿಬಂದ ಇಸ್ರೇಲರು ಈ ಯೋಜನೆಯನ್ನು ಒಪ್ಪಿದ ಬಳಿಕ ಎಜ್ರನು ಅವರವರ ವಂಶದ ನಾಯಕರನ್ನು ಆರಿಸಿದನು. ಒಂದೊಂದು ವಂಶಕ್ಕೆ ಒಬ್ಬೊಬ್ಬ ನಾಯಕನನ್ನು ಆರಿಸಿಕೊಂಡನು. ಪ್ರತಿಯೊಬ್ಬನು ಹೆಸರಿಗನುಸಾರವಾಗಿ ಆರಿಸಲ್ಪಟ್ಟನು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಆ ನಾಯಕರೆಲ್ಲಾ ಒಟ್ಟಾಗಿಸೇರಿ ಒಂದೊಂದೇ ಪ್ರಕರಣಗಳನ್ನು ವಿಚಾರಿಸಿದರು. |
17
|
ಮೊದಲನೇ ತಿಂಗಳಿನ ಮೊದಲನೆಯ ದಿನದಲ್ಲಿ ಎಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರ ವಿಷಯವನ್ನು ಪರಿಶೀಲಿಸುವ ಕಾರ್ಯವನ್ನು ಮುಗಿಸಿದರು. |
18
|
ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ. |
19
|
ಇವರೆಲ್ಲಾ ತಮ್ಮ ಹೆಂಡತಿಯರನ್ನು ಬಿಟ್ಟುಬಿಡಬೇಕೆಂದು ತೀರ್ಮಾನಿಸಿದರು. ಇವರಲ್ಲಿ ಪ್ರತಿಯೊಬ್ಬರು ದೋಷಪರಿಹಾರಕ್ಕಾಗಿ ಹಿಂಡಿನ ಟಗರನ್ನು ಯಜ್ಞ ಮಾಡಿದರು. |
20
|
ಇಮ್ಮೇರನ ಸಂತತಿಯವರಲ್ಲಿ ಹನಾನೀ, ಜೆಬದ. |
21
|
ಹಾರೀಮನ ಸಂತತಿಯವರಲ್ಲಿ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್ ಮತ್ತು ಉಜ್ಜೀಯ. |
22
|
ಪಷ್ಹೂರನ ಸಂತತಿಯವರಲ್ಲಿ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ. |
23
|
ಲೇವಿಯವರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟ, ಪೆತಹ್ಯ, ಯೆಹೂದ ಮತ್ತು ಎಲೀಯೆಜೆರ್, ಇವರೆಲ್ಲಾ ಅನ್ಯಸ್ತ್ರೀಯರನ್ನು ವಿವಾಹ ಮಾಡಿಕೊಂಡಿದ್ದರು. |
24
|
ಗಾಯಕರಲ್ಲಿ ಎಲ್ಯಾಷೀಬ್ ಎಂಬವನು ಅನ್ಯಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ದ್ವಾರಪಾಲಕರಲ್ಲಿ ಶಲ್ಲೂಮ್, ಟೆಲೆಮ್ ಮತ್ತು ಊರೀ. |
25
|
ಇಸ್ರೇಲ್ ಜನಾಂಗದವರಿಂದ ಪರೋಷನ ಸಂತಾನದಲ್ಲಿ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ ಮತ್ತು ಬೆನಾಯ. |
26
|
ಏಲಾಮನ ಸಂತತಿಯವರಲ್ಲಿ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಮತ್ತು ಏಲೀಯ. |
27
|
ಜತ್ತೂವಿನ ಸಂತತಿಯವರಲ್ಲಿ ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬಾದ್, ಮತ್ತು ಅಜೀಚಾ. |
28
|
ಬೇಬೈಯ ಸಂತತಿಯಿಂದ ಯೆಹೋಹಾನಾನ್, ಹನನ್ಯ, ಜಬ್ಬೈ ಮತ್ತು ಅತ್ಲೈ. |
29
|
ಬಾನೀ ಸಂತತಿಯಿಂದ ಮೆಷುಲ್ಲಾಮ್, ಮಲ್ಲೂಕ್, ಆದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್. |
30
|
ಪಹತ್ ಮೋವಾಬನ ಸಂತತಿಯಿಂದ ಆದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಮತ್ತು ಮನಸ್ಸೆ. |
31
|
ಹಾರೀಮ್ನ ಸಂತತಿಯಿಂದ ಎಲೀಯೆಜೆರ್, ಇಷ್ಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್, |
32
|
ಬೆನ್ಯಾಮೀನ್, ಮಲ್ಲೂಕ್ ಮತ್ತು ಶೆಮರ್ಯ. |
33
|
ಹಾಷುಮನ ಸಂತತಿಯಿಂದ ಮತ್ತೆನೈ, ಮತ್ತತ್ತ, ಜಾಬಾದ್, ಎಲಿಫೆಲೆಟ್, ಯೆರೇಮೈ, ಮನಸ್ಸೆ ಮತ್ತು ಶಿಮ್ಮೀ. |
34
|
ಬಾನೀಯ ಸಂತತಿಯಿಂದ ಮಾದೈ, ಅಮ್ರಾಮ್, ಊವೇಲ್, |
36
|
ವನ್ಯಾಹ, ಮೆರೇಮೊತ್, ಎಲ್ಯಾಷೀಬ್, |
37
|
ಮತ್ತನ್ಯ, ಮತ್ತನೈ, ಮತ್ತು ಯಾಸೈ. |
38
|
ಬಿನ್ನೂಯಿಯ ಸಂತತಿಯವರಿಂದ ಯಾರೆಂದರೆ: ಶಿಮ್ಮೀ, |
39
|
ಶೆಲೆಮ್ಯ, ನಾತಾನ್, ಆದಾಯ, |
41
|
ಅಜರೇಲ್, ಶೆಲೆಮ್ಯ, ಶೆಮರ್ಯ, |
42
|
ಶಲ್ಲೂಮ್, ಅಮರ್ಯ ಮತ್ತು ಯೋಸೇಫ್. |
43
|
ನೆಬೋನ ಸಂತತಿಯಿಂದ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್ ಮತ್ತು ಬೆನಾಯ. |
44
|
ಇವರೆಲ್ಲಾ ಅನ್ಯಸ್ತ್ರೀಯರನ್ನು ಮದುವೆಯಾದವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು. |
Ezra 10:1 Kannada Language Bible Words basic statistical display
COMING SOON ...