ಸೆರೆಯಿಂದ ಮರಳಿಬಂದ ಸಂಸ್ಥಾನದವರ ವಿವರ, ಬಹಳ ವರುಷಗಳ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದಿದ್ದನು. ಇವರು ಜೆರುಸಲೇಮಿಗೆ ಹಿಂತಿರುಗಿ ಬಂದು ಎಲ್ಲರೂ ತಮ್ಮತಮ್ಮ ಸ್ವಂತ ಊರುಗಳಿಗೆ ಹೊರಟು ಹೋದರು.
ಯಾಜಕರಾದ ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತತಿಯವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)
ಊರೀಮ್ ತುಮ್ಮೀಮ್ಗಳ ಮೂಲಕ ದೇವರ ಚಿತ್ತವನ್ನು ತಿಳಿಯಲು ಶಕ್ತನಾದ ಯಾಜಕನು ದೊರಕುವ ತನಕ ಇವರು ದೇವರಿಗೆ ಅರ್ಪಿಸಿದ್ದ ಪರಿಶುದ್ಧ ಆಹಾರವನ್ನು ತಿನ್ನಬಾರದೆಂದು ದೇಶಾಧಿಪತಿಯು ಆಜ್ಞಾಪಿಸಿದನು.
ಈ ಗುಂಪು ಜೆರುಸಲೇಮಿನಲ್ಲಿದ್ದ ದೇವಾಲಯದ ಬಳಿ ಬಂದಾಗ ಆ ದೇವಾಲಯವನ್ನು ಮತ್ತೆ ನಿರ್ಮಿಸಲು ಕುಟುಂಬದ ನಾಯಕರುಗಳು ತಮ್ಮತಮ್ಮ ಕಾಣಿಕೆಗಳನ್ನು ಕೊಟ್ಟರು. ಕೆಡವಲ್ಪಟ್ಟಿದ್ದ ದೇವಾಲಯದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ಕಟ್ಟಲು ಪ್ರಾರಂಭಿಸುವರು.
ದೇವಾಯಲ ಕಟ್ಟಲು ಅವರು ತಮ್ಮಿಂದ ಸಾಧ್ಯವಾದಷ್ಟು ಕಾಣಿಕೆಗಳನ್ನು ಕೊಟ್ಟರು. ಒಟ್ಟು ಐನೂರು ಕಿಲೋಗ್ರಾಂ ಬಂಗಾರ, ಮೂರು ಸಾವಿರ ಕಿಲೋಗ್ರಾಂ ಬೆಳ್ಳಿ, ನೂರು ಯಾಜಕರು ಧರಿಸಬೇಕಾದ ಬಟ್ಟೆಗಳನ್ನು ದಾನ ಮಾಡಿದರು.
ಅವರಲ್ಲಿದ್ದ ಯಾಜಕರು, ಲೇವಿಯರು ಮತ್ತು ಇನ್ನಿತರರು ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆಲೆಸಿದರು. ಇವರೊಳಗೆ ಗಾಯಕರೂ ದ್ವಾರಪಾಲಕರೂ ದೇವಾಲಯದ ಸೇವಕರೂ ಇದ್ದರು. ಉಳಿದ ಇಸ್ರೇಲ್ ಜನರು ತಮ್ಮತಮ್ಮ ಊರುಗಳಲ್ಲಿ ವಾಸಿಸಿದರು.