ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು.
ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.
ಯೆಹೋವನು ಇಡೀ ಲೋಕದ ಭಾಷೆಯನ್ನು ತಾರುಮಾರು ಮಾಡಿದ್ದು ಆ ಸ್ಥಳದಲ್ಲೇ. ಆದ್ದರಿಂದ ಆ ಸ್ಥಳಕ್ಕೆ ಬಾಬಿಲೋನ್ ಎಂದು ಹೆಸರಾಯಿತು. ಹೀಗೆ ಯೆಹೋವನು ಜನರನ್ನು ಆ ಸ್ಥಳದಿಂದ ಭೂಮಿಯಲ್ಲೆಲ್ಲಾ ಚದರಿಸಿಬಿಟ್ಟನು.
ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು. ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.
ತೆರಹನು ತನ್ನ ಕುಟುಂಬವನ್ನು ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಸ್ವಂತ ಸ್ಥಳದಿಂದ ಹೊರಟು ಕಾನಾನಿಗೆ ಪ್ರಯಾಣ ಮಾಡಿದನು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನಿಗೆ ಮಗನೂ ಆಗಿರುವ ಲೋಟನನ್ನೂ ಮತ್ತು ತನಗೆ ಸೊಸೆಯೂ ಅಬ್ರಾಮನ ಹೆಂಡತಿಯೂ ಆಗಿರುವ ಸಾರಯಳನ್ನೂ ಕರೆದುಕೊಂಡು ಹಾರಾನ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸಲು ತೀರ್ಮಾನಿಸಿದನು.