ಅಬ್ರಹಾಮನು ಮಮ್ರೆಯಲ್ಲಿದ್ದ ಓಕ್ ಮರಗಳ ತೋಪಿನ ಸಮೀಪದಲ್ಲಿ ವಾಸಿಸುತ್ತಿದ್ದಾಗ ಯೆಹೋವನು ಅವನಿಗೆ ಕಾಣಿಸಿಕೊಂಡನು. ಅಂದು ಬಿಸಿಲಿನ ತಾಪದಿಂದಾಗಿ ಅಬ್ರಹಾಮನು ತನ್ನ ಗುಡಾರದ ಬಾಗಿಲ ಬಳಿ ಕುಳಿತಿದ್ದನು.
ನಾನು ನಿಮಗೆ ಊಟವನ್ನು ತಂದುಕೊಡುವೆನು. ನೀವು ಬೇಕಾದಷ್ಟು ಊಟ ಮಾಡಿದ ನಂತರ ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು” ಎಂದು ಹೇಳಿದನು. ಆ ಮೂವರು ಪುರಷರು, “ಸರಿ, ನೀನು ಹೇಳಿದಂತೆಯೇ ಮಾಡು” ಅಂದರು.
ಅಬ್ರಹಾಮನು ಆ ಮೂವರಿಗೆ ಮಾಂಸದ ಅಡಿಗೆಯನ್ನು ಬಡಿಸಿದನು. ಇದಲ್ಲದೆ ಅವನು ಹಾಲನ್ನೂ ಬೆಣ್ಣೆಯನ್ನೂ ಕೊಟ್ಟನು. ಆ ಮೂವರು ಊಟ ಮಾಡುವಾಗ ಅಬ್ರಹಾಮನು ಅವರ ಸಮೀಪದಲ್ಲಿ ಮರದ ಕೆಳಗೆ ನಿಂತುಕೊಂಡಿದ್ದನು.
ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಆ ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಈ ಸಂಗತಿಯೂ ಕೇಳಿಸಿತು.
ನಾನು ಅವನೊಡನೆ ವಿಶೇಷವಾದ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ. ಅವನು ತನ್ನ ಮಕ್ಕಳಿಗೂ ಸಂತತಿಯವರಿಗೂ ನನಗೆ ವಿಧೇಯರಾಗುವಂತೆ ಮತ್ತು ನ್ಯಾಯನೀತಿಗಳಿಂದ ಜೀವಿಸುವಂತೆ ಆಜ್ಞಾಪಿಸಲೆಂದು ನಾನು ಅವನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡೆನು. ಅವರು ಹೀಗೆ ಜೀವಿಸಿದರೆ, ನನ್ನ ವಾಗ್ದಾನಗಳನ್ನೆಲ್ಲಾ ನೆರವೇರಿಸುವೆನು.”
ಒಂದುವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ? ನೀನು ಆ ಪಟ್ಟಣವನ್ನು ನಾಶಮಾಡುವಿಯೋ? ಖಂಡಿತವಾಗಿಯೂ ಇಲ್ಲ! ಅಲ್ಲಿ ಜೀವಿಸುತ್ತಿರುವ ಐವತ್ತು ಮಂದಿ ನೀತಿವಂತರಿಗಾಗಿ ನೀನು ಆ ಪಟ್ಟಣವನ್ನು ಉಳಿಸಿ ಕಾಪಾಡುವೆ.
ಖಂಡಿತವಾಗಿಯೂ ನೀನು ಆ ಪಟ್ಟಣವನ್ನು ನಾಶಮಾಡುವುದಿಲ್ಲ. ಕೆಟ್ಟವರನ್ನು ಕೊಲ್ಲುವುದಕ್ಕಾಗಿ ನೀನು ಐವತ್ತು ಮಂದಿ ನೀತಿವಂತರನ್ನು ಕೊಲ್ಲುವುದಿಲ್ಲ. ಒಂದುವೇಳೆ ನೀನು ಕೊಂದರೆ, ಒಳ್ಳೆಯವರೂ ಕೆಟ್ಟವರೂ ಸರಿಸಮಾನರಾಗುವರು. ಅವರಿಬ್ಬರೂ ದಂಡನೆಗೆ ಗುರಿಯಾಗುವರು. ನೀನು ಲೋಕದವರಿಗೆಲ್ಲ ನ್ಯಾಯಾಧಿಪತಿ. ನೀನು ನ್ಯಾಯವಾದದ್ದನ್ನೇ ಮಾಡುವೆ ಎಂದು ನನಗೆ ಗೊತ್ತಿದೆ” ಎಂದು ಹೇಳಿದನು.
ಒಂದುವೇಳೆ ಐದು ಮಂದಿ ಕಡಿಮೆಯಾಗಿದ್ದು ನಲವತ್ತೈದು ಮಂದಿ ಮಾತ್ರ ನೀತಿವಂತರಿದ್ದರೆ ಆ ಪಟ್ಟಣವನ್ನು ನಾಶಮಾಡುವಿಯಾ?” ಎಂದು ಕೇಳಿದನು. ಅದಕ್ಕೆ ಯೆಹೋವನು ಅವನಿಗೆ, “ನಾನು ನಲವತ್ತೈದು ಮಂದಿ ನೀತಿವಂತರನ್ನು ಕಂಡರೂ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
ಮತ್ತೆ ಅಬ್ರಹಾಮನು ದೇವರಿಗೆ, “ಕೇವಲ ನಲವತ್ತು ಮಂದಿ ನೀತಿವಂತರನ್ನು ಕಂಡರೆ, ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಲವತ್ತು ಮಂದಿ ನೀತಿವಂತರನ್ನು ಕಂಡರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
ಆಮೇಲೆ ಅಬ್ರಹಾಮನು, “ಯೆಹೋವನೇ, ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಈ ಪ್ರಶ್ನೆಯನ್ನೂ ಕೇಳುವೆ: ಆ ಪಟ್ಟಣದಲ್ಲಿ ಕೇವಲ ಮೂವತ್ತು ಮಂದಿ ನೀತಿವಂತರಿದ್ದರೆ ನೀನು ಆ ಪಟ್ಟಣವನ್ನು ನಾಶಮಾಡುವೆಯಾ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಮೂವತ್ತು ಮಂದಿ ನೀತಿವಂತರಿದ್ದರೂ ನಾನು ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಅಂದನು.
ಆಮೇಲೆ ಅಬ್ರಹಾಮನು, “ನನ್ನ ಯೆಹೋವನು ಏನೂ ತಿಳಿದುಕೊಳ್ಳದಿರಲಿ. ನಾನು ಮತ್ತೊಂದು ಪ್ರಶ್ನೆ ಕೇಳುವೆ. ಅಲ್ಲಿ ಇಪ್ಪತ್ತು ಮಂದಿ ನೀತಿವಂತರಿದ್ದರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ಅಲ್ಲಿ ಇಪ್ಪತ್ತು ಮಂದಿ ನೀತಿವಂತರನ್ನು ಕಂಡರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ” ಎಂದು ಹೇಳಿದನು.
ಆಮೇಲೆ ಅಬ್ರಹಾಮನು, “ಯೆಹೋವನೇ, ದಯಮಾಡಿ ನನ್ನ ಮೇಲೆ ಸಿಟ್ಟುಗೊಳ್ಳಬೇಡ. ಇದೊಂದು ಸಲ ಮಾತ್ರ ಪ್ರಶ್ನೆ ಕೇಳುವೆ. ಹತ್ತು ಮಂದಿ ನೀತಿವಂತರನ್ನು ಕಂಡರೆ ಏನು ಮಾಡುವೆ?” ಎಂದು ಕೇಳಿದನು. ಯೆಹೋವನು ಅವನಿಗೆ, “ನಾನು ಆ ಪಟ್ಟಣದಲ್ಲಿ ಹತ್ತು ಮಂದಿ ನೀತಿವಂತರನ್ನು ಕಂಡರೂ, ಅದನ್ನು ನಾಶಮಾಡುವುದಿಲ್ಲ” ಅಂದನು.