ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕನಾದ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.
ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.
ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.
ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.
ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.
(23-24) ರಾಹೇಲಳು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ರಾಹೇಲಳು, “ದೇವರು ನನಗಿದ್ದ ಅವಮಾನವನ್ನು ತೆಗೆದುಹಾಕಿದ್ದಾನೆ; ನನಗೆ ಒಬ್ಬ ಮಗನನ್ನು ಕೊಟ್ಟಿದ್ದಾನೆ” ಎಂದು ಹೇಳಿ ಆ ಮಗುವಿಗೆ ಯೋಸೇಫ ಎಂದು ಹೆಸರಿಟ್ಟಳು.
ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.
ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.
ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು. ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.
ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.
ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.
ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.
ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು.
ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು.