ಒಂದು ದಿನ ಲಾಬಾನನ ಗಂಡುಮಕ್ಕಳು ಮಾತಾಡುತ್ತಿರುವುದನ್ನು ಯಾಕೋಬನು ಕೇಳಿಸಿಕೊಂಡನು. ಅವರು, “ನಮ್ಮ ತಂದೆ ಹೊಂದಿದ್ದ ಪ್ರತಿಯೊಂದನ್ನೂ ಯಾಕೋಬನು ತೆಗೆದುಕೊಂಡು ಐಶ್ವರ್ಯವಂತನಾಗಿದ್ದಾನೆ; ಅವನು ನಮ್ಮ ತಂದೆಯ ಐಶ್ವರ್ಯವನ್ನೆಲ್ಲ ತೆಗೆದುಕೊಂಡಿದ್ದಾನೆ” ಎಂದು ಹೇಳುತ್ತಿದ್ದರು.
ಯಾಕೋಬನು, ರಾಹೇಲಳಿಗೆ ಮತ್ತು ಲೇಯಾಳಿಗೆ, “ನಿಮ್ಮ ತಂದೆ ನನ್ನ ಮೇಲೆ ಕೋಪದಿಂದಿರುವುದನ್ನು ನಾನು ಗಮನಿಸಿದ್ದೇನೆ. ಮೊದಲು ಅವನು ನನ್ನೊಂದಿಗೆ ಸ್ನೇಹದಿಂದಿದ್ದನು. ಆದರೆ ಈಗ ಅವನು ಸ್ನೇಹದಿಂದಿಲ್ಲ. ಆದರೆ ನನ್ನ ತಂದೆಯ ದೇವರು ನನ್ನೊಂದಿಗಿದ್ದಾನೆ.
“ಒಂದು ಸಲ ಲಾಬಾನನು, ‘ಚುಕ್ಕೆಯಿರುವ ಆಡುಕುರಿಗಳನ್ನೆಲ್ಲ ನೀನು ಇಟ್ಟುಕೊಳ್ಳಬಹುದು. ಇದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ ಎಲ್ಲಾ ಆಡುಕುರಿಗಳು ಚುಕ್ಕೆಯಿರುವ ಮರಿಗಳನ್ನು ಈಯ್ದವು. ಆದ್ದರಿಂದ ಅವೆಲ್ಲ ನನ್ನದಾದವು. ಆಗ ಲಾಬಾನನು, ‘ನಾನು ಚುಕ್ಕೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳುವೆ. ನೀನು ಮಚ್ಚೆಯಿರುವ ಆಡುಕುರಿಗಳನ್ನು ತೆಗೆದುಕೊಳ್ಳಬಹುದು. ಅದೇ ನಿನಗೆ ಸಂಬಳ’ ಎಂದು ಹೇಳಿದನು. ಅವನು ಹೀಗೆ ಹೇಳಿದ ಮೇಲೆ, ಎಲ್ಲಾ ಆಡುಕುರಿಗಳು ಮಚ್ಚೆಯಿರುವ ಮರಿಗಳನ್ನು ಈಯ್ದವು.
ಬೇತೇಲಿನಲ್ಲಿ ನಿನ್ನ ಬಳಿಗೆ ಬಂದಿದ್ದ ದೇವರು ನಾನೇ. ಆ ಸ್ಥಳದಲ್ಲಿ ನೀನು ಒಂದು ಯಜ್ಞವೇದಿಕೆಯನ್ನು ಕಟ್ಟಿದೆ. ನೀನು ಯಜ್ಞವೇದಿಕೆಯ ಮೇಲೆ ಆಲಿವ್ ಎಣ್ಣೆಯನ್ನು ಸುರಿದು ನನಗೆ ಒಂದು ಪ್ರಮಾಣವನ್ನು ಮಾಡಿದೆ. ಈಗ ನೀನು ನಿನ್ನ ಹುಟ್ಟುಸ್ಥಳಕ್ಕೆ ಹಿಂತಿರುಗಿ ಹೋಗಬೇಕೆಂಬುದು ನನ್ನ ಅಪೇಕ್ಷೆ’ ಎಂದು ತಿಳಿಸಿದನು” ಎಂಬುದಾಗಿ ಹೇಳಿದನು.
ನಂತರ ಅವರೆಲ್ಲರೂ, ಯಾಕೋಬನ ತಂದೆ ವಾಸಿಸಿದ ಸ್ಥಳವಾದ ಕಾನಾನಿಗೆ ಮರಳಿ ಪ್ರಯಾಣ ಬೆಳೆಸಿದರು. ಯಾಕೋಬನು ಹೊಂದಿದ್ದ ಎಲ್ಲಾ ಆಡುಕುರಿಗಳ ಮಂದೆಗಳು ಅವರ ಮುಂದೆ ನಡೆದವು. ಅವನು ಪದ್ದನ್ಅರಾಮಿನಲ್ಲಿದ್ದಾಗ ಹೊಂದಿಕೊಂಡಿದ್ದ ಪ್ರತಿಯೊಂದನ್ನೂ ಅವರು ತೆಗೆದುಕೊಂಡು ಹೋದರು.
ಯಾಕೋಬನು ತನ್ನ ಕುಟುಂಬವನ್ನು ಕರೆದುಕೊಂಡು, ತನ್ನ ಪ್ರತಿಯೊಂದು ಸ್ವತ್ತನ್ನು ತೆಗೆದುಕೊಂಡು ಬೇಗನೆ ಅಲ್ಲಿಂದ ಹೊರಟನು. ಅವರು ಯೂಫ್ರೇಟೀಸ್ ಮಹಾನದಿಯನ್ನು ದಾಟಿ, ಬೆಟ್ಟಗಳ ಸೀಮೆಯಿಂದ ಗಿಲ್ಯಾದ್ ದೇಶದ ಕಡೆಗೆ ಪ್ರಯಾಣ ಮಾಡಿದರು.
ಮರುದಿನ ಮುಂಜಾನೆ ಲಾಬಾನನು ಯಾಕೋಬನನ್ನು ಸಂಧಿಸಿದನು. ಯಾಕೋಬನು ಬೆಟ್ಟದ ಮೇಲೆ ಪಾಳೆಯ ಮಾಡಿಕೊಂಡಿದ್ದನು. ಆದ್ದರಿಂದ ಲಾಬಾನನು ಮತ್ತು ಅವನ ಜನರೆಲ್ಲರು ಬೆಟ್ಟದ ಸೀಮೆಯಾದ ಗಿಲ್ಯಾದಿನಲ್ಲಿ ಪಾಳೆಯ ಮಾಡಿಕೊಂಡರು.
ನೀನು ನಿನ್ನ ಮನೆಗೆ ಹಿಂತಿರುಗಿ ಹೋಗಬೇಕೆಂಬುದು ನಿನ್ನ ಅಪೇಕ್ಷೆ ಎಂದು ನನಗೆ ತಿಳಿದಿದೆ. ಆದ್ದರಿಂದಲೇ ನೀನು ಹೊರಟು ಬಂದೆ. ಆದರೆ ನೀನು ನನ್ನ ಮನೆಯಿಂದ ವಿಗ್ರಹಗಳನ್ನು ಕದ್ದುಕೊಂಡು ಬಂದದ್ದೇಕೆ?” ಎಂದು ಹೇಳಿದನು.
ಆದರೆ ನಾನು ನಿನ್ನ ವಿಗ್ರಹಗಳನ್ನು ಕದ್ದುಕೊಳ್ಳಲಿಲ್ಲ. ನಿನ್ನ ವಿಗ್ರಹಗಳನ್ನು ತೆಗೆದುಕೊಂಡಿರುವ ಯಾವ ವ್ಯಕ್ತಿಯನ್ನಾದರೂ ಇಲ್ಲಿ ಕಂಡರೆ ಆ ವ್ಯಕ್ತಿಯನ್ನು ಕೊಲ್ಲಲಾಗುವುದು. ನಿನ್ನ ಜನರೇ ನನಗೆ ಸಾಕ್ಷಿಗಳು. ನಿನಗೆ ಸೇರಿದ ಏನಾದರೂ ಇದೆಯೋ ಎಂದು ನೀನೇ ನೋಡಬಹುದು. ನಿನಗೆ ಸೇರಿದ ಯಾವುದಾದರೂ ಇದ್ದರೆ ತೆಗೆದುಕೊ” ಎಂದು ಹೇಳಿದನು. (ಲಾಬಾನನ ವಿಗ್ರಹಗಳನ್ನು ರಾಹೇಲಳು ಕದ್ದುಕೊಂಡಿರುವುದು ಯಾಕೋಬನಿಗೆ ತಿಳಿದಿರಲಿಲ್ಲ.)
ಆದ್ದರಿಂದ ಲಾಬಾನನು ಹೋಗಿ ಯಾಕೋಬನ ಪಾಳೆಯದಲ್ಲಿಯೂ ಗುಡಾರದಲ್ಲಿಯೂ ಲೇಯಳ ಗುಡಾರದಲ್ಲಿಯೂ ಹುಡುಕಿದನು. ಬಳಿಕ ಇಬ್ಬರು ಸೇವಕಿಯರಿದ್ದ ಗುಡಾರಕ್ಕೂ ಹೋಗಿ ಹುಡುಕಿದನು; ಅಲ್ಲಿಯೂ ಅವನಿಗೆ ಅವನ ವಿಗ್ರಹಗಳು ಸಿಕ್ಕಲಿಲ್ಲ. ಅಲ್ಲಿಂದ ರಾಹೇಲಳ ಗುಡಾರಕ್ಕೆ ಹೋದನು.
ಆಗ ರಾಹೇಲಳು ತನ್ನ ತಂದೆಗೆ, “ಅಪ್ಪಾ, ನನ್ನ ಮೇಲೆ ಕೋಪಗೊಳ್ಳಬೇಡ. ನಿನ್ನ ಮುಂದೆ ನಿಂತುಕೊಳ್ಳಲು ನನಗೆ ಸಾಧ್ಯವಿಲ್ಲ. ಯಾಕೆಂದರೆ ನಾನು ಮುಟ್ಟಾಗಿದ್ದೇನೆ” ಎಂದು ಹೇಳಿದಳು. ಲಾಬಾನನು ಪಾಳೆಯದಲ್ಲೆಲ್ಲಾ ಹುಡುಕಿದರೂ ತನ್ನ ವಿಗ್ರಹಗಳನ್ನು ಕಂಡುಕೊಳ್ಳಲಾಗಲಿಲ್ಲ.
ನಾನು ಹೊಂದಿರುವ ಪ್ರತಿಯೊಂದನ್ನು ನೀನು ಪರೀಕ್ಷಿಸಿ ನೋಡಿದರೂ ನಿನಗೆ ಸೇರಿರುವ ಯಾವುದೂ ನಿನಗೆ ಸಿಕ್ಕಲಿಲ್ಲ. ನಿನಗೆ ಅಂಥದ್ದೇನಾದರೂ ಸಿಕ್ಕಿದರೆ ತೋರಿಸು. ನನ್ನ ಜನರಿಗೆಲ್ಲ ಕಾಣಿಸುವಂತೆ ಅದನ್ನು ಇಲ್ಲಿಡು. ನಮ್ಮಲ್ಲಿ ಯಾರು ಸರಿಯಾದವರೆಂದು ನಮ್ಮ ಜನರೇ ನಿರ್ಣಯಿಸಲಿ.
ಕ್ರೂರ ಮೃಗಗಳು ಕುರಿಯನ್ನು ಕೊಂದಾಗಲೆಲ್ಲಾ ಅದಕ್ಕೆ ಬದಲಾಗಿ ನನ್ನ ಕುರಿಯನ್ನು ನಿನಗೆ ಕೊಟ್ಟೆನು. ಸತ್ತುಹೋದ ಪಶುವನ್ನು ನಿನ್ನ ಮುಂದೆ ತಂದು, ‘ಇದು ನನ್ನ ತಪ್ಪಲ್ಲ’ ಎಂದು ನಿನಗೆ ಹೇಳಲಿಲ್ಲ. ಕಳುವು ಹಗಲಲ್ಲಾಗಿದ್ದರೂ ರಾತ್ರಿಯಲ್ಲಾಗಿದ್ದರೂ ಕಳುವಾದ ಪಶುಗಳಿಗೆ ಪ್ರತಿಯಾಗಿ ಪಶುಗಳನ್ನು ನೀನು ನನ್ನಿಂದ ವಸೂಲಿ ಮಾಡಿದೆ.
ನಾನು ಇಪ್ಪತ್ತು ವರ್ಷ ನಿನಗೆ ಗುಲಾಮನಂತೆ ಸೇವೆ ಮಾಡಿದೆನು. ಮೊದಲ ಹದಿನಾಲ್ಕು ವರ್ಷಗಳಲ್ಲಿ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಕಡೆಯ ಆರು ವರ್ಷಗಳಲ್ಲಿ ನಿನ್ನ ಪಶುಗಳನ್ನು ಪಡೆದುಕೊಳ್ಳುವುದಕ್ಕಾಗಿ ದುಡಿದೆನು. ಆ ಅವಧಿಯಲ್ಲಿ ನೀನು ನನ್ನ ಸಂಬಳವನ್ನು ಹತ್ತು ಸಲ ಬದಲಾಯಿಸಿದೆ.
ಆದರೆ ನನ್ನ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನು ಭಯಪಡುವ ದೇವರೂ [*ಭಯಪಡುವ ದೇವರು ದೇವರ ಒಂದು ಹೆಸರು.] ನನ್ನ ಸಂಗಡವಿದ್ದನು. ದೇವರು ನನ್ನ ಜೊತೆಯಲ್ಲಿ ಇಲ್ಲದಿದ್ದರೆ ನೀನು ನನ್ನನ್ನು ಬರಿಗೈಲಿ ಕಳುಹಿಸಿಬಿಡುತ್ತಿದ್ದೆ. ಆದರೆ ನನ್ನ ಕಷ್ಟವನ್ನೂ ನಾನು ಮಾಡಿದ ಕೆಲಸವನ್ನೂ ದೇವರು ನೋಡಿದನು. ನಿನ್ನೆಯ ರಾತ್ರಿ ನಾನು ತಪ್ಪಿತಸ್ಥನಲ್ಲವೆಂದು ದೇವರು ನಿನಗೆ ತೋರಿಸಿಕೊಟ್ಟಿದ್ದಾನೆ” ಎಂದು ಹೇಳಿದನು.
ಲಾಬಾನನು ಯಾಕೋಬನಿಗೆ, “ಈ ಸ್ತ್ರೀಯರು ನನ್ನ ಮಕ್ಕಳು. ಅವರ ಮಕ್ಕಳು ನನಗೆ ಸೇರಿದವರು; ಈ ಪಶುಗಳು ನನ್ನವು. ನೀನು ಇಲ್ಲಿ ನೋಡುವ ಪ್ರತಿಯೊಂದೂ ನನಗೆ ಸೇರಿದ್ದು. ಆದರೆ ನನ್ನ ಹೆಣ್ಣುಮಕ್ಕಳನ್ನಾಗಲಿ ಅವರ ಮಕ್ಕಳನ್ನಾಗಲಿ ತೆಗೆದುಕೊಳ್ಳಲು ಸಾಧ್ಯವಿಲ್ಲ.
ಲಾಬಾನನು ಯಾಕೋಬನಿಗೆ, “ಈ ಕಲ್ಲುಗಳ ಕುಪ್ಪೆಯು ನಮ್ಮಿಬ್ಬರಿಗೂ ನಮ್ಮ ಒಪ್ಪಂದವನ್ನು ಜ್ಞಾಪಕಕ್ಕೆ ತರುತ್ತದೆ” ಎಂದು ಹೇಳಿದನು. ಆದಕಾರಣ ಯಾಕೋಬನು ಆ ಸ್ಥಳಕ್ಕೆ ಗಲೀದ್ ಎಂದು ಹೆಸರಿಟ್ಟನು.
ಆಮೇಲೆ ಲಾಬಾನನು “ನೀನು ನನ್ನ ಹೆಣ್ಣುಮಕ್ಕಳನ್ನು ನೋಯಿಸಿದರೆ, ದೇವರು ನಿನ್ನನ್ನು ದಂಡಿಸುವನು ಎಂಬುದನ್ನು ನೆನಪು ಮಾಡಿಕೊ. ನೀನು ಬೇರೆ ಸ್ತ್ರೀಯರನ್ನು ಮದುವೆ ಮಾಡಿಕೊಂಡರೆ, ದೇವರು ನಿನ್ನನ್ನು ನೋಡುತ್ತಿದ್ದಾನೆ ಎಂಬುದನ್ನು ನೆನಪು ಮಾಡಿಕೊ.
ಈ ಕಲ್ಲುಗಳ ಕುಪ್ಪೆಯೂ ವಿಶೇಷವಾದ ಈ ಕಲ್ಲೂ ನಮ್ಮ ಒಪ್ಪಂದವನ್ನು ನೆನಪುಮಾಡಿಕೊಳ್ಳಲು ನಮ್ಮಿಬ್ಬರಿಗೂ ಸಹಾಯ ಮಾಡುತ್ತವೆ. ನಾನು ನಿನಗೆ ವಿರೋಧವಾಗಿ ಹೋರಾಡುವುದಕ್ಕಾಗಿ ಈ ಕಲ್ಲುಗಳನ್ನು ದಾಟಿ ಬರುವುದಿಲ್ಲ. ನೀನು ನನಗೆ ವಿರೋಧವಾಗಿ ಈ ಕಲ್ಲುಗಳನ್ನು ದಾಟಿ ನನ್ನ ಕಡೆಗೆ ಬರಕೂಡದು.
ನಾವು ಈ ಒಪ್ಪಂದವನ್ನು ಮುರಿದುಹಾಕಿದರೆ, ನಮ್ಮಲ್ಲಿ ಅಪರಾಧಿಯಾದವನಿಗೆ ಅಬ್ರಹಾಮನ ದೇವರು, ನಾಹೋರನ ದೇವರು ಮತ್ತು ಅವರ ಪೂರ್ವಿಕರ ದೇವರು ನ್ಯಾಯತೀರಿಸಲಿ” ಎಂದು ಹೇಳಿದನು. ಅದೇ ರೀತಿಯಲ್ಲಿ ಯಾಕೋಬನು ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಸೇವೆಮಾಡುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.
ಆಮೇಲೆ ಯಾಕೋಬನು ಒಂದು ಪಶುವನ್ನು ಕೊಂದು ಅದನ್ನು ಬೆಟ್ಟದ ಮೇಲೆ ಯಜ್ಞವಾಗಿ ಅರ್ಪಿಸಿದನು; ತನ್ನ ಜನರನ್ನು ಊಟಕ್ಕೆ ಆಹ್ವಾನಿಸಿದನು. ಅವರು ಊಟ ಮಾಡಿದ ಮೇಲೆ, ಆ ರಾತ್ರಿ ಬೆಟ್ಟದ ಮೇಲೆ ಇದ್ದರು.