ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.
(3-4) ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು.
ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು.
ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.
ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.