1
|
ಪ್ರವಾದಿಯಾದ ಹಬಕ್ಕೂಕನಿಗೆ ಕೊಡಲ್ಪಟ್ಟ ಸಂದೇಶ. |
2
|
ಯೆಹೋವನೇ, ನಾನು ನಿನ್ನಿಂದ ಸಹಾಯವನ್ನು ಕೇಳುತ್ತಲೇ ಇದ್ದೇನೆ. ನನ್ನ ಮೊರೆಯನ್ನು ಯಾವಾಗ ಕೇಳುವಿ? ನಾನು ಹಿಂಸೆಯ ವಿಷಯವಾಗಿ ನಿನ್ನನ್ನು ಕೂಗಿದರೂ ನೀನು ಏನೂ ಮಾಡಲಿಲ್ಲ. |
3
|
ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುತ್ತೀ. |
4
|
ಕಾನೂನು ಬಲಹೀನವಾಗಿದೆ. ಅದು ಸರಿಯಾದ ನ್ಯಾಯಕೊಡುವದಿಲ್ಲ. ದುಷ್ಚರು ಶಿಷ್ಟರ ಮೇಲೆ ವ್ಯಾಜ್ಯವಾಡಿ ಗೆಲ್ಲುತ್ತಿದ್ದಾರೆ. ಆದುದರಿಂದ ಕಾನೂನು ನ್ಯಾಯವಾಗಿಯೇ ಇಲ್ಲ. ನ್ಯಾಯಕ್ಕೆ ಜಯವಿಲ್ಲ. |
5
|
ಯೆಹೋವನು ಉತ್ತರಿಸುತ್ತಾ, “ಇತರ ದೇಶಗಳನ್ನು ನೋಡು, ಅವರನ್ನು ಗಮನಿಸು. ನೀನು ಆಶ್ಚರ್ಯಪಡುವಿ. ನೀನು ನಿನ್ನ ಜೀವಮಾನದಲ್ಲಿಯೇ ಅಚ್ಚರಿಪಡುವಂಥ ವಿಷಯವನ್ನು ನಾನು ನಡಿಸುತ್ತೇನೆ. ನೀನು ಅದನ್ನು ನೋಡಿ ನಂಬುವಿ. ನಿನಗೆ ಅದರ ವಿಷಯವಾಗಿ ತಿಳಿಸಲ್ಪಟ್ಟರೂ ನೀನು ನಂಬುವದಿಲ್ಲ. |
6
|
ನಾನು ಬಾಬಿಲೋನಿನವರನ್ನು ಬಲಾಢ್ಯ ಜನಾಂಗವಾಗಿ ಮಾಡುವೆನು. ಅವರು ಬಲಶಾಲಿಗಳೂ ನಿರ್ದಯಿಗಳೂ ಆಗಿದ್ದಾರೆ. ಅವರು ಲೋಕದಲ್ಲೆಲ್ಲಾ ಸಂಚರಿಸುವರು. ತಮ್ಮದಲ್ಲದ ಮನೆಗಳನ್ನು ಮತ್ತು ನಗರಗಳನ್ನು ತಮ್ಮ ವಶ ಮಾಡಿಕೊಳ್ಳುವರು. |
7
|
ಬಾಬಿಲೋನಿನ ಜನರು ಇತರರಲ್ಲಿ ಭಯ ಹುಟ್ಟಿಸುವರು. ಅವರು ತಮ್ಮ ಇಷ್ಟಬಂದ ಹಾಗೆ ಮಾಡುವರು; ಇಷ್ಟಬಂದ ಕಡೆಗೆ ಹೋಗುವರು. |
8
|
ಅವರ ಕುದುರೆಗಳು ಚಿರತೆಗಿಂತ ವೇಗವಾಗಿವೆ; ಸೂರ್ಯಸ್ತಮಾನ ಕಾಲದಲ್ಲಿ ತೋಳಗಳಿಗಿಂತ ಭಯಂಕರವಾಗಿವೆ. ಅವರ ರಾಹುತರು ಬಹುದೂರ ದೇಶದಿಂದ ಬಂದರು. ಹಸಿದ ಗಿಡುಗ ಹೇಗೆ ಆಕಾಶದಿಂದ ನೆಲದ ಮೇಲಿರುವ ಆಹಾರದ ಮೇಲೆ ಬೀಳುತ್ತದೋ ಅದೇ ರೀತಿಯಲ್ಲಿ ಅವರ ರಾಹುತರು ವೈರಿಗಳ ಮೇಲೆ ಬೀಳುವರು. |
9
|
ಅವರು ಬಯಸುವುದು ಯುದ್ಧವೊಂದನ್ನೇ. ಅವರ ಸೈನ್ಯವು ಮರುಭೂಮಿಯ ಮೇಲೆ ಬೀಸುವ ಗಾಳಿಯ ತರಹ ವೇಗವಾಗಿ ಸಂಚರಿಸುವದು. ಮತ್ತು ಬಾಬಿಲೋನಿನ ಸೈನಿಕರು ಮರಳಿನಷ್ಟು ಅಸಂಖ್ಯಾತ ಜನರನ್ನು ಸೆರೆಹಿಡಿಯುತ್ತಾರೆ. |
10
|
“ಇತರ ಜನಾಂಗದ ಅರಸರನ್ನು ಬಾಬಿಲೋನಿನ ಸೈನಿಕರು ಗೇಲಿ ಮಾಡುತ್ತಾರೆ. ಪರದೇಶದ ಅರಸರು ಅವರಿಗೆ ಹಾಸ್ಯಾಸ್ಪದವಾಗಿರುತ್ತಾರೆ. ಕೋಟೆಕೊತ್ತಲುಗಳಿರುವ ನಗರವನ್ನು ನೋಡಿ ಅವರು ನಗಾಡುವರು. ಆ ಸೈನಿಕರು ಕೋಟೆಯ ಗೋಡೆಯ ತನಕ ಮಣ್ಣದಿಬ್ಬವನ್ನೇರಿಸಿ, ಸುಲಭವಾಗಿ ಪಟ್ಟಣಗಳನ್ನು ವಶಮಾಡಿಕೊಳ್ಳುವರು. |
11
|
ಆ ಬಳಿಕ ಅವರು ಗಾಳಿಯಂತೆ ಅಲ್ಲಿಂದ ಬೇರೆ ಸ್ಥಳಗಳ ಮೇಲೆ ದಾಳಿಮಾಡಲು ಹೊರಟುಹೋಗುವರು. ಬಾಬಿಲೋನಿನವರು ಆರಾಧಿಸುವ ಒಂದೇ ವಿಷಯ ಯಾವದೆಂದರೆ ಅವರ ಸ್ವಂತ ಶಕ್ತಿಯನ್ನೇ.” |
12
|
ಆಗ ಹಬಕ್ಕೂಕನು ಹೇಳಿದ್ದೇನೆಂದರೆ, “ಯೆಹೋವನೇ, ನೀನು ನಿತ್ಯಕಾಲಕ್ಕೂ ಜೀವಿಸುವ ದೇವರು. ನೀನು ಎಂದಿಗೂ ಸಾಯದ ನನ್ನ ಪರಿಶುದ್ಧ ದೇವರು. ನೀನು ಯೋಚಿಸುವದನ್ನು ನೆರವೇರಿಸಲು ಬಾಬಿಲೋನಿನವರನ್ನು ಸೃಷ್ಟಿಸಿದ್ದೀ. ನಮ್ಮ ಬಂಡೆಯಾದ ನೀನು ಯೆಹೂದದ ಜನರನ್ನು ಶಿಕ್ಷಿಸುವುದಕ್ಕಾಗಿಯೇ ಅವರನ್ನು ಸೃಷ್ಟಿಸಿದ್ದೀ. |
13
|
ಕೆಡುಕನ್ನು ದೃಷ್ಟಿಸಲಾರದಷ್ಟು ನಿನ್ನ ಕಣ್ಣುಗಳು ಶುದ್ಧವಾಗಿವೆ. ಜನರು ಮಾಡುವ ದುಷ್ಕೃತ್ಯಗಳನ್ನು ನೀನು ನೋಡಲಾರೆ. ಹೀಗಿರಲು ಆ ಕೆಡುಕರು ಜಯಗಳಿಸುವದನ್ನು ನೀನು ಹೇಗೆ ವೀಕ್ಷಿಸಬಲ್ಲೆ? ದುಷ್ಟರು ಒಳ್ಳೆಯವರನ್ನು ಸೋಲಿಸಿದಾಗ ನೀನು ನಿನ್ನ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಬಾರದೇಕೆ? ಒಳ್ಳೇ ಜನರನ್ನು ಕೆಟ್ಟ ಜನರು ಸೋಲಿಸುವುದನ್ನು ನೀನು ಹೇಗೆ ನೋಡುವಿ? |
14
|
“ಸಮುದ್ರದಲ್ಲಿರುವ ಮೀನುಗಳಂತೆ ನೀನು ಜನರನ್ನು ಸೃಷ್ಟಿಸಿದ್ದೀ. ಅವರು ಒಬ್ಬ ನಾಯಕನಿಂದ ಸಮುದ್ರಪ್ರಾಣಿಗಳಂತಿದ್ದಾರೆ, |
15
|
ಅವೆಲ್ಲವನ್ನು ಗಾಳ, ಬಲೆಗಳಿಂದ ವೈರಿಯು ಹಿಡಿಯುತ್ತಾನೆ. ಬಲೆಯಲ್ಲಿ ಅವುಗಳನ್ನು ವೈರಿಯು ಹಿಡಿದು ಎಳೆಯುವನು. ತಾನು ಹಿಡಿದನೆಂದು ವೈರಿಯು ಹರ್ಷಿಸುವನು. |
16
|
ಅವನ ಬಲೆಗಳು ಅವನು ಧನಿಕನಂತೆ ಜೀವಿಸಲು ಸಹಾಯ ಮಾಡುವವು. ಅವನು ಒಳ್ಳೇ ಆಹಾರವನ್ನು ಉಣ್ಣುವನು. ಅದಕ್ಕೆ ವೈರಿಯು ತನ್ನ ಬಲೆಯನ್ನು ಆರಾಧಿಸುವನು. ಅವನು ಯಜ್ಞವನ್ನರ್ಪಿಸಿ ಧೂಪ ಹಾಕುವನು. ಬಲೆಯನ್ನು ಗೌರವಿಸುವನು. |
17
|
ಅವನು ತನ್ನ ಬಲೆಯಿಂದ ಐಶ್ವರ್ಯವನ್ನು ಹೊಂದುತ್ತಾ ಮುಂದರಿಯುವನೋ? ನಿರ್ದಯೆಯಿಂದ ಜನರನ್ನು ನಾಶ ಮಾಡುತ್ತಲೇ ಇರುವನೋ? |
Habakkuk 1:11 Kannada Language Bible Words basic statistical display
COMING SOON ...