1
|
“ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು. |
2
|
ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು. |
3
|
ಆದುದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆ ಹೋಗುವ ಹೊಗೆಯಂತಿದ್ದಾರೆ. |
4
|
“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ. |
5
|
ಮರುಭೂಮಿಯಲ್ಲಿ ನಿಮ್ಮನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿಮ್ಮನ್ನು ಬಲ್ಲೆನು. |
6
|
ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು. |
7
|
“ಆದುದರಿಂದಲೇ ನಾನು ಅವರಿಗೆ ಸಿಂಹದಂತಿರುವೆನು. ದಾರಿ ಬದಿಯಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು. |
8
|
ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.” |
9
|
“ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದುದರಿಂದ ನಾನು ನಿನ್ನನ್ನು ನಾಶಮಾಡುವೆನು. |
10
|
ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ. |
11
|
ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು. |
12
|
“ಎಫ್ರಾಯೀಮ್ ತನ್ನ ಅಪರಾಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದನು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅವನು ಭಾವಿಸಿದನು; ಆದರೆ ಅವನು ಶಿಕ್ಷಿಸಲ್ಪಡುವನು; |
13
|
ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ; ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ. |
14
|
“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರು ಮಾಡುವೆನು. ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ. |
15
|
ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು. ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿ ಬಿಡುವದು. |
16
|
ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು. ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರು ಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.” |
Hosea 13:4 Kannada Language Bible Words basic statistical display
COMING SOON ...