Bible Languages

Indian Language Bible Word Collections

Bible Versions

Books

Isaiah Chapters

Isaiah 15 Verses

Bible Versions

Books

Isaiah Chapters

Isaiah 15 Verses

1 ಇದು ಮೋವಾಬನ್ನು ಕುರಿತ ದುಃಖಕರವಾದ ಸಂದೇಶ: ಒಂದು ರಾತ್ರಿ ಮೋವಾಬಿನ ಆರ್ ಪಟ್ಟಣದಿಂದ ಸಂಪತ್ತನ್ನು ಸೈನ್ಯವು ಸೂರೆ ಮಾಡಿತು. ಆ ರಾತ್ರಿ ನಗರವು ನಾಶಮಾಡಲ್ಪಟ್ಟಿತು. ಒಂದು ರಾತ್ರಿ ಸೈನ್ಯವು ಮೋವಾಬಿನ ಕೀರ್ ಪಟ್ಟಣದಿಂದ ಸಂಪತ್ತನ್ನು ಸೂರೆ ಮಾಡಿತು. ಆ ರಾತ್ರಿ ಪಟ್ಟಣವು ಕೆಡವಲ್ಪಟ್ಟಿತು.
2 ಅರಸನ ಪರಿವಾರದವರು ಮತ್ತು ದೀಬೋನಿನ ಜನರು ಪೂಜಾಸ್ಥಳಕ್ಕೆ ದುಃಖಿಸಲು ಹೋಗುತ್ತಿದ್ದಾರೆ. ಮೋವಾಬಿನ ಜನರು ನೆಬೋ ಮತ್ತು ಮೇದೆಬದವರಿಗಾಗಿ ರೋಧಿಸುತ್ತಾರೆ. ಜನರು ತಮ್ಮ ಗಡ್ಡಗಳನ್ನೂ ತಲೆಗಳನ್ನೂ ಬೋಳಿಸಿ ತಮ್ಮ ದುಃಖವನ್ನು ಪ್ರದರ್ಶಿಸುತ್ತಾರೆ.
3 ಮೋವಾಬಿನ ಎಲ್ಲಾ ಕಡೆಗಳಲ್ಲೂ ಮನೆಯ ಚಾವಣಿಯ ಮೇಲೂ ಬೀದಿಗಳಲ್ಲೂ ಜನರು ಗೋಣಿತಟ್ಟುಗಳನ್ನು ಧರಿಸಿಕೊಂಡು ರೋಧಿಸುತ್ತಾರೆ.
4 ಹೆಷ್ಬೋನ್ ಮತ್ತು ಎಲೆಯಾಲೆಯಲ್ಲಿರುವ ಜನರು ಗಟ್ಟಿಯಾಗಿ ಅಳುತ್ತಿದ್ದಾರೆ. ದೂರದಲ್ಲಿರುವ ಯಹಜ್ ಪಟ್ಟಣದವರಿಗೆ ಅವರ ರೋಧನವು ಕೇಳಿಸುತ್ತದೆ. ಸೈನಿಕರೂ ಭಯಗೊಂಡಿದ್ದಾರೆ. ಹೆದರಿಕೆಯಿಂದ ನಡುಗುತ್ತಿದ್ದಾರೆ.
5 ಮೋವಾಬಿನ ಬಗ್ಗೆ ನನ್ನ ಹೃದಯವು ಮರುಗುತ್ತಿದೆ. ಜನರು ಸುರಕ್ಷತೆಗಾಗಿ ಅತ್ತಿತ್ತ ಓಡಾಡುತ್ತಿದ್ದಾರೆ. ಅವರು ಬಹುದೂರವಿರುವ ಚೋಯರಿಗೆ ಓಡುತ್ತಿದ್ದಾರೆ. ಎಗ್ಲತ್ ಶೆಲಿಶೀಯಕ್ಕೂ ಓಡುತ್ತಾರೆ. ಪರ್ವತಮಾರ್ಗವಾಗಿ ಲೂಹೀಥಿಗೆ ಹೋಗುತ್ತಿರುವಾಗ ಜನರು ಅಳುತ್ತಾ ಹೋಗುತ್ತಾರೆ. ಹೊರೊನಯಿಮಿಗೆ ಹೋಗುವ ಮಾರ್ಗದಲ್ಲಿ ಜನರು ಜೋರಾಗಿ ಅಳುತ್ತಾ ಹೋಗುತ್ತಿದ್ದಾರೆ.
6 ಆದರೆ ನಿಮ್ರೀಮ್ ಹಳ್ಳವು ಒಣಗಿಹೋಗಿ ಮರುಭೂಮಿಗೆ ಸಮಾನವಾಗಿದೆ. ಹಸಿಹುಲ್ಲುಗಳೆಲ್ಲಾ ಬಾಡಿವೆ; ಸಸಿಗಳೆಲ್ಲಾ ಸತ್ತಿವೆ; ಎಲ್ಲಿಯೂ ಹಸಿರು ಕಾಣಿಸುವದಿಲ್ಲ.
7 ಆದಕಾರಣ ಜನರು ತಮ್ಮ ವಸ್ತುಗಳನ್ನು ಒಟ್ಟಾಗಿ ಸೇರಿಸಿ ಮೋವಾಬನ್ನು ಬಿಟ್ಟುಹೋಗುತ್ತಿದ್ದಾರೆ. ಅವರು ತಮ್ಮ ವಸ್ತುಗಳನ್ನು ಹೊತ್ತುಕೊಂಡು ಪೊಪ್ಲಾರ್ ಹೊಳೆಯ ಬದಿಯಲ್ಲಿ ಗಡಿದಾಟುವರು.
8 ಮೋವಾಬ್ ದೇಶದಲ್ಲೆಲ್ಲಾ ಅಳುವ ಸದ್ದು ಕೇಳಿಸುತ್ತದೆ. ದೂರದಲ್ಲಿರುವ ಎಗ್ಲಯಿಮಿನಲ್ಲೂ ಜನರು ಅಳುತ್ತಿದ್ದಾರೆ. ಬೆಯೇರ್ ಏಲೀಮ್ ಪಟ್ಟಣದಲ್ಲೂ ಜನರು ರೋಧಿಸುತ್ತಾರೆ.
9 ದೀಮೋನಿನ ನೀರು ರಕ್ತಮಯವಾಗಿದೆ. ಮತ್ತು ಯೆಹೋವನಾದ ನಾನು ದೀಮೋನಿಗೆ ಇನ್ನೂ ಕೇಡುಗಳನ್ನು ಬರಮಾಡುವೆನು. ಮೋವಾಬಿನಲ್ಲಿ ವಾಸಿಸುವ ಕೆಲವೇ ಜನರು ಶತ್ರುಗಳಿಂದ ಪಾರಾಗಿದ್ದಾರೆ. ಆದರೆ ಅವರನ್ನು ಸಾಯಿಸಲು ನಾನು ಸಿಂಹಗಳನ್ನು ಕಳುಹಿಸುವೆನು.

Isaiah 15:1 Kannada Language Bible Words basic statistical display

COMING SOON ...

×

Alert

×