1
|
ಯೆಹೋವನು ಹೇಳುವದೇನೆಂದರೆ: “ ಬಹುದೂರದಲ್ಲಿರುವ ಜನಾಂಗಗಳವರೇ, ಮೌನವಾಗಿದ್ದು ನನ್ನ ಬಳಿಗೆ ಬನ್ನಿರಿ. ಜನಾಂಗಗಳೇ, ಮತ್ತೆ ಬಲಿಷ್ಠರಾಗಿರಿ. ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಿರಿ. ನಾವು ಒಟ್ಟಾಗಿ ಸೇರಿ ಬಂದು ಯಾರು ಸರಿ ಎಂದು ವಾದಿಸೋಣ! |
2
|
ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು. |
3
|
ಅವನು ಸೈನ್ಯವನ್ನು ಓಡಿಸಿದರೂ ಗಾಯಗೊಳ್ಳುವದಿಲ್ಲ. ತಾನು ಹಿಂದೆಂದೂ ಹೋಗದ ಸ್ಥಳಗಳಿಗೆ ಹೋಗುವನು. |
4
|
ಇವೆಲ್ಲಾ ನೆರವೇರುವಂತೆ ಮಾಡಿದವರು ಯಾರು? ಆದಿಯಿಂದ ಎಲ್ಲಾ ಜನರನ್ನು ಕರೆದವರು ಯಾರು? ಯೆಹೋವನೆಂಬ ನಾನೇ ಇವೆಲ್ಲವನ್ನು ಮಾಡಿದೆನು. ನಾನೇ ಮೊದಲನೆಯವನಾಗಿದ್ದೇನೆ. ಅನಾದಿಕಾಲಕ್ಕಿಂತ ಮೊದಲು ನಾನಿದ್ದೆನು. ಎಲ್ಲವೂ ಅಂತ್ಯವಾಗುವ ತನಕ ನಾನು ಇರುತ್ತೇನೆ. |
5
|
ದೂರಸ್ಥಳಗಳವರೇ, ನೋಡಿರಿ, ಭಯಗೊಳ್ಳಿರಿ. ಭೂಮಿಯ ಕಟ್ಟಕಡೆಗಿರುವ ದೇಶಗಳೇ, ಭಯದಿಂದ ನಡುಗಿರಿ. ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿರಿ ಎಂದಾಗ ಅವರು ಬಂದರು. |
6
|
“ಕೆಲಸಗಾರರು ಒಬ್ಬರಿಗೊಬ್ಬರು ಸಹಾಯ ಮಾಡುವರು. ಅವರು ಬಲಶಾಲಿಗಳಾಗಬೇಕೆಂದು ಪರಸ್ಪರ ಪ್ರೋತ್ಸಾಹಿಸುವರು. |
7
|
ಒಬ್ಬ ಕೆಲಸಗಾರನು ಮರವನ್ನು ಕಡಿದು ಅದರಿಂದ ವಿಗ್ರಹವನ್ನು ಮಾಡುವನು. ಅವನು ಬಂಗಾರದ ಕೆಲಸದವನನ್ನು ಪ್ರೋತ್ಸಾಹಿಸುವನು. ಇನ್ನೊಬ್ಬನು ತನ್ನ ಸುತ್ತಿಗೆಯಿಂದ ತಗಡನ್ನು ಸಮತಟ್ಟು ಮಾಡುವನು. ಅವನು ಕಬ್ಬಿಣದ ಕೆಲಸದವನನ್ನು ಪ್ರೋತ್ಸಾಹಿಸುವನು. ಈ ಕೆಲಸದವನು ‘ಇದು ಒಳ್ಳೆಯ ಕೆಲಸ. ತಗಡು ಹೊರಗೆ ಬರಲಾರದು’ ಎಂದು ಹೇಳಿ ಆ ವಿಗ್ರಹವನ್ನು ಪೀಠಕ್ಕೆ ಮೊಳೆ ಹೊಡೆದು ಭದ್ರಪಡಿಸುವನು. ಈಗ ವಿಗ್ರಹವು ಅಲ್ಲಾಡುವದಿಲ್ಲ, ಕೆಳಕ್ಕೆ ಬೀಳುವದಿಲ್ಲ.” |
8
|
ಯೆಹೋವನು ಇಂತೆನ್ನುತ್ತಾನೆ, “ಇಸ್ರೇಲೇ, ನೀನು ನನ್ನ ಸೇವಕನಾಗಿರುವೆ. ಯಾಕೋಬೇ, ನಾನು ನಿನ್ನನ್ನು ಆರಿಸಿಕೊಂಡೆನು. ನೀನು ನನ್ನ ಸ್ನೇಹಿತನಾದ ಅಬ್ರಹಾಮನ ಕುಟುಂಬದವನಾಗಿರುವೆ. |
9
|
ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ. |
10
|
ನಾನೇ ನಿನ್ನ ಸಂಗಡವಿದ್ದೇನೆ. ಆದುದರಿಂದ ಚಿಂತಿಸದಿರು. ನಾನೇ ನಿನ್ನ ದೇವರು, ಆದುದರಿಂದ ಭಯಪಡಬೇಡ. ನಿನ್ನನ್ನು ಬಲಪಡಿಸುವೆನು. ನಿನಗೆ ಸಹಾಯ ಮಾಡುವೆನು. ನನ್ನ ಒಳ್ಳೆಯ ಬಲಗೈಯಿಂದ ನಿನಗೆ ಆಧಾರ ಕೊಡುವೆನು. |
11
|
ನೋಡು, ಕೆಲವರು ನಿನ್ನ ಮೇಲೆ ಕೋಪಗೊಂಡಿದ್ದಾರೆ. ಆದರೆ ಅವರು ನಾಚಿಕೆಪಡುವರು. ನಿನ್ನ ಶತ್ರುಗಳು ಕಳೆದುಹೋಗಿ ಕಾಣದೆ ಹೋಗುವರು. |
12
|
ನಿನಗೆ ವಿರುದ್ಧವಾಗಿದ್ದ ಜನರನ್ನು ನೀನು ಹುಡುಕುವೆ. ಆದರೆ ಅವರು ನಿನಗೆ ಕಾಣಿಸುವುದಿಲ್ಲ. ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ಕಾಣದೆ ಹೋಗುವರು. |
13
|
ನಿನ್ನ ದೇವರಾದ ಯೆಹೋವನು ನಾನೇ. ನಾನು ನಿನ್ನ ಬಲಗೈಯನ್ನು ಹಿಡಿದಿದ್ದೇನೆ. ‘ನೀನು ಹೆದರಬೇಡ, ನಾನೇ ನಿನಗೆ ಸಹಾಯ ಮಾಡುತ್ತೇನೆ’ ಎಂದು ಹೇಳುತ್ತಿದ್ದೇನೆ. |
14
|
ನನಗೆ ಅಮೂಲ್ಯವಾದ ಯಾಕೋಬೇ, ಭಯಪಡಬೇಡ. ನನ್ನ ಪ್ರಿಯ ಇಸ್ರೇಲೇ, ಹೆದರಬೇಡ. ನಾನು ನಿಜವಾಗಿಯೂ ನಿನಗೆ ಸಹಾಯ ಮಾಡುತ್ತೇನೆ.” ಇದು ಯೆಹೋವನ ನುಡಿ. “ಇಸ್ರೇಲರ ಪರಿಶುದ್ಧನೂ ನಿನ್ನನ್ನು ರಕ್ಷಿಸುವಾತನೂ ಈ ಮಾತುಗಳನ್ನು ಹೇಳಿದ್ದಾನೆ: |
15
|
ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ. |
16
|
ನೀವು ಅವುಗಳನ್ನು ಗಾಳಿಗೆ ತೂರಿಬಿಡುವಿರಿ. ಗಾಳಿಯು ಅವುಗಳನ್ನು ಹಾರಿಸಿ ಚದರಿಸಿ ಬಿಡುವುದು. ಆಗ ನೀವು ಯೆಹೋವನಲ್ಲಿ ಸಂತಸಪಡುವಿರಿ. ಇಸ್ರೇಲರ ಪರಿಶುದ್ಧನಲ್ಲಿ ಹೆಚ್ಚಳಪಡುವಿರಿ. |
17
|
ಬಡಜನರು ನೀರಿಗಾಗಿ ಹುಡುಕಾಡುವರು. ಆದರೆ ನೀರು ಅವರಿಗೆ ದೊರಕುವದಿಲ್ಲ. ಅವರು ದಾಹಗೊಂಡಿದ್ದಾರೆ, ಅವರ ನಾಲಿಗೆ ಒಣಗಿಹೋಗಿದೆ. ನಾನು ಅವರ ಮೊರೆಯನ್ನು ಕೇಳುವೆನು. ನಾನು ಅವರನ್ನು ತೊರೆಯುವುದಿಲ್ಲ, ಅವರನ್ನು ಸಾಯಲು ಬಿಡುವುದಿಲ್ಲ. |
18
|
ಒಣಬೆಟ್ಟಗಳಲ್ಲಿ ನದಿಗಳು ಹರಿಯುವಂತೆ ನಾನು ಮಾಡುವೆನು. ಕಣಿವೆಗಳ ಮೂಲಕ ಬುಗ್ಗೆಯ ನೀರು ಹರಿಯುವಂತೆ ಮಾಡುವೆನು. ಮರುಭೂಮಿಯನ್ನು ಸರೋವರವನ್ನಾಗಿ ಮಾಡುವೆನು. ಆ ಒಣನೆಲದಲ್ಲಿ ನೀರಿನ ಬುಗ್ಗೆಗಳು ಕಾಣುವವು. |
19
|
ಮರುಭೂಮಿಯ ಮೇಲೆ ಮರಗಳು ಬೆಳೆಯುವವು. ಅಲ್ಲಿ ದೇವದಾರು, ಆಲೀವ್, ಕಸ್ತೂರಿಜಾಲಿ, ತುರಾಯಿ, ತಪಸಿ ಮತ್ತು ತಿಲಕ ವೃಕ್ಷಗಳು ಇರುವವು. |
20
|
ಜನರು ಇವುಗಳನ್ನು ನೋಡಿ, ಇವು ಯೆಹೋವನ ಶಕ್ತಿಯಿಂದ ಆದವು ಎಂದು ತಿಳಿದುಕೊಳ್ಳುವರು. ಜನರು ಈ ಸಂಗತಿಗಳನ್ನು ನೋಡಿ ಇಸ್ರೇಲರ ಪರಿಶುದ್ಧನಾದ ಯೆಹೋವನೇ ಇವುಗಳನ್ನು ಮಾಡಿದನೆಂದು ತಿಳಿದುಕೊಳ್ಳುವರು.” |
21
|
ಯಾಕೋಬ್ಯರ ಅರಸನಾದ ಯೆಹೋವನು ಹೇಳುವದೇನೆಂದರೆ: “ಬನ್ನಿ ನಿಮ್ಮ ವಾದಗಳನ್ನು ಮಂಡಿಸಿರಿ, ನಿಮ್ಮ ಆಧಾರಗಳನ್ನು ತೋರಿಸಿರಿ. |
22
|
ನಿಮ್ಮ ವಿಗ್ರಹಗಳು ನಮ್ಮ ಬಳಿಗೆ ಬಂದು ನಡೆಯುತ್ತಿರುವುದನ್ನು ತಿಳಿಸಲಿ. ಪ್ರಾರಂಭದಲ್ಲಿ ನಡೆದಿದ್ದೇನು? ಮುಂದೆ ನಡೆಯಲಿರುವುದೇನು? ನಮಗೆ ತಿಳಿಸಿರಿ. ನಾವು ಸೂಕ್ಷ್ಮವಾಗಿ ಕೇಳಿ ಭವಿಷ್ಯವನ್ನು ತಿಳಿದುಕೊಳ್ಳುವೆವು. |
23
|
ಮುಂದೆ ಸಂಭವಿಸುವುದನ್ನು ತಿಳಿದುಕೊಳ್ಳಲು ನಾವು ಯಾವ ಸೂಚನೆಗಳಿಗಾಗಿ ಎದುರು ನೋಡಬೇಕು? ತಿಳಿಸಿರಿ. ನೀವೇ ದೇವರುಗಳೆಂದು ಆಗ ನಮಗೆ ಖಚಿತವಾಗುವುದು. ಏನನ್ನಾದರೂ ಮಾಡಿರಿ. ಯಾವದನ್ನಾದರೂ ಮಾಡಿರಿ. ಒಳ್ಳೆಯದನ್ನು, ಕೆಟ್ಟದ್ದನ್ನು ಮಾಡಿರಿ. ಆಗ ನೀವು ಜೀವವುಳ್ಳವರೆಂದು ತಿಳಿದು ನಿಮಗೆ ಗೌರವಿಸಿ, ಭಯಪಟ್ಟು ನಿಮ್ಮನ್ನು ಹಿಂಬಾಲಿಸುವೆವು. |
24
|
“ಸುಳ್ಳುದೇವರುಗಳೇ, ಕೇಳಿ. ನೀವು ಶೂನ್ಯಕ್ಕಿಂತ ಕಡಿಮೆಯಾದವರು. ನೀವು ಏನನ್ನೂ ಮಾಡಲಾರಿರಿ. ದೇವರ ದೃಷ್ಠಿಯಲ್ಲಿ ತುಚ್ಛನಾದವನು ಮಾತ್ರ ನಿಮ್ಮನ್ನು ಪೂಜಿಸುವನು.” |
25
|
“ಉತ್ತರದಿಕ್ಕಿನಲ್ಲಿರುವ ಒಬ್ಬ ಮನುಷ್ಯನನ್ನು ನಾನು ಎಚ್ಚರಪಡಿಸಿದೆನು. ಅವನು ಪೂರ್ವದಿಕ್ಕಿನಿಂದ ಬರುವನು. ನನ್ನ ನಾಮವನ್ನು ಅವನು ಆರಾಧಿಸುವನು. ಕುಂಬಾರನು ಜೇಡಿ ಮಣ್ಣನ್ನು ತುಳಿದು ಹದಗೊಳಿಸುವಂತೆ ಅವನು ಅರಸರುಗಳ ಮೇಲೆ ತುಳಿದಾಡುವನು. |
26
|
ಇವುಗಳು ಸಂಭವಿಸುವ ಮೊದಲೇ ಇವುಗಳನ್ನು ತಿಳಿಸಿದಾತನನ್ನೇ ದೇವರೆಂದು ಕರೆಯಬೇಕು. ನಿಮ್ಮ ವಿಗ್ರಹಗಳಲ್ಲಿ ಯಾವದಾದರೂ ನಮಗೆ ಇದನ್ನು ತಿಳಿಸಿತೋ? ಯಾವ ವಿಗ್ರಹವೂ ನಮಗೆ ಇವುಗಳ ವಿಷಯದಲ್ಲಿ ತಿಳಿಸಲಿಲ್ಲ. ಆ ವಿಗ್ರಹಗಳು ಒಂದು ಮಾತನ್ನಾದರೂ ಹೇಳಲಿಲ್ಲ; ಮತ್ತು ನೀವು ಹೇಳಿದ್ದನ್ನು ಆ ಸುಳ್ಳುದೇವರುಗಳು ಕೇಳಿಸಿಕೊಳ್ಳುವದೂ ಇಲ್ಲ. |
27
|
ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.” |
28
|
ನಾನು ಆ ಸುಳ್ಳುದೇವರುಗಳನ್ನು ದೃಷ್ಟಿಸಿ ನೋಡಿದೆನು. ಅವುಗಳಲ್ಲಿ ಯಾವುದೂ ಮಾತಾಡುವಷ್ಟು ಜ್ಞಾನಿಯಾಗಿರಲಿಲ್ಲ. ನಾವು ಅವುಗಳನ್ನು ಪ್ರಶ್ನಿಸಿದೆನು. ಆದರೆ ಅವು ಉತ್ತರಿಸಲಿಲ್ಲ. |
29
|
ಆ ದೇವರುಗಳೆಲ್ಲಾ ಶೂನ್ಯಕ್ಕಿಂತಲೂ ಕಡಿಮೆಯೇ. ಅವುಗಳು ಏನೂ ಮಾಡಲಾರವು. ಆ ಪ್ರತಿಮೆಗಳು ಸಂಪೂರ್ಣವಾಗಿ ಬೆಲೆಯಿಲ್ಲದವುಗಳಾಗಿವೆ. ಅವುಗಳು ಖಂಡಿತವಾಗಿಯೂ ನಿಷ್ಪ್ರಯೋಜಕವಾದವುಗಳಾಗಿವೆ. |
Isaiah 41:1 Kannada Language Bible Words basic statistical display
COMING SOON ...