English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Isaiah Chapters

Isaiah 60 Verses

1 “ಜೆರುಸಲೇಮೇ, ಏಳು, ಪ್ರಕಾಶಿಸು! ನಿನ್ನ ಪ್ರಕಾಶವೆಂಬಾತನು ಬರುತ್ತಾನೆ. ಯೆಹೋವನ ಮಹಿಮೆಯು ನಿನ್ನ ಮೇಲೆ ಪ್ರಕಾಶಿಸುವುದು.
2 ಕತ್ತಲೆಯು ಈಗ ಭೂಮಿಯನ್ನು ಕವಿದಿದೆ. ಜನರು ಕತ್ತಲೆಯಲ್ಲಿದ್ದಾರೆ. ಆದರೆ ಯೆಹೋವನ ಪ್ರಕಾಶವು ನಿನ್ನ ಮೇಲಿರುವದು. ಆತನ ಮಹಿಮೆಯು ನಿನ್ನ ಮೇಲೆ ಬರುವದು.
3 ಜನಾಂಗಗಳು ನಿನ್ನ ಬೆಳಕಿನ ಕಡೆಗೆ ಬರುವರು. ಅರಸರುಗಳು ನಿನ್ನ ಪ್ರಕಾಶಮಾನವಾದ ಬೆಳಕಿನತ್ತ ಬರುವರು.
4 ನಿನ್ನ ಸುತ್ತಲೂ ನೋಡು. ಜನರು ಸುತ್ತಲೂ ನಿನ್ನ ಬಳಿಗೆ ಬಂದು ಸೇರುವದನ್ನು ನೋಡು. ಅವರು ದೂರ ಪ್ರಾಂತ್ಯದಿಂದ ಬರುವ ನಿನ್ನ ಗಂಡುಮಕ್ಕಳಾಗಿದ್ದಾರೆ. ನಿನ್ನ ಕುಮಾರಿಯರು ಅವರೊಂದಿಗೆ ಬರುತ್ತಿದ್ದಾರೆ.
5 “ಆಗ ನೀನು ನಿನ್ನ ಜನರನ್ನು ನೋಡುವೆ. ನಿನ್ನ ಮುಖವು ಸಂತೋಷದಿಂದ ಪ್ರಕಾಶಿಸುವದು. ಮೊದಲು ನೀನು ಭಯಪಡುವೆ. ಆ ಬಳಿಕ ನೀನು ಉತ್ಸಾಹಪಡುವೆ. ಸಮುದ್ರದಾಚೆ ಇರುವ ಐಶ್ವರ್ಯವು ನಿನ್ನ ಮುಂದೆ ರಾಶಿ ಹಾಕಲ್ಪಡುವದು. ಜನಾಂಗಗಳ ನಿಕ್ಷೇಪವು ನಿನಗೆ ದೊರೆಯುವುದು.
6 ಮಿದ್ಯಾನಿನ ಮತ್ತು ಏಫದ ಒಂಟೆಗಳ ಹಿಂಡು ರಾಜ್ಯವನ್ನು ದಾಟುವವು. ಶೆಬ ರಾಜ್ಯದ ಒಂಟೆಗಳ ಸಾಲು ಚಿನ್ನ ಮತ್ತು ಧೂಪವನ್ನು ಹೊತ್ತುಕೊಂಡು ನಿನ್ನ ಬಳಿಗೆ ಬರುವವು. ಜನರು ಯೆಹೋವನಿಗೆ ಸ್ತೋತ್ರಗಾನ ಹಾಡುವರು.
7 ಜನರು ಕೇದಾರಿನ ಎಲ್ಲಾ ಕುರಿಗಳನ್ನು ಒಟ್ಟುಗೂಡಿಸಿ ನಿನಗೆ ಕೊಡುವರು. ನೆಬಾಯೋತಿನಿಂದ ಟಗರುಗಳನ್ನು ನಿನಗೆ ತರುವರು. ನೀನು ನಿನ್ನ ವೇದಿಕೆಯ ಮೇಲೆ ಅವುಗಳನ್ನು ಯಜ್ಞಮಾಡುವೆ. ಆಗ ನಾನು ಸ್ವೀಕರಿಸುವೆನು. ನನ್ನ ಸುಂದರವಾದ ಆಲಯವನ್ನು ಇನ್ನೂ ಸೌಂದರ್ಯಗೊಳಿಸುವೆನು.
8 ಜನರನ್ನು ನೋಡು! ಆಕಾಶದ ಮೋಡವು ಹಾರಿಹೋಗುವಂತೆ ಅವರು ನಿನ್ನ ಬಳಿಗೆ ತ್ವರಿತವಾಗಿ ಬರುತ್ತಿದ್ದಾರೆ. ತಮ್ಮ ಗೂಡುಗಳಿಗೆ ಹಾರುವ ಪಾರಿವಾಳಗಳಂತೆ ಅವರಿರುತ್ತಾರೆ.
9 ದೂರ ಪ್ರಾಂತ್ಯಗಳು ನನಗಾಗಿ ಕಾದಿವೆ. ದೊಡ್ಡ ಸರಕು ಸಾಗಿಸುವ ಹಡಗುಗಳು ಹೊರಡಲು ತಯಾರಾಗಿವೆ. ಈ ಹಡಗುಗಳು ದೂರ ಪ್ರಾಂತ್ಯದಲ್ಲಿರುವ ನಿನ್ನ ಮಕ್ಕಳನ್ನು ಕರೆತರಲು ತಯಾರಾಗಿವೆ. ಅವರು ಬೆಳ್ಳಿಬಂಗಾರಗಳನ್ನು ತಮ್ಮೊಂದಿಗೆ ತಂದು ಇಸ್ರೇಲಿನ ಪರಿಶುದ್ಧನಾದ ಯೆಹೋವನನ್ನು ಘನಪಡಿಸುವರು. ಯೆಹೋವನು ನಿನಗೆ ಆಶ್ಚರ್ಯಕರವಾದ ಸಂಗತಿಗಳನ್ನು ಮಾಡುವನು.
10 ಬೇರೆ ದೇಶದ ಮಕ್ಕಳು ನಿನ್ನ ಗೋಡೆಗಳನ್ನು ಮತ್ತೆ ಕಟ್ಟುವರು. ಅವರ ಅರಸರುಗಳು ನಿನ್ನ ಸೇವೆ ಮಾಡುವರು. “ನಾನು ಕೋಪಗೊಂಡಾಗ ನಿನ್ನನ್ನು ಬಾಧಿಸಿದೆನು. ಆದರೆ ಈಗ ನಿನಗೆ ಕರುಣೆ ತೋರುವೆನು. ನಿನ್ನನ್ನು ಆದರಿಸುವೆನು.
11 ನಿನ್ನ ದ್ವಾರಗಳು ಯಾವಾಗಲೂ ತೆರೆಯಲ್ಪಡುತ್ತವೆ. ಅವು ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಮುಚ್ಚಲ್ಪಡುವದಿಲ್ಲ. ರಾಜ್ಯಗಳೂ ರಾಜರುಗಳೂ ತಮ್ಮ ಐಶ್ವರ್ಯವನ್ನು ನಿನ್ನ ಬಳಿಗೆ ತರುವರು.
12 ನಿನ್ನ ಸೇವೆಮಾಡದ ಯಾವ ರಾಜ್ಯವಾಗಲಿ ನಾಶಮಾಡಲ್ಪಡುವದು. ಹೌದು, ಆ ರಾಜ್ಯಗಳು ಸರ್ವನಾಶವಾಗುವವು.
13 ಲೆಬನೋನಿನ ಎಲ್ಲಾ ಅಮೂಲ್ಯವಸ್ತುಗಳನ್ನು ನಿನಗೆ ಕೊಡಲಾಗುವುದು. ಜನರು ದೇವದಾರು ಮರಗಳನ್ನೂ ಇತರ ವಿಶೇಷ ಮರಗಳನ್ನೂ ನಿನಗೆ ತಂದುಕೊಡುವರು. ಈ ಮರಗಳಿಂದ ತೊಲೆಗಳನ್ನು ಮಾಡಿ ನನ್ನ ಪವಿತ್ರ ಆಲಯವನ್ನು ಸೌಂದರ್ಯಗೊಳಿಸುವರು. ಅದು ನನ್ನ ಸಿಂಹಾಸನದ ಮುಂದಿರುವ ಪಾದಪೀಠದಂತಿರುವದು. ಅದಕ್ಕೆ ನಾನು ಹೆಚ್ಚಾದ ಗೌರವ ಕೊಡುವೆನು.
14 ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.
15 “ನೀನು ಮತ್ತೆಂದಿಗೂ ಒಬ್ಬಂಟಿಗಳಾಗಿರುವದಿಲ್ಲ. ನೀನು ಮತ್ತೆಂದಿಗೂ ದ್ವೇಷಿಸಲ್ಪಡುವದಿಲ್ಲ. ನೀನು ತಿರುಗಿ ಬರಿದಾಗುವುದಿಲ್ಲ. ನಿನ್ನನ್ನು ಶಾಶ್ವತವಾದ ಮಹೋನ್ನತಳನ್ನಾಗಿ ಮಾಡುವೆನು. ನೀನು ನಿತ್ಯಕಾಲಕ್ಕೂ ಸಂತೋಷದಲ್ಲಿರುವೆ.
16 ಜನಾಂಗಗಳು ನಿನಗೆ ಬೇಕಾದದ್ದೆಲ್ಲವನ್ನು ಕೊಡುವರು. ಒಂದು ಮಗು ಹೇಗೆ ತಾಯಿಯ ಹಾಲನ್ನು ಕುಡಿಯುವದೋ ಅದೇ ರೀತಿಯಲ್ಲಿ ಅರಸರುಗಳಿಂದ ನೀನು ಧನವನ್ನು ಕುಡಿಯುವಿ. ಆಗ ಯೆಹೋವನಾದ ನಾನೇ ನಿನ್ನನ್ನು ರಕ್ಷಿಸಿದೆನೆಂದು ತಿಳಿದುಕೊಳ್ಳುವಿ. ಆಗ ಯಾಕೋಬ್ಯರ ಮಹಾದೇವರು ನಿಮ್ಮನ್ನು ಕಾಪಾಡುವನೆಂದು ತಿಳಿದುಕೊಳ್ಳುವಿರಿ.
17 “ಈಗ ನಿನ್ನಲ್ಲಿ ತಾಮ್ರವಿದೆ. ನಾನು ನಿನಗೆ ಬಂಗಾರವನ್ನು ತರುವೆನು. ಈಗ ನಿನ್ನಲ್ಲಿ ಕಬ್ಬಿಣವಿದೆ. ನಾನು ನಿನಗೆ ಬೆಳ್ಳಿಯನ್ನು ತರುವೆನು. ನಿನ್ನ ಮರವನ್ನು ತಾಮ್ರವನ್ನಾಗಿ ಪರಿವರ್ತಿಸುವೆನು. ನಿನ್ನ ಕಲ್ಲುಬಂಡೆಗಳನ್ನು ಕಬ್ಬಿಣವನ್ನಾಗಿ ಮಾಡುವೆನು. ನಿಮ್ಮ ಶಿಕ್ಷೆಯನ್ನು ಸಮಾಧಾನವನ್ನಾಗಿ ಮಾಡುವೆನು. ಈಗ ನಿನ್ನನ್ನು ಹಿಂಸಿಸುವ ಜನರು ನಿನಗೆ ಸಹಾಯ ಮಾಡುವರು.
18 “ಇನ್ನು ಮುಂದೆ ಮತ್ತೆ ಹಿಂಸಾಚಾರದ ವರ್ತಮಾನವು ನಿನ್ನಲ್ಲಿರುವದಿಲ್ಲ. ಜನರು ಇನ್ನೆಂದಿಗೂ ನಿನ್ನ ಮೇಲೆರಗಿ ನಿನ್ನನ್ನು ದೋಚುವದಿಲ್ಲ. ನಿನ್ನ ಗೋಡೆಗಳಿಗೆ ‘ರಕ್ಷಣೆ’ ಎಂದೂ ದ್ವಾರಗಳಿಗೆ ‘ಸ್ತೋತ್ರ’ವೆಂದೂ ಹೆಸರಿಡುವಿ.
19 “ಇನ್ನು ಮುಂದೆ ಹಗಲು ಹೊತ್ತಿನಲ್ಲಿ ಸೂರ್ಯನು ನಿನಗೆ ಬೆಳಕಾಗಿರುವದಿಲ್ಲ; ರಾತ್ರಿಕಾಲದಲ್ಲಿ ಚಂದ್ರನ ಪ್ರಕಾಶವು ನಿನಗೆ ಬೆಳಕಾಗಿರುವದಿಲ್ಲ. ಯಾಕೆಂದರೆ ಯೆಹೋವನೇ ನಿನ್ನ ನಿತ್ಯಕಾಲದ ಬೆಳಕಾಗಿರುವನು. ನಿನ್ನ ದೇವರು ನಿನ್ನ ಮಹಿಮೆಯಾಗಿರುವನು.
20 ನಿನ್ನ ಸೂರ್ಯನು ಮತ್ತೆ ಅಸ್ತಮಾನವಾಗುವದಿಲ್ಲ. ನಿನ್ನ ಚಂದ್ರನು ಮತ್ತೆಂದಿಗೂ ಕಪ್ಪಾಗುವದಿಲ್ಲ. ಯಾಕೆಂದರೆ ಯೆಹೋವನು ನಿನ್ನ ನಿರಂತರದ ಬೆಳಕಾಗಿರುವನು. ನಿನ್ನ ದುಃಖದ ಕಾಲವು ಅಂತ್ಯವಾಗುವದು.
21 “ನಿನ್ನ ಜನರೆಲ್ಲಾ ನೀತಿಯಲ್ಲಿ ಜೀವಿಸುವರು. ಅವರು ಭೂಮಿಗೆ ಶಾಶ್ವತವಾದ ಬಾಧ್ಯಸ್ತರಾಗುವರು. ಆ ಜನರನ್ನು ನಾನೇ ನಿರ್ಮಿಸಿದೆನು. ನಾನು ನನ್ನ ಸ್ವಂತ ಕೈಗಳಿಂದ ನಿರ್ಮಿಸಿದ ಆಶ್ಚರ್ಯಕರವಾದ ಸಸಿಗಳಂತೆ ಅವರಿರುವರು.
22 ಅತ್ಯಂತ ಚಿಕ್ಕ ಕುಟುಂಬವು ದೊಡ್ಡ ಕುಲವಾಗುವದು. ಅತ್ಯಂತ ಎಳೆಯ ಕುಟುಂಬವು ಬಲಾಢ್ಯವಾದ ಜನಾಂಗವಾಗುವದು. ತಕ್ಕ ಕಾಲದಲ್ಲಿ ಯೆಹೋವನಾದ ನಾನು ಬೇಗನೆ ಬರುವೆನು. ಇವುಗಳೆಲ್ಲಾ ನೆರವೇರುವಂತೆ ಮಾಡುವೆನು.”
×

Alert

×