English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Jeremiah Chapters

Jeremiah 10 Verses

1 ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.
2 ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. ಆದರೆ ನೀವು ಅವುಗಳಿಗೆ ಹೆದರಬಾರದು.
3 ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.
4 ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ.
5 ಬೇರೆ ಜನಾಂಗದವರ ವಿಗ್ರಹಗಳು ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. ಅವರ ವಿಗ್ರಹಗಳು ಮಾತಾಡಲಾರವು; ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. ಅವು ನಿಮಗೆ ಕೇಡನ್ನೂ ಮಾಡಲಾರವು; ಸಹಾಯವನ್ನೂ ಮಾಡಲಾರವು.”
6 ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು.
7 ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.
8 ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ.
9 ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ.
10 ಯೆಹೋವನೊಬ್ಬನೇ ನಿಜವಾದ ದೇವರು. ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. ಜನಾಂಗಗಳು ಆತನ ಕೋಪವನ್ನು ತಡೆಯಲಾರವು.
11 ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’ ”
12 ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. ತನ್ನ ವಿವೇಕದಿಂದ ದೇವರು ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ.
13 ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.
14 ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ. [*ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು.]
15 ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.
16 ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.
17 ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. ವೈರಿಯು ನಗರವನ್ನು ಮುತ್ತಿದ್ದಾನೆ.
18 ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
19 ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.
20 ನನ್ನ ಗುಡಾರವು ಹಾಳಾಗಿದೆ. ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೊರಟುಹೋಗಿದ್ದಾರೆ. ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ.
21 ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. ಅವರು ಜ್ಞಾನಿಗಳಲ್ಲ, ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು.
22 ಕೇಳಿರಿ, ಉತ್ತರ ದಿಕ್ಕಿನಿಂದ ಬರುತ್ತಿರುವ ಮಹಾಧ್ವನಿಯನ್ನು! ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.
23 ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.
24 ಯೆಹೋವನೇ, ನಮ್ಮನ್ನು ತಿದ್ದು, ಆದರೆ ಕಠೋರನಾಗಬೇಡ, ಕೋಪದಲ್ಲಿ ನಮ್ಮನ್ನು ದಂಡಿಸಬೇಡ.
25 ನಿನಗೆ ಕೋಪ ಬಂದಿದ್ದರೆ ಬೇರೆ ಜನಾಂಗಗಳನ್ನು ಶಿಕ್ಷಿಸು. ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. ಅವರು ನಿನ್ನನ್ನು ಆರಾಧಿಸುವುದಿಲ್ಲ. ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು.
×

Alert

×