English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Job Chapters

Job 39 Verses

1 “ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ?
2 ಬೆಟ್ಟದ ಮೇಕೆಯೂ ಜಿಂಕೆಯೂ ತಮ್ಮ ಮರಿಗಳನ್ನು ಹೊಟ್ಟೆಯಲ್ಲಿ ಎಷ್ಟು ತಿಂಗಳವರೆಗೆ ಹೊತ್ತುಕೊಂಡಿರುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ಅವುಗಳು ಹುಟ್ಟುವುದಕ್ಕೆ ಸರಿಯಾದ ಸಮಯ ಯಾವುದೆಂದು ನಿನಗೆ ಗೊತ್ತಿದೆಯೋ?
3 ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ.
4 ಬೆಟ್ಟದಮೇಕೆ ಮರಿಗಳೂ ಜಿಂಕೆಯ ಮರಿಗಳೂ ಬಯಲುಗಳಲ್ಲಿ ಪುಷ್ಟಿಯಾಗಿ ಬೆಳೆಯುತ್ತವೆ. ಬಳಿಕ ಅವು ತಮ್ಮ ತಾಯಂದಿರನ್ನು ಬಿಟ್ಟುಹೋಗುತ್ತವೆ; ಹಿಂತಿರುಗಿ ಬರುವುದೇ ಇಲ್ಲ.
5 “ಯೋಬನೇ, ಸ್ವತಂತ್ರವಾಗಿರುವಂತೆ ಕಾಡುಕತ್ತೆಗಳನ್ನು ಕಳುಹಿಸಿದವರು ಯಾರು? ಅವುಗಳ ಹಗ್ಗಗಳನ್ನು ಬಿಚ್ಚಿ, ಅವುಗಳನ್ನು ಬಿಟ್ಟುಬಿಟ್ಟವರು ಯಾರು?
6 ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು.
7 ಕಾಡುಕತ್ತೆಯು ಗದ್ದಲವಿರುವ ಊರುಗಳ ಸಮೀಪಕ್ಕೂ ಹೋಗುವುದಿಲ್ಲ, ಯಾರೂ ಅವುಗಳನ್ನು ಪಳಗಿಸಿ ದುಡಿಸುವುದಿಲ್ಲ.
8 ಕಾಡುಕತ್ತೆಗಳು ಬೆಟ್ಟಗಳಲ್ಲಿ ವಾಸಿಸುತ್ತವೆ. ಹಸಿರಾದ ಏನನ್ನಾದರೂ ತಿನ್ನುವುದಕ್ಕೆ ಅವು ಅಲ್ಲಿಯೇ ಹುಡುಕುತ್ತವೆ.
9 “ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ?
10 ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
11 ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?
12 ಅದು ನಿನ್ನ ಬೆಳೆಯನ್ನು ಕೂಡಿಸಿ, ನಿನ್ನ ಕಣಕ್ಕೆ ಹೊತ್ತುಕೊಂಡು ಬರುವುದೆಂದು ಭರವಸವಿಡುವಿಯಾ?
13 “ಉಷ್ಟ್ರಪಕ್ಷಿಯು ಸಂತೋಷದಿಂದ ತನ್ನ ರೆಕ್ಕೆಗಳನ್ನು ಬಡಿದಾಡುವುದು. ಆದರೆ ಅದರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳಿಗೆ ಸರಿಹೋಲುವುದಿಲ್ಲ.
14 ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ.
15 ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ.
16 ಉಷ್ಟ್ರಪಕ್ಷಿಯು ತನ್ನ ಮರಿಗಳನ್ನು ಕಡೆಗಣಿಸಿ ತನ್ನ ಮರಿಗಳಲ್ಲವೆಂಬಂತೆ ವರ್ತಿಸುತ್ತದೆ; ಮರಿಗಳು ಸತ್ತುಹೋದರೆ ತನ್ನ ಪ್ರಯಾಸವು ವ್ಯರ್ಥವಾಯಿತೆಂಬ ಚಿಂತೆಯೂ ಅದಕ್ಕಿಲ್ಲ.
17 ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ, ಅದನ್ನು ಈ ರೀತಿ ನಿರ್ಮಿಸಿದವನು ನಾನೇ.
18 ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.
19 “ಯೋಬನೇ, ನೀನು ಕುದುರೆಗೆ ಶಕ್ತಿಯನ್ನು ಕೊಟ್ಟೆಯಾ? ಅದರ ಕೊರಳಿನ ಮೇಲಿನ ಕೇಸರವನ್ನು ಕೊಟ್ಟೆಯಾ?
20 ಮಿಡತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ.
21 ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ, ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು.
22 ಕುದುರೆಯು ಭಯವನ್ನು ಕಂಡು ನಗುವುದು; ಅದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿಹೋಗುವುದಿಲ್ಲ.
23 ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ.
24 ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! ಅದು ನೆಲದ ಮೇಲೆ ವೇಗವಾಗಿ ಓಡುವುದು; ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು.
25 ತುತ್ತೂರಿಯ ಧ್ವನಿಗೆ ಕುದುರೆಯು, “ಆಹಾ!” ಎಂದು ಹೇಳುತ್ತದೆ. ಅದು ದೂರದಿಂದಲೇ ಯುದ್ಧವನ್ನು ಮೂಸಿ ನೋಡಿ ತಿಳಿಯುವುದು. ಸೇನಾಧಿಪತಿಗಳು ಗಟ್ಟಿಯಾಗಿ ಅಪ್ಪಣೆಕೊಡುವುದನ್ನೂ ಯುದ್ಧದ ಎಲ್ಲಾ ಕೂಗಾಟವನ್ನೂ ಅದು ಕೇಳಿಸಿಕೊಳ್ಳುತ್ತದೆ.
26 “ಯೋಬನೇ, ತನ್ನ ರೆಕ್ಕೆಗಳನ್ನು ಚಾಚಿಕೊಂಡು ದಕ್ಷಿಣದ ಕಡೆಗೆ ಹಾರುವ ಗಿಡುಗಕ್ಕೆ ನೀನು ಹಾರುವುದನ್ನು ಕಲಿಸಿದೆಯೋ?
27 ನೀನು ಹದ್ದಿಗೆ ಹಾರಿಹೋಗಿ ಎತ್ತರವಾದ ಬೆಟ್ಟಗಳ ಮೇಲೆ ಗೂಡನ್ನು ಕಟ್ಟಿಕೊಳ್ಳಲು ಆಜ್ಞಾಪಿಸುವೆಯಾ?
28 ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ.
29 ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು.
30 ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.”
×

Alert

×