Indian Language Bible Word Collections
Job 9:3
Job Chapters
Job 9 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Job Chapters
Job 9 Verses
1
|
ಬಳಿಕ ಯೋಬನು ಪ್ರತ್ಯುತ್ತರವಾಗಿ ಇಂತೆಂದನು: |
2
|
“ಹೌದು, ನೀನು ಹೇಳಿದ್ದು ಸತ್ಯವೇ ಸರಿ! ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ? |
3
|
ಒಬ್ಬನು ದೇವರೊಂದಿಗೆ ವಾದಿಸಬಯಸಿದರೆ, ದೇವರ ಸಾವಿರ ಪ್ರಶ್ನೆಗಳಲ್ಲಿ ಮನುಷ್ಯನು ಒಂದಕ್ಕೂ ಉತ್ತರ ಕೊಡಲಾರನು. |
4
|
ದೇವರ ಜ್ಞಾನವು ಅಗಾಧವಾದದ್ದು; ಆತನ ಶಕ್ತಿಯು ಮಹತ್ವವಾದದ್ದು. ಯಾವನೂ ದೇವರಿಗೆ ವಿರೋಧವಾಗಿ ಜಯಗಳಿಸಲಾರನು. |
5
|
ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು. |
6
|
ಆತನು ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುವನು; ಅದರ ಅಸ್ತಿವಾರಗಳನ್ನು ನಡುಗಿಸುವನು. |
7
|
ಆತನು ಆಜ್ಞಾಪಿಸಿದರೆ, ಆತನ ಆಜ್ಞೆಯಂತೆಯೇ ಸೂರ್ಯೋದಯವಾಗದು. ನಕ್ಷತ್ರಗಳು ಪ್ರಕಾಶಿಸದಂತೆ ಆತನು ಅವುಗಳನ್ನು ಮುಚ್ಚಿಟ್ಟು ಮುದ್ರೆ ಹಾಕಬಲ್ಲನು. |
8
|
ಆಕಾಶಮಂಡಲವನ್ನು ಸೃಷ್ಟಿಸಿದವನು ಆತನೇ. ಆತನು ಭೋರ್ಗರೆಯುತ್ತಿರುವ ಸಮುದ್ರದ ಮೇಲೆ ನಡೆಯಬಲ್ಲನು. |
9
|
[This verse may not be a part of this translation] |
10
|
ಗ್ರಹಿಸಲಶಕ್ಯವಾದ ಅದ್ಭುತ ಕಾರ್ಯಗಳನ್ನೂ ಅಸಂಖ್ಯಾತವಾದ ಮಹತ್ಕಾರ್ಯಗಳನ್ನೂ ಆತನು ಮಾಡುವನು. |
11
|
ದೇವರು ನನ್ನ ಸಮೀಪದಲ್ಲಿ ಹಾದುಹೋದರೂ ನನಗೆ ಕಾಣಿಸದು; ನನ್ನ ಮುಂದೆ ಹೋದರೂ ನನಗೆ ತಿಳಿಯದು. |
12
|
ದೇವರೇ ತೆಗೆದುಕೊಳ್ಳುವುದಾದರೆ, ಆತನನ್ನು ತಡೆಯಬಲ್ಲವರು ಯಾರು? ‘ನೀನು ಏನು ಮಾಡುತ್ತಿರುವೆ’ ಎಂದು ಆತನನ್ನು ಕೇಳುವವರು ಯಾರು? |
13
|
ದೇವರು ತನ್ನ ಕೋಪವನ್ನು ತಡೆಹಿಡಿದುಕೊಳ್ಳುವುದಿಲ್ಲ. ರಹಬನ ಸಹಾಯಕರು ಸಹ ದೇವರ ಮುಂದೆ ಭಯದಿಂದ ಅಡ್ಡ ಬೀಳುವರು. |
14
|
“ಆದ್ದರಿಂದ ನಾನು ದೇವರೊಂದಿಗೆ ವಾದ ಮಾಡಲಾರೆ. ಆತನಿಗೆ ಉತ್ತರ ಕೊಡುವುದಕ್ಕೂ ನಾನು ಅಶಕ್ತನಾಗಿರುವೆ. |
15
|
ಯೋಬನಾದ ನಾನು ನಿರಪರಾಧಿಯಾಗಿದ್ದರೂ ಆತನಿಗೆ ಉತ್ತರವನ್ನು ಕೊಡಲಾರೆ. ನನಗೆ ಕರುಣೆ ತೋರುವಂತೆ ನ್ಯಾಯಾಧಿಪತಿಯಾದ ದೇವರನ್ನು ಬೇಡಿಕೊಳ್ಳುವೆನು. |
16
|
ನಾನು ಆತನಿಗೆ ಮೊರೆಯಿಟ್ಟಿದ್ದರೂ, ಆತನು ನನಗೆ ಉತ್ತರ ಕೊಟ್ಟಿದ್ದರೂ ಈಗ ಆತನು ನನಗೆ ಕಿವಿಗೊಡುತ್ತಾನೆ ಎಂಬುದರಲ್ಲಿ ನನಗೆ ನಂಬಿಕೆಯಿಲ್ಲ. |
17
|
ನನ್ನನ್ನು ಜಜ್ಜುವುದಕ್ಕಾಗಿ ದೇವರು ಬಿರುಗಾಳಿಗಳನ್ನು ಕಳುಹಿಸುವನು; ನಿಷ್ಕಾರಣವಾಗಿ ನನಗೆ ಗಾಯಮಾಡುವನು. |
18
|
ಉಸಿರೆಳೆದುಕೊಳ್ಳಲೂ ಬಿಡುವು ನೀಡದೆ ಕಷ್ಟದ ಮೇಲೆ ಕಷ್ಟವನ್ನು ಕೊಡುವನು. |
19
|
ಆತನನ್ನು ಸೋಲಿಸೋಣವೆಂದರೆ ಆತನೇ ಬಲಿಷ್ಠನಾಗಿದ್ದಾನೆ; ನ್ಯಾಯಾಲಯಕ್ಕೆ ಹೋಗೋಣ ಎಂದರೆ ಆತನನ್ನು ನ್ಯಾಯಾಲಯಕ್ಕೆ ಬರಮಾಡುವವನು ಯಾರು? |
20
|
ನಾನು ನಿರಪರಾಧಿಯಾಗಿದ್ದರೂ ನನ್ನ ಬಾಯಿ ನನ್ನನ್ನು ಖಂಡಿಸುವುದು; ನಾನು ನಿರ್ದೋಷಿಯಾಗಿದ್ದರೂ ನನ್ನ ಬಾಯಿ ನನ್ನನ್ನು ದೋಷಿಯೆಂದು ಹೇಳುವುದು. |
21
|
ನಾನು ನಿರಪರಾಧಿಯಾಗಿದ್ದರೂ ನನ್ನ ಬಗ್ಗೆ ಚಿಂತಿಸುವುದಿಲ್ಲ; ನನ್ನ ಜೀವಿತವನ್ನೇ ತುಚ್ಫೀಕರಿಸುವೆನು. |
22
|
ಜೀವಿತದಲ್ಲಿ ಎಲ್ಲರೂ ಒಂದೇ. ಆದ್ದರಿಂದ ಆತನು ಅಪರಾಧಿಗಳನ್ನೂ ನಿರಪರಾಧಿಗಳನ್ನೂ ನಾಶ ಮಾಡುತ್ತಾನೆ” ಎಂಬುದು ನನ್ನ ಆಲೋಚನೆ. |
23
|
ಪಕ್ಕನೆ ಆಪತ್ತಿಗೊಳಗಾಗಿ ನಿರಪರಾಧಿಯು ಸತ್ತರೆ, ದೇವರು ಅವನನ್ನು ನೋಡುತ್ತಾ ನಗುವನೇ? |
24
|
ದುಷ್ಟನು ಭೂಮಿಯನ್ನು ಆಕ್ರಮಿಸಿಕೊಂಡಾಗ, ದೇವರು ಅದನ್ನು ನ್ಯಾಯಾಧಿಪತಿಗಳಿಗೆ ಮರೆಮಾಡುವನೇ? ಇದು ಸತ್ಯವಾಗಿದ್ದರೆ, ಇದನ್ನು ದೇವರಲ್ಲದೆ ಯಾರು ಮಾಡಿದರು? |
25
|
“ನನ್ನ ದಿನಗಳು ಓಟಗಾರನಿಗಿಂತಲೂ ವೇಗವಾಗಿ ಹೋಗುತ್ತಿವೆ. ಸುಖವಿಲ್ಲದ ನನ್ನ ದಿನಗಳು ಹಾರಿ ಹೋಗುತ್ತಿವೆ. |
26
|
ಜಂಬುಗಿಡದಿಂದ ಮಾಡಿದ ದೋಣಿಗಳಂತೆಯೂ ಹದ್ದು ತನ್ನ ಬೇಟೆಯ ಮೇಲೆ ಎರಗಲು ಹಾರಿ ಹೋಗುವಂತೆಯೂ ನನ್ನ ದಿನಗಳು ವೇಗವಾಗಿ ಹೋಗುತ್ತಿವೆ. |
27
|
“ನಾನು ದೂರು ಹೇಳುವುದಿಲ್ಲ. ನನ್ನ ನೋವನ್ನು ಮರೆತು ನನ್ನ ಮುಖವನ್ನು ಮಾರ್ಪಡಿಸಿಕೊಂಡು ನಗುವೆನೆಂದರೆ, |
28
|
ನನ್ನ ಎಲ್ಲಾ ಸಂಕಟಗಳಿಂದ ಇನ್ನೂ ಭಯಗೊಂಡಿರುವೆ. ಯಾಕಂದರೆ ನನ್ನನ್ನು ಅಪರಾಧಿಯೆಂದು ದೇವರು ಹೇಳುತ್ತಿದ್ದಾನೆ. |
29
|
ಅಪರಾಧಿಯೆಂದು ಈಗಾಗಲೇ ನನಗೆ ತೀರ್ಪಾಗಿದೆ. ಹೀಗಿರಲು ನಾನೇಕೆ ವ್ಯರ್ಥ ಪ್ರಯತ್ನ ಮಾಡಲಿ? |
30
|
ನಾನು ಹಿಮದಿಂದ ಸ್ನಾನಮಾಡಿದರೂ ಸಾಬೂನಿನಿಂದ ಕೈತೊಳೆದುಕೊಂಡರೂ |
31
|
ದೇವರು ನನ್ನನ್ನು ಮಣ್ಣಿನ ಗುಂಡಿಗೆ ತಳ್ಳಿ ನನ್ನ ಬಟ್ಟೆಗಳಿಗೇ ನಾನು ಅಸಹ್ಯವಾಗುವಂತೆ ಮಾಡುವನು. |
32
|
“ದೇವರು ನನ್ನಂಥ ಮನುಷ್ಯನಲ್ಲ. ನಾನು ಆತನಿಗೆ ಉತ್ತರಿಸಲಾರೆ. ನಾವು ನ್ಯಾಯಾಲಯದಲ್ಲಿ ಒಬ್ಬರನ್ನೊಬ್ಬರು ಸಂಧಿಸಲಾರೆವು. |
33
|
ನಮ್ಮಿಬ್ಬರಿಗೆ ಮಧ್ಯಸ್ತಗಾರನಿದ್ದರೆ, ನಮ್ಮಿಬ್ಬರ ಮೇಲೆ ಅಧಿಕಾರವುಳ್ಳವನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. (ಆದರೆ ಅಂಥವರು ಯಾರೂ ಇಲ್ಲ.) |
34
|
ದೇವರ ದಂಡವನ್ನು ತೆಗೆದುಹಾಕುವ ಮಧ್ಯಸ್ತಗಾರನಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆಗ ಆತನು ನನ್ನನ್ನು ಹೆದರಿಸುತ್ತಿರಲಿಲ್ಲ. |
35
|
ಆಗ ನಾನು ಭಯವಿಲ್ಲದೆ ಮಾತಾಡುತ್ತಿದ್ದೆನು; ಆದರೆ ಈಗ ನನಗೆ ಸಾಧ್ಯವೇ ಇಲ್ಲ.” |