ಮತ್ತು ಎಲ್ಲಾ ಜನಾಂಗಗಳನ್ನು ನಾನು ಒಟ್ಟುಗೂಡಿಸುವೆನು. ಆ ದೇಶಗಳನ್ನು ಯೆಹೋಷಾಫಾಟ್ ತಗ್ಗಿಗೆ [*ಯೆಹೋಷಾಫಾಟ್ ತಗ್ಗು ಈ ಹೆಸರಿನ ಅರ್ಥ “ಯೆಹೋವನು ನ್ಯಾಯತೀರಿಸುತ್ತಾನೆ.”] ಕರೆತರುವೆನು. ಅಲ್ಲಿ ಅವರಿಗೆ ನ್ಯಾಯತೀರಿಸುವೆನು. ಆ ದೇಶಗಳವರು ನನ್ನ ಜನರಾದ ಇಸ್ರೇಲರನ್ನು ಚದರಿಸಿದ್ದರು. ಅವರನ್ನು ಪರದೇಶಗಳಲ್ಲಿ ವಾಸಿಸುವಂತೆ ಮಾಡಿದರು. ಆದ್ದರಿಂದ ಆ ದೇಶಗಳವರನ್ನು ನಾನು ಶಿಕ್ಷಿಸುವೆನು. ಆ ದೇಶದವರು ನನ್ನ ದೇಶವನ್ನು ವಿಭಜಿಸಿದರು.
“ತೂರೇ, ಸೀದೋನೇ, ಫಿಲಿಷ್ಟಿಯ ದೇಶಗಳೇ, ನೀವು ನನಗೆ ಎಷ್ಟರವರು? ನಾನು ಮಾಡಿದುದಕ್ಕೆ ನೀವು ನನ್ನನ್ನು ಶಿಕ್ಷಿಸುತ್ತೀರಾ? ನೀವು ಒಂದುವೇಳೆ ನನ್ನನ್ನು ಶಿಕ್ಷಿಸುತ್ತಿದ್ದೀರಿ ಎಂದು ನೆನಸಬಹುದು. ಆದರೆ ನಾನು ಬೇಗನೇ ನಿಮ್ಮನ್ನು ಶಿಕ್ಷಿಸುವೆನು.
ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.
“ಆಗ ನಾನು ನಿಮ್ಮ ದೇವರಾದ ಯೆಹೋವನು ಎಂದು ಅರಿತುಕೊಳ್ಳುವಿರಿ. ನಾನು ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ವಾಸಿಸುವೆನು. ಜೆರುಸಲೇಮ್ ಪರಿಶುದ್ಧವಾಗುವದು. ಪರದೇಶಿಗಳು ಇನ್ನು ಮುಂದೆ ಅದನ್ನು ದಾಟಿಹೋಗುವುದಿಲ್ಲ.
“ಆ ದಿವಸ ಸಿಹಿ ದ್ರಾಕ್ಷಾರಸವು ಬೆಟ್ಟಗಳಿಂದ ಹರಿಯುವುದು. ಬೆಟ್ಟಗಳಲ್ಲಿ ಹಾಲು ಹರಿಯುವುದು. ಮತ್ತು ಯೆಹೂದದ ಬತ್ತಿದ ನದಿಗಳಲ್ಲಿ ನೀರು ತುಂಬಿ ಹರಿಯುವದು. ಯೆಹೋವನ ಆಲಯದಿಂದ ಬುಗ್ಗೆಯು ಹೊರಡುವದು. ಅಕಾಸಿಯ ಕಣಿವೆಗೆ ನೀರನ್ನು ಕೊಡುವದು.