ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.
ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.
ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.
ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು.
ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.
“ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.
ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.
ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.
(ಮತ್ತಾಯ 26:1-5; ಮಾರ್ಕ 14:1-2; ಲೂಕ 22:1-2) ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.
ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.
ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
ಆದರೆ ಮಹಾಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.