ಈಗ ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಹೀಗಿರಲು, ಈ ಸಂಗತಿಗಳೆಲ್ಲಾ ನೆರವೇರುವ ಕಾಲ ಬಂದಾಗ ನನ್ನ ಎಚ್ಚರಿಕೆಯ ಮಾತುಗಳನ್ನು ನೀವು ಜ್ಞಾಪಿಸಿಕೊಳ್ಳುವಿರಿ. “ನಾನು ಈ ಸಂಗತಿಗಳನ್ನೆಲ್ಲಾ ನಿಮಗೆ ಆರಂಭದಲ್ಲೇ ತಿಳಿಸಲಿಲ್ಲ. ಏಕೆಂದರೆ, ಆಗ ನಾನು ನಿಮ್ಮ ಸಂಗಡವಿದ್ದೆನು.
ಆದರೆ ನಾನು ನಿಮಗೆ ಸತ್ಯವನ್ನೇ ಹೇಳುತ್ತೇನೆ. ನಾನು ಹೋಗುವುದು ನಿಮ್ಮ ಒಳ್ಳೆಯದಕ್ಕಾಗಿಯೇ ಏಕೆಂದರೆ ನಾನು ಹೋಗಿ ಸಹಾಯಕನನ್ನು ನಿಮ್ಮ ಬಳಿಗೆ ಕಳುಹಿಸುವೆನು. ನಾನು ಹೋಗದಿದ್ದರೆ, ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ.
ಆದರೆ ಸತ್ಯದ ಆತ್ಮನು ಬಂದಾಗ, ಆತನು ನಿಮ್ಮನ್ನು ಸಕಲ ವಿಷಯದಲ್ಲಿಯೂ ಸತ್ಯಕ್ಕೆ ನಡೆಸುವನು. ಸತ್ಯದ ಆತ್ಮನು ಹೇಳುವುದು ಆತನ ಸ್ವಂತ ಮಾತುಗಳಲ್ಲ. ತಾನು ಕೇಳಿದ್ದನ್ನು ಮಾತ್ರ ಆತನು ಹೇಳುತ್ತಾನೆ. ಸಂಭವಿಸಲಿರುವ ಸಂಗತಿಗಳನ್ನು ಆತನು ನಿಮಗೆ ತಿಳಿಸುತ್ತಾನೆ.
ಶಿಷ್ಯರಲ್ಲಿ ಕೆಲವರು, “ ‘ಸ್ವಲ್ಪಕಾಲದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ಪಲ್ಪಕಾಲವಾದ ಬಳಿಕ ನನ್ನನ್ನು ಮತ್ತೆ ನೋಡುವಿರಿ. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ’ ಎಂದು ಆತನು ಹೇಳಿದ್ದರ ಅರ್ಥವೇನು?” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.
ಶಿಷ್ಯರು ಇದರ ಬಗ್ಗೆ ತನ್ನನ್ನು ಕೇಳಬೇಕೆಂದಿದ್ದಾರೆ ಎಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು, “ ‘ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಆದರೆ ಅನಂತರ ಸ್ವಲ್ಪಕಾಲವಾದ ಬಳಿಕ ನನ್ನನ್ನು ನೋಡುವಿರಿ’ ಎಂದು ನಾನು ಹೇಳಿದ್ದರ ಅರ್ಥವೇನೆಂದು ನೀವು ಒಬ್ಬರನ್ನೊಬ್ಬರು ಕೇಳುತ್ತಿದ್ದೀರಾ?
ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.
ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ.
“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.