(ಮತ್ತಾಯ 26:47-56; ಮಾರ್ಕ 14:43-50; ಲೂಕ 22:47-53) ಯೇಸು ಪ್ರಾರ್ಥಿಸಿದ ಮೇಲೆ ತನ್ನ ಶಿಷ್ಯರೊಂದಿಗೆ ಹೊರಟನು. ಅವರು ಕಿದ್ರೋನ್ ಕಣಿವೆಯನ್ನು ದಾಟಿಹೋದರು. ಅದರ ಮತ್ತೊಂದು ಕಡೆಯಲ್ಲಿ ಆಲಿವ್ ಮರಗಳ ತೋಟವಿತ್ತು. ಯೇಸು ಮತ್ತು ಆತನ ಶಿಷ್ಯರು ಅಲ್ಲಿಗೆ ಹೋದರು.
ಯೂದನು ಸೈನಿಕರ ಗುಂಪೊಂದನ್ನೂ ಮಹಾಯಾಜಕರ ಮತ್ತು ಫರಿಸಾಯರ ಕಾವಲುಗಾರರಲ್ಲಿ ಕೆಲವರನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಅವರು ದೀವಟಿಗೆ, ಪಂಜು ಮತ್ತು ಆಯುಧಗಳಿಂದ ಸುಸಜ್ಜಿತರಾಗಿದ್ದರು.
(ಮತ್ತಾಯ 26:69-70; ಮಾರ್ಕ 14:66-68; ಲೂಕ 22:55-57) ಸೀಮೋನ್ ಪೇತ್ರ ಮತ್ತು ಯೇಸುವಿನ ಶಿಷ್ಯರಲ್ಲಿ ಮತ್ತೊಬ್ಬನು ಯೇಸುವಿನೊಂದಿಗೆ ಹೋದರು. ಆ ಮತ್ತೊಬ್ಬ ಶಿಷ್ಯನಿಗೆ ಪ್ರಧಾನಯಾಜಕನ ಪರಿಚಯವಿತ್ತು. ಆದ್ದರಿಂದ ಅವನು ಪ್ರಧಾನ ಯಾಜಕನ ಮನೆಯ ಅಂಗಳದೊಳಗೆ ಹೋದನು.
ಆದರೆ ಪೇತ್ರನು ಹೊರಗೆ ಬಾಗಿಲಿನ ಸಮೀಪದಲ್ಲಿ ಕಾದುಕೊಂಡಿದ್ದನು. ಪ್ರಧಾನಯಾಜಕನ ಪರಿಚಯವಿದ್ದ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಯೊಂದಿಗೆ ಮಾತಾಡಿ ಪೇತ್ರನನ್ನು ಒಳಗೆ ಕರೆದುಕೊಂಡು ಹೋದನು.
ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಜನರೊಂದಿಗೆ ಮಾತಾಡಿದ್ದೇನೆ; ಯಾವಾಗಲೂ ಸಭಾಮಂದಿರಗಳಲ್ಲಿ ಮತ್ತು ದೇವಾಲಯದಲ್ಲಿ ಬೋಧಿಸಿದ್ದೇನೆ. ಯೆಹೂದ್ಯರೆಲ್ಲರೂ ಅಲ್ಲಿಗೆ ಒಟ್ಟಾಗಿ ಸೇರಿಬರುತ್ತಿದ್ದರು. ನಾನು ಯಾವುದನ್ನೂ ರಹಸ್ಯವಾಗಿ ಎಂದೂ ಹೇಳಿಲ್ಲ.
ಯೇಸು, “ನಾನು ತಪ್ಪಾಗಿ ಮಾತಾಡಿದ್ದರೆ, ನಾನು ಹೇಳಿದ್ದು ತಪ್ಪೆಂದು ಎಲ್ಲರಿಗೂ ತೋರಿಸಿಕೊಡು. ಆದರೆ ನಾನು ಹೇಳಿದ್ದು ಸರಿಯಾಗಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದು ಉತ್ತರಕೊಟ್ಟನು.
(ಮತ್ತಾಯ 26:71-75; ಮಾರ್ಕ 14:69-72; ಲೂಕ 22:58-62) ಸೀಮೋನ್ ಪೇತ್ರನು ತನ್ನನ್ನು ಬೆಚ್ಚಗೆ ಮಾಡಿಕೊಳ್ಳುತ್ತಾ ಬೆಂಕಿಯ ಸಮೀಪದಲ್ಲಿ ನಿಂತುಕೊಂಡಿದ್ದನು. ಅಲ್ಲಿದ್ದವರು ಪೇತ್ರನಿಗೆ, “ಆ ಮನುಷ್ಯನ ಶಿಷ್ಯರಲ್ಲಿ ನೀನೂ ಒಬ್ಬನಲ್ಲವೇ?” ಎಂದು ಕೇಳಿದರು. ಆದರೆ ಪೇತ್ರನು, “ಇಲ್ಲ, ನಾನಲ್ಲ!” ಎಂದು ಹೇಳಿದನು.
ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಆ ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.
ಬಳಿಕ ಯೆಹೂದ್ಯರು ಯೇಸುವನ್ನು ಕಾಯಫನ ಮನೆಯಿಂದ ರೋಮ್ ರಾಜ್ಯಪಾಲನ ಭವನಕ್ಕೆ ಕರೆದುಕೊಂಡು ಬಂದರು. ಆಗ ಮುಂಜಾನೆಯಾಗಿತ್ತು. ಯೆಹೂದ್ಯರು ಭವನದೊಳಗೆ ಹೋಗಲಿಲ್ಲ. ಅವರು ಪಸ್ಕಹಬ್ಬದ ಊಟಮಾಡ ಬೇಕೆಂದಿದ್ದ ಕಾರಣ ತಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಲು ಇಷ್ಟಪಡಲಿಲ್ಲ.
ಪಿಲಾತನು ಯೆಹೂದ್ಯರಿಗೆ, “ಯೆಹೂದ್ಯರಾದ ನೀವೇ ಇವನನ್ನು ಕರೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ತೀರ್ಪುಮಾಡಿ” ಎಂದು ಹೇಳಿದನು. ಯೆಹೂದ್ಯರು, “ಆದರೆ ಒಬ್ಬನಿಗೆ ಮರಣದಂಡನೆ ವಿಧಿಸಲು ನಿನ್ನ ಕಾನೂನು ನಮಗೆ ಅವಕಾಶ ಕೊಡುವುದಿಲ್ಲ” ಎಂದು ಉತ್ತರಕೊಟ್ಟರು.
ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.
ಪಿಲಾತನು, “ಹಾಗಾದರೆ ನೀನು ರಾಜ!” ಎಂದನು. ಯೇಸು, “ನೀನೇ ನನ್ನನ್ನು ರಾಜನೆಂದು ಹೇಳುತ್ತಿರುವೆ. ಅದು ಸತ್ಯ. ನಾನು ಜನರಿಗೆ ಸತ್ಯದ ಬಗ್ಗೆ ಹೇಳುವುದಕ್ಕಾಗಿಯೇ ಹುಟ್ಟಿದೆನು. ಆದಕಾರಣವೇ ನಾನು ಈ ಲೋಕಕ್ಕೆ ಬಂದೆನು. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನೂ ನನಗೆ ಕಿವಿಗೊಡುತ್ತಾನೆ” ಎಂದು ಉತ್ತರಕೊಟ್ಟನು.
ಆದರೆ ಪಸ್ಕಹಬ್ಬದ ಕಾಲದಲ್ಲಿ ನಾನು ನಿಮಗೋಸ್ಕರ ಕೈದಿಗಳಲ್ಲಿ ಒಬ್ಬನನ್ನು ಬಿಡುಗಡೆ ಮಾಡುವುದು ನಿಮ್ಮ ಪದ್ಧತಿಯಾಗಿದೆ. ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ನೀವು ಬಯಸುತ್ತೀರಾ?” ಎಂದು ಕೇಳಿದನು.