ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.
ಬಳಿಕ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ಅವುಗಳಿಗಾಗಿ ದೇವರಿಗೆ ಸ್ತೋತ್ರಸಲ್ಲಿಸಿ, ಕುಳಿತುಕೊಂಡಿದ್ದ ಜನರಿಗೆ ಕೊಟ್ಟನು. ಆತನು ಮೀನುಗಳನ್ನು ಕೊಡುವಾಗಲೂ ಅದೇ ರೀತಿ ಮಾಡಿದನು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.
ಆದ್ದರಿಂದ ಶಿಷ್ಯರು ಉಳಿದುಹೋಗಿದ್ದ ತುಂಡುಗಳನ್ನು ಒಟ್ಟುಗೂಡಿಸಿದರು. ಜನರು ತಿನ್ನಲು ಆರಂಭಿಸಿದಾಗ ಕೇವಲ ಐದು ಜವೆಗೋದಿಯ ರೊಟ್ಟಿಗಳಿದ್ದವು. ಆದರೆ ಶಿಷ್ಯರು ಉಳಿದುಹೋದ ಆಹಾರದ ತುಂಡುಗಳನ್ನು ಒಟ್ಟುಗೂಡಿಸಿದಾಗ ಹನ್ನೆರಡು ದೊಡ್ಡ ಬುಟ್ಟಿಗಳು ತುಂಬಿಹೋದವು.
ಅವರು ಹುಟ್ಟುಹಾಕುತ್ತಾ ಸುಮಾರು ಮೂರು ಅಥವಾ ನಾಲ್ಕು ಮೈಲಿಗಳವರೆಗೆ ದೋಣಿಯನ್ನು ನಡೆಸಿದ ನಂತರ ಯೇಸುವನ್ನು ಕಂಡರು. ಆತನು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುತ್ತಿರುವುದನ್ನು ಕಂಡು ಅವರಿಗೆ ಭಯವಾಯಿತು.
ಮರುದಿನವಾಯಿತು. ಕೆಲವು ಜನರು ಸರೋವರದ ಮತ್ತೊಂದು ಕಡೆಯಲ್ಲಿ ಉಳಿದುಕೊಂಡಿದ್ದರು. ಯೇಸು ತನ್ನ ಶಿಷ್ಯರೊಂದಿಗೆ ದೋಣಿಯಲ್ಲಿ ಹೋಗಲಿಲ್ಲ ಎಂಬುದು ಈ ಜನರಿಗೆ ತಿಳಿದಿತ್ತು. ಯೇಸುವಿನ ಶಿಷ್ಯರು ಮಾತ್ರ ದೋಣಿಯಲ್ಲಿ ಹೋದರೆಂಬುದೂ ಮತ್ತು ಅದೊಂದು ದೋಣಿ ಮಾತ್ರ ಅಲ್ಲಿತ್ತೆಂಬುದೂ ಅವರಿಗೆ ಗೊತ್ತಿತ್ತು.
ಆದರೆ ಅಷ್ಟರಲ್ಲಿಯೇ, ಕೆಲವು ದೋಣಿಗಳು ತಿಬೇರಿಯಾದಿಂದ ಬಂದವು. ಅವರು ಊಟ ಮಾಡಿದ ಸ್ಥಳಕ್ಕೆ ಸಮೀಪದ ದಡದಲ್ಲಿಯೇ ಆ ದೋಣಿಗಳು ನಿಂತುಕೊಂಡವು. ಪ್ರಭುವು ಸ್ತೋತ್ರ ಮಾಡಿದ ಮೇಲೆ ಅವರು ರೊಟ್ಟಿಯನ್ನು ಆ ಸ್ಥಳದಲ್ಲೇ ತಿಂದಿದ್ದರು.
ಯೇಸು, “ನೀವು ನನ್ನನ್ನು ಏಕೆ ಹುಡುಕುತ್ತಿದ್ದೀರಿ? ನನ್ನ ಅಧಿಕಾರವನ್ನು ನಿರೂಪಿಸುವ ನನ್ನ ಅದ್ಭುತಕಾರ್ಯಗಳನ್ನು ಕಂಡು ನೀವು ನನ್ನನ್ನು ಹುಡುಕುತ್ತಿದ್ದೀರೋ? ಇಲ್ಲ! ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ರೊಟ್ಟಿಯನ್ನು ತೃಪ್ತಿಯಾಗುವಷ್ಟು ತಿಂದಕಾರಣ ನನ್ನನ್ನು ಹುಡುಕುತ್ತಿದ್ದೀರಿ.
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.
ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ [✡ಉಲ್ಲೇಖನ: ಕೀರ್ತನೆ. 78:24.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು.
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ಜನರಿಗೆ ಪರಲೋಕದಿಂದ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ. ಆದರೆ ನನ್ನ ತಂದೆಯು ನಿಮಗೆ ಪರಲೋಕದಿಂದ ನಿಜವಾದ ರೊಟ್ಟಿಯನ್ನು ಕೊಡುವನು.
ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.
ದೇವರು ನನಗೆ ಕೊಟ್ಟಿರುವ ಯಾವ ವ್ಯಕ್ತಿಯನ್ನೂ ನಾನು ಕಳೆದುಕೊಳ್ಳಕೂಡದು. ಅಲ್ಲದೆ ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸಬೇಕು. ನನ್ನನ್ನು ಕಳುಹಿಸಿದಾತನು ಆ ಕಾರ್ಯವನ್ನೇ ನನ್ನಿಂದ ಅಪೇಕ್ಷಿಸುತ್ತಾನೆ.
ಮಗನನ್ನು ನೋಡಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು. ನನ್ನ ತಂದೆಯು ಬಯಸುವುದು ಇದನ್ನೇ” ಎಂದನು.
ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.
‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ [✡ಉಲ್ಲೇಖನ: ಯೆಶಾಯ 54:13.] ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.
ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಮನುಷ್ಯಕುಮಾರನ ದೇಹವನ್ನು ತಿನ್ನಲೇಬೇಕು. ಆತನ ರಕ್ತವನ್ನು ಕುಡಿಯಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮಲ್ಲಿ ನಿಜವಾದ ಜೀವ ಇರುವುದಿಲ್ಲ.
ನಮ್ಮ ಪಿತೃಗಳು ತಿಂದ ರೊಟ್ಟಿಯಂತಲ್ಲ ನಾನು. ಅವರು ಆ ರೊಟ್ಟಿಯನ್ನು ತಿಂದರೂ ಎಲ್ಲಾ ಜನರಂತೆ ಸತ್ತು ಹೋದರು. ನಾನು ಪರಲೋಕದಿಂದ ಇಳಿದುಬಂದ ರೊಟ್ಟಿ. ಈ ರೊಟ್ಟಿಯನ್ನು ತಿನ್ನುವವನು ಸದಾಕಾಲ ಜೀವಿಸುವನು,” ಎಂದು ಹೇಳಿದನು.
ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.