ಇದು ಕಾನಾನ್ ದೇಶದ ಶೀಲೋವಿನಲ್ಲಿ ನಡೆಯಿತು. ಲೇವಿ ಕುಲಾಧಿಪತಿಗಳು ಅವರಿಗೆ, “ಯೆಹೋವನು ಮೋಶೆಗೆ ಆಜ್ಞಾಪಿಸಿರುವಂತೆ ನೀವು ನಮಗೆ ವಾಸಮಾಡುವುದಕ್ಕೆ ಪಟ್ಟಣಗಳನ್ನೂ ನಮ್ಮ ಪಶುಗಳು ಮೇಯುವುದಕ್ಕಾಗಿ ಹೊಲಗಳನ್ನೂ ಕೊಡಬೇಕು” ಎಂದು ಹೇಳಿದರು.
ಕೆಹಾತ್ಯರ ಒಂದು ಭಾಗಕ್ಕೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳ ಭೂ ಭಾಗದಿಂದ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು, ಕೆಹಾತ್ಯರು ಲೇವಿ ಕುಲದವನೂ ಯಾಜಕನೂ ಆದ ಆರೋನನ ಸಂತತಿಯವರಾಗಿದ್ದರು.
ಗೇರ್ಷೋನ್ಯ ಗೋತ್ರದವರಿಗೆ ಹದಿಮೂರು ಪಟ್ಟಣಗಳನ್ನು ಕೊಡಲಾಯಿತು. ಈ ಪಟ್ಟಣಗಳು ಇಸ್ಸಾಕಾರ್, ಆಶೇರ್, ನಫ್ತಾಲಿ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧಕುಲದವರಿಗೆ ಸೇರಿದ ಪ್ರದೇಶಗಳಲ್ಲಿದ್ದವು.
ಆಯಿನ್, ಯುಟ್ಟಾ ಮತ್ತು ಬೇತ್ಷೆಮೆಷ್ ಎಂಬ ಪಟ್ಟಣಗಳನ್ನು ಸಹ ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣಗಳ ಸಮೀಪದಲ್ಲಿದ್ದ ಭೂಮಿಯನ್ನು ಸಹ ಕೊಟ್ಟರು. ಈ ಎರಡು ಗುಂಪುಗಳಿಗೆ ಅವರು ಒಂಭತ್ತು ಪಟ್ಟಣಗಳನ್ನು ಕೊಟ್ಟರು.
ಮನಸ್ಸೆಕುಲದ ಅರ್ಧಜನರು ಅವರಿಗೆ ತಾನಾಕ್ ಮತ್ತು ಗತ್ರಿಮ್ಮೋನ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಮನಸ್ಸೆಕುಲದ ಅರ್ಧಜನರು ಅವರಿಗೆ ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ಲೇವಿಯ ಸಂತತಿಯವರಾದ ಗೇರ್ಷೋನ್ಯರಿಗೆ ಈ ಊರುಗಳನ್ನು ಕೊಡಲಾಯಿತು: ಮನಸ್ಸೆಕುಲದ ಅರ್ಧಜನರು ಅವರಿಗೆ ಬಾಷಾನಿನಲ್ಲಿದ್ದ ಆಶ್ರಯನಗರವಾದ ಗೋಲಾನ್ ನಗರವನ್ನು ಕೊಟ್ಟರು. ಮನಸ್ಸೆಯವರು ಬೆಯೆಷ್ಟೆರಾವನ್ನು ಸಹ ಅವರಿಗೆ ಕೊಟ್ಟರು. ಒಟ್ಟಿನಲ್ಲಿ ಈ ಮನಸ್ಸೆಕುಲದ ಅರ್ಧಜನರು ಎರಡು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ಹೆಲ್ಕಾತ್, ರೆಹೋಬ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಆಶೇರರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ನಫ್ತಾಲಿ ಕುಲದವರು ಗಲಿಲಾಯದ ಆಶ್ರಯನಗರವಾದ ಕೆದೆಷ್, ಹಮ್ಮೋತ್ದೋರ್, ಕರ್ತಾನ್ ಎಂಬವುಗಳನ್ನು ಕೊಟ್ಟರು. ಒಟ್ಟಿನಲ್ಲಿ ನಫ್ತಾಲಿಯರು ಮೂರು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಆ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ದಿಮ್ನಾ, ನಹಲಾಲ್ಗಳನ್ನು ಕೊಟ್ಟರು. ಒಟ್ಟಿನಲ್ಲಿ ಜೆಬುಲೂನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ಕೆದೇಮೋತ್, ಮೇಫಾಗತ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ರೂಬೇನ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ಹೆಷ್ಬೋನ್, ಯಗ್ಜೇರ್ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಗಾದ್ಯರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
ಹೀಗೆ ಲೇವಿಯರು ಒಟ್ಟಿನಲ್ಲಿ ನಲವತ್ತೆಂಟು ಪಟ್ಟಣಗಳನ್ನು ಮತ್ತು ತಮ್ಮ ಪಶುಗಳಿಗಾಗಿ ಪ್ರತಿಯೊಂದು ಪಟ್ಟಣದ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಪಡೆದರು. ಈ ಎಲ್ಲ ಪಟ್ಟಣಗಳು ಬೇರೆ ಕುಲದವರ ಪ್ರದೇಶಗಳಲ್ಲಿದ್ದವು.
ಯೆಹೋವನು ಅವರ ಪೂರ್ವಿಕರಿಗೆ ಪ್ರಮಾಣ ಮಾಡಿದಂತೆ ಅವರ ಪ್ರದೇಶದಲ್ಲೆಲ್ಲಾ ಶಾಂತಿ ನೆಲೆಸುವಂತೆ ಮಾಡಿದನು. ಅವರ ಯಾವ ಶತ್ರುಗಳೂ ಅವರನ್ನು ಸೋಲಿಸಲಿಲ್ಲ. ಇಸ್ರೇಲರು ತಮ್ಮ ಎಲ್ಲ ಶತ್ರುಗಳನ್ನು ಸೋಲಿಸುವಂತೆ ಯೆಹೋವನು ಮಾಡಿದನು.