ಏಕೆಂದರೆ ನೀನು ಗರ್ಭವತಿಯಾಗಿರುವೆ ಮತ್ತು ನಿನಗೊಬ್ಬ ಮಗನು ಹುಟ್ಟಲಿದ್ದಾನೆ. ಅವನು ಹುಟ್ಟಿದಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾಗಿದ್ದಾನೆ. ಆದ್ದರಿಂದ ಅವನ ಕೂದಲನ್ನು ಕತ್ತರಿಸಕೂಡದು. ಅವನು ಇಸ್ರೇಲರನ್ನು ಫಿಲಿಷ್ಟಿಯರ ಹಿಡಿತದಿಂದ ಬಿಡಿಸುವನು” ಎಂದು ಹೇಳಿದನು.
ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.
ಆದರೆ ಅವನು ನನಗೆ, ‘ನೀನು ಗರ್ಭವತಿಯಾಗಿರುವೆ; ನಿನಗೊಬ್ಬ ಮಗನು ಹುಟ್ಟುತ್ತಾನೆ. ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ. ಯಾವ ನಿಷಿದ್ಧ ಆಹಾರವನ್ನೂ ತಿನ್ನಬೇಡ. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೂ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು’ ” ಅಂದಳು.
ಆಗ ಮಾನೋಹನು ಯೆಹೋವನಿಗೆ, “ಸ್ವಾಮೀ, ಆ ದೇವಪುರುಷನನ್ನು ನಮ್ಮಲ್ಲಿಗೆ ಇನ್ನೊಮ್ಮೆ ದಯವಿಟ್ಟು ಕಳುಹಿಸೆಂದು ಬೇಡಿಕೊಳ್ಳುತ್ತೇವೆ. ಹುಟ್ಟಿಲಿರುವ ಮಗನಿಗಾಗಿ ನಾವು ಮಾಡಬೇಕಾದದ್ದನ್ನು ಅವನು ನಮಗೆ ತಿಳಿಸಲಿ” ಎಂದು ಬೇಡಿಕೊಂಡನು.
ಮಾನೋಹನು ಎದ್ದು ತನ್ನ ಹೆಂಡತಿಯನ್ನು ಹಿಂಬಾಲಿಸಿದನು. ಅವನು ಆ ಮನುಷ್ಯನ ಹತ್ತಿರ ಬಂದಾಗ, “ನನ್ನ ಹೆಂಡತಿಯ ಜೊತೆಗೆ ಹಿಂದೆ ಮಾತನಾಡಿದ ಮನುಷ್ಯನು ನೀನೋ?” ಎಂದು ಕೇಳಿದನು. ಆ ದೇವದೂತನು, “ಹೌದು, ನಾನೇ” ಅಂದನು.
ಯೆಹೋವನ ದೂತನು ಮಾನೋಹನಿಗೆ, “ನಿನ್ನ ಹೆಂಡತಿಯು ನಾನು ಹೇಳಿದ್ದೆಲ್ಲವನ್ನು ಮಾಡಬೇಕು. ಅವಳು ದ್ರಾಕ್ಷಾಫಲಗಳನ್ನು ತಿನ್ನಬಾರದು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬಾರದು.
ಆಗ ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ಹೋಗದಂತೆ ನಿಲ್ಲಿಸಿಕೊಂಡರೂ ಸಹ ನಾನು ನಿಮ್ಮ ಆಹಾರವನ್ನು ಊಟ ಮಾಡುವುದಿಲ್ಲ. ಏನಾದರೂ ಕೊಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸು” ಅಂದನು. (ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.)
ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು.
ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.