ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ. ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.
ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು. ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.
ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು; ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.
ಹೀಗಿರಲು ನೀನು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.
“ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು.7 ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ? ಆಶೇರ್ ಕುಲದವರು ಸಮುದ್ರತೀರದಲ್ಲಿ ಉಳಿದರು; ಅವರು ಸುರಕ್ಷಿತವಾದ ರೇವುಗಳಲ್ಲಿ ಬೀಡುಬಿಟ್ಟರು.
ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು, ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದು ಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ! ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು. ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ! ನಲವತ್ತು ವರುಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.