Indian Language Bible Word Collections
Lamentations 3:38
Lamentations Chapters
Lamentations 3 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Lamentations Chapters
Lamentations 3 Verses
1
|
ಯೆಹೋವನ ರೌದ್ರ ದಂಡದಿಂದ ಸಂಕಟವನ್ನು ಅನುಭವಿಸಿರುವವನು ನಾನೇ! |
2
|
ಯೆಹೋವನು ನನ್ನನ್ನು ಬೆಳಕೇ ಇಲ್ಲದ ಕತ್ತಲೆಗೆ ನಡೆಸಿಕೊಂಡು ಬಂದನು. |
3
|
ಯೆಹೋವನು ತನ್ನ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದನು. ಆತನು ಇಡೀ ದಿನವೆಲ್ಲಾ ಮತ್ತೆಮತ್ತೆ ಹಾಗೆಯೇ ಮಾಡಿದನು. |
4
|
ಆತನು ನನ್ನ ಮಾಂಸವನ್ನು ಮತ್ತು ಚರ್ಮವನ್ನು ಕಂದಿಸಿದ್ದಾನೆ. ಆತನು ನನ್ನ ಮೂಳೆಗಳನ್ನು ಮುರಿದುಹಾಕಿದನು. |
5
|
ಆತನು ನನ್ನನ್ನು ಕಠೋರತೆಯಿಂದಲೂ ಆಪತ್ತಿನಿಂದಲೂ ಸುತ್ತುವರಿದು ಮುತ್ತಿಗೆ ಹಾಕಿದ್ದಾನೆ. |
6
|
ಬಹುಕಾಲದ ಹಿಂದೆಯೇ ಸತ್ತಿರುವವರಂತೆ ನನ್ನನ್ನು ಕತ್ತಲೆಯಲ್ಲಿ ಕುಳ್ಳಿರಿಸಿದ್ದಾನೆ. |
7
|
ಯೆಹೋವನು ನನ್ನನ್ನು ಬಂಧಿಸಿ ನಾನು ಹೊರಗೆ ಬರಲಾಗದಂತೆ ಮಾಡಿದನು. ಆತನು ನನ್ನನ್ನು ಬಲವಾದ ಸರಪಣಿಗಳಿಂದ ಕಟ್ಟಿ ಹಾಕಿದನು. |
8
|
ನಾನು ಸಹಾಯಕ್ಕಾಗಿ ಅರಚಿಕೊಳ್ಳುವಾಗಲೂ ಕೂಗಿ ಕೊಳ್ಳುವಾಗಲೂ ಯೆಹೋವನು ನನ್ನ ಪ್ರಾರ್ಥನೆಗೆ ಉತ್ತರ ಕೊಡುವುದಿಲ್ಲ. |
9
|
ಆತನು ನನ್ನ ದಾರಿಯನ್ನು ಕಲ್ಲುಗಳಿಂದ ಮುಚ್ಚಿದ್ದಾನೆ. ಆತನು ನನ್ನ ಹಾದಿಯನ್ನು ಡೊಂಕುಗೊಳಿಸಿದ್ದಾನೆ. |
10
|
ನನ್ನ ಪಾಲಿಗಂತೂ ಯೆಹೋವನು ಆಕ್ರಮಣ ಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ. |
11
|
ಯೆಹೋವನು ನನ್ನನ್ನು ನನ್ನ ದಾರಿಯಿಂದ ಓಡಿಸಿದನು. ಆತನು ನನ್ನನ್ನು ಚೂರುಚೂರು ಮಾಡಿದನು. ಆತನು ನನ್ನನ್ನು ಅಸಹಾಯಕನನ್ನಾಗಿ ತೊರೆದು ಬಿಟ್ಟಿದ್ದಾನೆ. |
12
|
ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು. |
13
|
ಆತನು ನನ್ನ ಹೊಟ್ಟೆಗೆ ತನ್ನ ಬಾಣಗಳಿಂದ ಹೊಡೆದನು. |
14
|
ನನ್ನ ಜನರಿಗೆಲ್ಲಾ ಹಾಸ್ಯಾಸ್ಪದವಾಗಿದ್ದೇನೆ. ದಿನವೆಲ್ಲಾ ಅವರು ನನ್ನ ಬಗ್ಗೆ ಹಾಡುಗಳನ್ನು ಹಾಡುತ್ತಾ ಗೇಲಿ ಮಾಡುತ್ತಾರೆ. |
15
|
ಯೆಹೋವನು ನನಗೆ ಕುಡಿಯಲು ಈ ವಿಷವನ್ನು (ಶಿಕ್ಷೆಯನ್ನು) ಕೊಟ್ಟನು. ಕಹಿಯಾದ ಈ ಪಾನೀಯದಿಂದ ಆತನು ನನ್ನನ್ನು ತುಂಬಿಸಿದನು. |
16
|
ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದು ಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ. |
17
|
ಇನ್ನೆಂದಿಗೂ ಸಮಾಧಾನವೇ ಇರುವುದಿಲ್ಲವೆಂದು ಕೊಂಡೆನು. ನಾನು ಸಂತೋಷವನ್ನು ಮರೆತುಬಿಟ್ಟೆನು. |
18
|
ನಾನು ನನ್ನೊಳಗೆ, “ಯೆಹೋವನು ನನಗೆ ಸಹಾಯ ಮಾಡುತ್ತಾನೆ ಎಂಬ ನಿರೀಕ್ಷೆ ಇನ್ನೆಂದಿಗೂ ನನಗಿಲ್ಲ” ಎಂದು ಕೊಂಡೆನು. |
19
|
ನನ್ನ ಸಂಕಟವನ್ನು ಮತ್ತು ಮನೆಯಿಲ್ಲದ ಸ್ಥಿತಿಯನ್ನು ನೆನಸಿಕೊಂಡರೆ ಅದು ಕಹಿ ವಿಷದಂತಿದೆ. |
20
|
ನನ್ನ ಸಂಕಷ್ಟಗಳನ್ನೆಲ್ಲ ನಾನು ಚೆನ್ನಾಗಿ ಜ್ಞಾಪಿಸಿಕೊಳ್ಳುವೆನು, ಆದ್ದರಿಂದ ನಾನು ತುಂಬಾ ವ್ಯಸನಗೊಂಡಿದ್ದೇನೆ. |
21
|
ಆದರೆ ನಾನು ಬೇರೊಂದನ್ನು ಯೋಚಿಸಿಕೊಂಡಾಗ ನಾನು ನಿರೀಕ್ಷೆಯುಳ್ಳವನಾಗುವೆನು. ನಾನು ಯೋಚಿಸಿಕೊಳ್ಳುವದೇನಂದರೆ: |
22
|
ಯೆಹೋವನ ಪ್ರೀತಿಗೂ ಕರುಣೆಗೂ ಕೊನೆಯೇ ಇಲ್ಲ. ಆತನ ದಯೆಗೆ ಅಂತ್ಯವೇ ಇಲ್ಲ. |
23
|
ಪ್ರತಿ ಮುಂಜಾನೆಯೂ ಆತನು ಅದನ್ನು ಹೊಸ ರೀತಿಗಳಲ್ಲಿ ತೋರಿಸುವನು. ಯೆಹೋವನೇ, ನೀನು ಎಷ್ಟೋ ಸತ್ಯವಂತನು ಮತ್ತು ನಂಬಿಗಸ್ತನು! |
24
|
ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದು ಕೊಳ್ಳುವೆನು. |
25
|
ಯೆಹೋವನು ತನಗಾಗಿ ಕಾಯುವ ಜನರಿಗೆ ಒಳ್ಳೆಯವನಾಗಿರುತ್ತಾನೆ. ಯೆಹೋವನು ತನ್ನನ್ನು ಎದುರುನೋಡುವ ಜನರಿಗೆ ಒಳ್ಳೆಯವನಾಗಿರುತ್ತಾನೆ. |
26
|
ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು. |
27
|
ಯೌವನದಲ್ಲೇ ಸಂಕಟದ ನೊಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು. |
28
|
ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು. |
29
|
ಅವನು ದೀನತೆಯಿಂದ ತನ್ನ ಮುಖವನ್ನು ಧೂಳಿನಲ್ಲಿ ಹಾಕಬೇಕು. ಆಗ ಅವನ ಜೀವಕ್ಕೆ ನಿರೀಕ್ಷೆ ಇದ್ದರೂ ಇರಬಹುದು. |
30
|
ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು. |
31
|
ಯೆಹೋವನು ಜನರನ್ನು ಶಾಶ್ವತವಾಗಿ ತೊರೆದು ಬಿಡುವುದಿಲ್ಲ ಎಂಬುದು ಆ ವ್ಯಕ್ತಿಯ ನೆನಪಿನಲ್ಲಿರಬೇಕು. |
32
|
ಯೆಹೋವನು ಶಿಕ್ಷಿಸುವಾಗ ಕರುಣೆಯುಳ್ಳವನೂ ಆಗಿರುತ್ತಾನೆ. ಆತನು ತನ್ನ ಮಹಾಪ್ರೀತಿ ಮತ್ತು ಕನಿಕರಗಳಿಂದಲೇ ಕರುಣೆಯುಳ್ಳವನಾಗಿರುತ್ತಾನೆ. |
33
|
ತಾನು ಜನರನ್ನು ಶಿಕ್ಷಿಸಬೇಕೆಂಬುದು ಯೆಹೋವನ ಬಯಕೆಯೇನಲ್ಲ. ತಾನು ಜನರನ್ನು ವ್ಯಸನಗೊಳಿಸಬೇಕೆಂಬುದು ಆತನಿಗೆ ಇಷ್ಟವಿಲ್ಲ. |
34
|
ಈ ಸಂಗತಿಗಳನ್ನು ಇಷ್ಟಪಡುವುದಿಲ್ಲ. ಯಾರೋ ಒಬ್ಬನು ಈ ಲೋಕದ ಕೈದಿಗಳನ್ನೆಲ್ಲಾ ತನ್ನ ಪಾದದ ಕೆಳಗೆ ಹಾಕಿ ತುಳಿಯುವುದನ್ನು ಆತನು ಇಷ್ಟಪಡುವುದಿಲ್ಲ. |
35
|
ಒಬ್ಬನು ಮತ್ತೊಬ್ಬನಿಗೆ ಅನ್ಯಾಯ ಮಾಡುವುದನ್ನು ಆತನು ಇಷ್ಟಪಡುವುದಿಲ್ಲ. ಆದರೆ ಕೆಲವರು ಆ ಕೆಟ್ಟ ಕಾರ್ಯಗಳನ್ನು ಮಹೋನ್ನತನಾದ ಯೆಹೋವನ ಎದುರಿನಲ್ಲಿಯೇ ಮಾಡುತ್ತಾರೆ. |
36
|
ವ್ಯಾಜ್ಯದಲ್ಲಿ ದೊರೆಯಬೇಕಾದ ನ್ಯಾಯವನ್ನು ದೊರೆಯದಂತೆ ಮಾಡುವುದು ಯೆಹೋವನಿಗೆ ಇಷ್ಟವಿಲ್ಲ. ಯೆಹೋವನು ಈ ಸಂಗತಿಗಳಲ್ಲಿ ಯಾವುದನ್ನೂ ಇಷ್ಟಪಡುವುದಿಲ್ಲ. |
37
|
ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ. |
38
|
ಕೆಟ್ಟವುಗಳೂ ಸಂಭವಿಸುವಂತೆ ಮಹೋನ್ನತನಾದ ಯೆಹೋವನು ಆಜ್ಞಾಪಿಸುತ್ತಾನೆ. |
39
|
ಜೀವಂತವಾಗಿರುವ ಯಾವ ವ್ಯಕ್ತಿಯೇ ಆಗಲಿ ತನ್ನ ಪಾಪಗಳ ನಿಮಿತ್ತ ಯೆಹೋವನ ಶಿಕ್ಷೆಗೆ ಗುರಿಯಾಗುವಾಗ ದೂರು ಹೇಳಕೂಡದು. |
40
|
ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ. |
41
|
ಪರಲೋಕದ ದೇವರಿಗೆ ನಮ್ಮ ಹೃದಯಗಳನ್ನೂ ಕೈಗಳನ್ನೂ ಎತ್ತಿ ಹಿಡಿಯೋಣ. |
42
|
“ನಾವು ದಂಗೆ ಎದ್ದಿದ್ದೇವೆ ಮತ್ತು ಅವಿಧೇಯರಾಗಿದ್ದೇವೆ. ಆದ್ದರಿಂದ ನೀನು ನಮ್ಮನ್ನು ಕ್ಷಮಿಸಿಲ್ಲ. |
43
|
ನೀನು ನಮಗೆ ನಿನ್ನ ಕೋಪವನ್ನು ಹೊದಿಸಿ ನಮ್ಮನ್ನು ಓಡಿಸಿಬಿಟ್ಟಿ. ನೀನು ನಮ್ಮನ್ನು ನಿಷ್ಕರುಣೆಯಿಂದ ಕೊಂದು ಹಾಕಿದೆ! |
44
|
ನೀನು ನಿನಗೆ ಮೋಡಗಳನ್ನು ಹೊದಿಸಿಕೊಂಡು ನಮ್ಮ ಯಾವ ಪ್ರಾರ್ಥನೆಯೂ ನಿನ್ನ ಬಳಿಗೆ ಬಾರದಂತೆ ಮಾಡಿದೆ. |
45
|
ನೀನು ನಮ್ಮನ್ನು ಇತರ ಜನಾಂಗಗಳಿಗೆ ಕಸದಂತೆಯೂ ಹೊಲಸಿನಂತೆಯೂ ಮಾಡಿದೆ. |
46
|
ನಮ್ಮ ಶತ್ರುಗಳೆಲ್ಲಾ ನಮ್ಮೊಂದಿಗೆ ಕೋಪದಿಂದ ಮಾತಾಡುತ್ತಾರೆ. |
47
|
ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದು ಹೋದವರಾಗಿದ್ದೇವೆ!” |
48
|
ನನ್ನ ಕಣ್ಣೀರು ತೊರೆಗಳಂತೆ ಹರಿಯುತ್ತಿದೆ! ನನ್ನ ಜನರು ನಾಶವಾದ ಕಾರಣ ನಾನು ಗೋಳಾಡುತ್ತಿರುವೆ! |
49
|
9ನನ್ನ ಕಣ್ಣೀರು ಸತತವಾಗಿ ಹರಿಯುತ್ತಿದೆ! ನಾನು ಗೋಳಾಡುತ್ತಲೇ ಇರುವೆನು! |
50
|
ಯೆಹೋವನೇ, ಕೆಳಗಿರುವ ನಮ್ಮನ್ನು ನೀನು ಬಗ್ಗಿ ನೋಡುವ ತನಕ ನಾನು ಗೋಳಾಡುತ್ತಲೇ ಇರುವೆನು! ನೀನು ಪರಲೋಕದಿಂದ ನಮ್ಮನ್ನು ನೋಡುವ ತನಕ ನಾನು ಗೋಳಾಡುತ್ತಲೇ ಇರುವೆನು. |
51
|
ನನ್ನ ಪಟ್ಟಣದ ಯುವತಿಯರಿಗೆ ಸಂಭವಿಸಿದ್ದನ್ನು ನಾನು ನೋಡುವಾಗಲೆಲ್ಲ ನನ್ನ ಕಣ್ಣುಗಳು ನನ್ನನ್ನು ದುಃಖಗೊಳಿಸುತ್ತವೆ. |
52
|
ನಿಷ್ಕಾರಣವಾಗಿ ಜನರು ನನ್ನ ವೈರಿಗಳಾಗಿದ್ದು ನನ್ನನ್ನು ಪಕ್ಷಿಯಂತೆ ಬೇಟೆಯಾಡಿದರು. |
53
|
ನನ್ನ ಪ್ರಾಣವನ್ನು ಒಂದು ಗುಂಡಿಯಲ್ಲಿ ಕೊನೆಗಾಣಿಸಲು ಅವರು ಪ್ರಯತ್ನಿಸಿದರು. ಅವರು ನನಗೆ ಕಲ್ಲುಗಳನ್ನು ತೂರಿದರು. |
54
|
ನೀರು ನನ್ನ ತಲೆಯ ಮೇಲೆ ಏರಿತು. “ನಾನು ಸತ್ತು ಹೋಗುತ್ತೇನೆ” ಎಂದುಕೊಂಡೆನು. |
55
|
ಯೆಹೋವನೇ, ಗುಂಡಿಯ ತಳದಿಂದ ನಾನು ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು. |
56
|
ನೀನು ನನ್ನ ಸ್ವರವನ್ನು ಕೇಳಿದೆ. ನೀನು ನಿನ್ನ ಕಿವಿಗಳನ್ನು ಮುಚ್ಚಿಕೊಳ್ಳಲಿಲ್ಲ; ನಿನ್ನನ್ನು ರಕ್ಷಿಸುವುದಿಲ್ಲ ಎನ್ನಲಿಲ್ಲ. |
57
|
ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ. |
58
|
ಯೆಹೋವನೇ, ನೀನು ನನ್ನ ಪರವಾಗಿ ಹೋರಾಡಿದೆ. ನನ್ನ ಪ್ರಾಣವನ್ನು ರಕ್ಷಿಸಿದೆ. |
59
|
ಯೆಹೋವನೇ, ನನಗಾಗಿರುವ ಅನ್ಯಾಯವನ್ನು ನೀನು ನೋಡಿರುವೆ. ವ್ಯಾಜ್ಯದಲ್ಲಿ ನನ್ನ ಪರವಾಗಿ ತೀರ್ಪು ನೀಡು. |
60
|
ನನ್ನ ಶತ್ರುಗಳು ನನ್ನ ಮೇಲೆ ಹೇಗೆ ಸೇಡನ್ನು ತೀರಿಸಿಕೊಂಡಿದ್ದಾರೆ ನೋಡು. ನನಗೆ ವಿರೋಧವಾಗಿ ಅವರು ಮಾಡಿದ ಎಲ್ಲಾ ಯೋಜನೆಗಳನ್ನು ನೋಡು. |
61
|
ಯೆಹೋವನೇ, ಅವರು ನನಗಾಡುವ ಗೇಲಿ ಮಾತನ್ನು ಕೇಳು. ಅವರು ನನ್ನ ವಿರುದ್ಧ ಮಾಡಿದ್ದ ಎಲ್ಲಾ ಯೋಜನೆಗಳನ್ನು ಕೇಳು. |
62
|
ನನ್ನ ಶತ್ರುಗಳ ಮಾತುಗಳು ಮತ್ತು ಆಲೋಚನೆಗಳು ಯಾವಾಗಲೂ ನನಗೆ ವಿರೋಧವಾಗಿವೆ. |
63
|
ಯೆಹೋವನೇ, ನೋಡು! ಅವರು ಕುಳಿತುಕೊಂಡಿರುವಾಗಲೂ ನಿಂತುಕೊಂಡಿರುವಾಗಲೂ ನನ್ನನ್ನು ಹೇಗೆ ಗೇಲಿ ಮಾಡುತ್ತಾರೆ! |
64
|
ಯೆಹೋವನೇ, ನೀನು ಅವರಿಗೆ ಮುಯ್ಯಿತೀರಿಸು! ಅವರು ಮಾಡಿರುವುದಕ್ಕೆ ತಕ್ಕಂತೆ ಅವರನ್ನು ದಂಡಿಸು! |
65
|
ಅವರ ಹೃದಯವನ್ನು ಕಠಿಣಗೊಳಿಸು! ಬಳಿಕ ಅವರನ್ನು ಶಪಿಸು! |
66
|
ಕೋಪದಿಂದ ಅವರನ್ನು ಓಡಿಸಿಬಿಡು! ಅವರನ್ನು ನಾಶಮಾಡು! ಯೆಹೋವನೇ, ಅವರನ್ನು ಈ ಭೂಲೋಕದಿಂದಲೇ ಅಳಿಸಿಹಾಕು! |