Indian Language Bible Word Collections
Lamentations 5:17
Lamentations Chapters
Lamentations 5 Verses
Books
Old Testament
New Testament
Bible Versions
English
Tamil
Hebrew
Greek
Malayalam
Hindi
Telugu
Kannada
Gujarati
Punjabi
Urdu
Bengali
Oriya
Marathi
Books
Old Testament
New Testament
Lamentations Chapters
Lamentations 5 Verses
1
|
ಯೆಹೋವನೇ, ನಮಗೆ ಸಂಭವಿಸಿದ್ದನ್ನು ಜ್ಞಾಪಿಸಿಕೊ. ನಮಗಾಗಿರುವ ಅವಮಾನವನ್ನು ನೋಡು. |
2
|
ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ. |
3
|
ನಾವು ಅನಾಥರಾಗಿದ್ದೇವೆ. ನಮಗೆ ತಂದೆಯೇ ಇಲ್ಲ. ನಮ್ಮ ತಾಯಂದಿರು ವಿಧವೆಗಳಂತಾಗಿದ್ದಾರೆ. |
4
|
ನಾವು ಕುಡಿಯುವ ನೀರನ್ನೂ ನಾವು ಕೊಂಡುಕೊಳ್ಳಬೇಕಾಗಿದೆ. ನಮ್ಮ ಸೌದೆಗೂ ಸಹ ನಾವು ಹಣ ಕೊಡಬೇಕಾಗಿದೆ. |
5
|
ಮರಣದವರೆಗೂ ನಾವು ಹಿಂದಟ್ಟಲ್ಪಟ್ಟಿದ್ದೇವೆ. ನಾವು ಬಳಲಿ ಹೋಗಿದ್ದೇವೆ; ನಾವು ವಿಶ್ರಾಂತಿಯನ್ನೇ ಪಡೆದಿಲ್ಲ. |
6
|
ನಾವು ಈಜಿಪ್ಟಿನೊಡನೆ ಒಂದು ಒಪ್ಪಂದವನ್ನು ಮಾಡಿಕೊಂಡೆವು. ಸಾಕಷ್ಟು ಆಹಾರಕ್ಕಾಗಿ ನಾವು ಅಸ್ಸೀರಿಯಾದೊಡನೆ ಒಪ್ಪಂದ ಮಾಡಿಕೊಂಡೆವು. |
7
|
ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ. |
8
|
ಗುಲಾಮರು ನಮ್ಮ ಅಧಿಪತಿಗಳಾಗಿದ್ದಾರೆ. ನಮ್ಮನ್ನು ಯಾರೂ ಅವರಿಂದ ರಕ್ಷಿಸಲಾರರು. |
9
|
[This verse may not be a part of this translation] |
10
|
ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ. |
11
|
“ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ. |
12
|
ವೈರಿಗಳು ನಮ್ಮ ರಾಜಕುಮಾರರನ್ನು ಗಲ್ಲಿಗೇರಿಸಿದ್ದಾರೆ. ಅವರು ನಮ್ಮ ಹಿರಿಯರಿಗೆ ಗೌರವ ಕೊಡಲಿಲ್ಲ. |
13
|
ನಮ್ಮ ಯುವಕರನ್ನು ಬೀಸುವ ಕಲ್ಲುಗಳಿಂದ ದವಸ ಧಾನ್ಯಗಳನ್ನು ಬೀಸುವವರನ್ನಾಗಿ ವೈರಿಗಳು ಮಾಡಿದರು. ನಮ್ಮ ಯುವಕರು ಶ್ರಮದ ಕೆಲಸದಿಂದ ಮುಗ್ಗರಿಸಿದ್ದಾರೆ. |
14
|
ಪಟ್ಟಣದ ದ್ವಾರಗಳ ಬಳಿಯಿಂದ ಹಿರಿಯರು ಹೊರಟು ಹೋಗಿದ್ದಾರೆ. ಯುವಕರು ಸಂಗೀತ ನುಡಿಸುವುದನ್ನು ನಿಲ್ಲಿಸಿದ್ದಾರೆ. |
15
|
ನಮ್ಮ ಹೃದಯಗಳಲ್ಲಿ ಆನಂದವೇ ಉಳಿದಿಲ್ಲ. ನಮ್ಮ ನರ್ತನದ ಸ್ಥಾನವನ್ನು ಗೋಳಾಟವು ಆವರಿಸಿಕೊಂಡಿದೆ. |
16
|
ನಮ್ಮ ತಲೆಯಿಂದ ಕಿರೀಟವು ಬಿದ್ದುಹೋಗಿದೆ. ನಾವು ಪಾಪ ಮಾಡಿದ್ದರಿಂದಲೇ ನಮಗೆ ಕೇಡುಗಳಾಗಿವೆ. |
17
|
“ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ. |
18
|
ಚೀಯೋನ್ ಪರ್ವತವು ನಿರ್ಜನ ಪ್ರದೇಶವಾಗಿದೆ. ಚೀಯೋನ್ ಪರ್ವತದ ಸುತ್ತಮುತ್ತಲೆಲ್ಲ ನರಿಗಳು ಓಡಾಡುತ್ತವೆ. |
19
|
ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು. |
20
|
ಯೆಹೋವನೇ, ನೀನು ನಮ್ಮನ್ನು ಮರೆತಿರುವುದೇಕೆ? ನೀನು ನಮ್ಮನ್ನು ದೀರ್ಘಕಾಲದವರೆಗೆ ತೊರೆದು ಬಿಟ್ಟಿರುವುದೇಕೆ? |
21
|
“ಯೆಹೋವನೇ, ನಮ್ಮನ್ನು ನಿನ್ನ ಬಳಿಗೆ ಮತ್ತೆ ಬರಮಾಡಿಕೋ. ನಾವು ಸಂತೋಷದಿಂದ ನಿನ್ನ ಬಳಿಗೆ ಬರುತ್ತೇವೆ. ನಮ್ಮ ಜೀವಿತಗಳನ್ನು ಮೊದಲಿನ ಸ್ಥಿತಿಗೆ ಬರಮಾಡು. |
22
|
ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ. |