“ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು!
ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!
“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,
ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು. [*ಪವಿತ್ರ … ತಿನ್ನಬಾರದು ಅಥವಾ “ಅವನು ತನ್ನನ್ನು ನೀರಿನಿಂದ ತೊಳೆದುಕೊಂಡ ನಂತರ ಪವಿತ್ರ ಆಹಾರವನ್ನು ತಿನ್ನಬಹುದು.”]
“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.
(19-20) ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.
“ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.
“ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.
“ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”
“ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.