English Bible Languages

Indian Language Bible Word Collections

Bible Versions

English

Tamil

Hebrew

Greek

Malayalam

Hindi

Telugu

Kannada

Gujarati

Punjabi

Urdu

Bengali

Oriya

Marathi

Assamese

Books

Leviticus Chapters

Leviticus 8 Verses

1 ಯೆಹೋವನು ಮೋಶೆಗೆ,
2 “ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಅವರೊಂದಿಗೆ ಯಾಜಕ ವಸ್ತ್ರಗಳನ್ನೂ ಅಭಿಷೇಕ ತೈಲವನ್ನೂ ಪಾಪಪರಿಹಾರಕ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯಿಂದ ತುಂಬಿರುವ ಪುಟ್ಟಿಯನ್ನೂ ತೆಗೆದುಕೊಂಡು ಬಾ.
3 ಮತ್ತು ಜನರನ್ನು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಿಗೆ ಎದುರಿನಲ್ಲಿ ಸೇರಿಸು” ಎಂದು ಹೇಳಿದನು.
4 ಯೆಹೋವನು ಆಜ್ಞಾಪಿಸಿದ್ದನ್ನು ಮೋಶೆಯು ಮಾಡಿದನು. ಜನರು ಒಟ್ಟಾಗಿ ದೇವದರ್ಶನಗುಡಾರದ ಬಾಗಿಲಲ್ಲಿ ಸೇರಿ ಬಂದರು.
5 ಆಗ ಮೋಶೆಯು ಜನರಿಗೆ, “ನಾನು ಈಗ ಮಾಡುವ ಕಾರ್ಯವನ್ನು ಯೆಹೋವನೇ ಆಜ್ಞಾಪಿಸಿದನು” ಎಂದು ಹೇಳಿದನು.
6 ತರುವಾಯ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದನು. ಅವನು ಅವರಿಗೆ ನೀರಿನಿಂದ ಸ್ನಾನ ಮಾಡಿಸಿದನು;
7 ನಿಲುವಂಗಿಯನ್ನು ಆರೋನನಿಗೆ ತೊಡಿಸಿದನು; ನಡುಕಟ್ಟನ್ನು ಕಟ್ಟಿದನು; ಮೇಲಂಗಿಯನ್ನು ತೊಡಿಸಿದನು. ಏಫೋದನ್ನು ಹಾಕಿಸಿ ಕವಚದ ಮೇಲಿನ ವಿಶೇಷವಾದ ನಡುಕಟ್ಟನ್ನು ಕಟ್ಟಿದನು; ಎದೆಕವಚವನ್ನು ಬಿಗಿದನು.
8 ಅದರೊಳಗೆ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳನ್ನು ಹಾಕಿದನು.
9 ಅವನ ತಲೆಗೆ ಮುಂಡಾಸವನ್ನು ಇಟ್ಟನು; ಮುಂಡಾಸದ ಮುಂಭಾಗದಲ್ಲಿ ಚಿನ್ನದ ಪಟ್ಟಿಯನ್ನು ಕಟ್ಟಿದನು. ಈ ಚಿನ್ನದ ಪಟ್ಟಿಯು ಪವಿತ್ರಕಿರೀಟವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
10 ತರುವಾಯ ಮೋಶೆಯು ಅಭಿಷೇಕತೈಲವನ್ನು ತೆಗೆದುಕೊಂಡು ಪವಿತ್ರಗುಡಾರದ ಮೇಲೆ ಮತ್ತು ಅದರಲ್ಲಿರುವ ಎಲ್ಲಾ ವಸ್ತುಗಳ ಮೇಲೆ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
11 ಮೋಶೆಯು ಅಭಿಷೇಕತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ವೇದಿಕೆಯ ಮೇಲೆ ಏಳು ಸಲ ಚಿಮಿಕಿಸಿದನು. ಮೋಶೆಯು ತೈಲವನ್ನು ವೇದಿಕೆಯ ಮೇಲೆ, ಅದರ ಎಲ್ಲಾ ಉಪಕರಣಗಳ ಮೇಲೆ ಚಿಮಿಕಿಸಿದನು. ಮೋಶೆಯು ತೈಲವನ್ನು ಗಂಗಾಳ ಮತ್ತು ಅದರ ಪೀಠದ ಮೇಲೂ ಚಿಮಿಕಿಸಿದನು. ಈ ರೀತಿಯಾಗಿ ಮೋಶೆಯು ಅವುಗಳನ್ನು ಪವಿತ್ರಗೊಳಿಸಿದನು.
12 ಬಳಿಕ ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಆರೋನನ ತಲೆಗೆ ಹೊಯಿದು ಅವನನ್ನು ಪವಿತ್ರಗೊಳಿಸಿದನು.
13 ಬಳಿಕ ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ ನಡುಕಟ್ಟನ್ನು ಕಟ್ಟಿದನು. ಬಳಿಕ ಅವರ ತಲೆಗಳಿಗೆ ಮುಂಡಾಸಗಳನ್ನು ಇಟ್ಟನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
14 ತರುವಾಯ ಮೋಶೆಯು ಪಾಪಪರಿಹಾರಕ್ಕಾಗಿ ಯಜ್ಞದ ಹೋರಿಯನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಪಾಪಪರಿಹಾರಕ ಯಜ್ಞದ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.
15 ಬಳಿಕ ಮೋಶೆಯು ಹೋರಿಯನ್ನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ ವೇದಿಕೆಯ ಎಲ್ಲಾ ಮೂಲೆಗಳಿಗೆ ರಕ್ತವನ್ನು ಹಚ್ಚಿದನು. ಹೀಗೆ ಮೋಶೆಯು ವೇದಿಕೆಯನ್ನು ಯಜ್ಞಗಳಿಗಾಗಿ ಶುದ್ಧಗೊಳಿಸಿ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದನು; ಜನರನ್ನು ಶುದ್ಧಿಮಾಡುವ ಯಜ್ಞಗಳನ್ನು ಸಮರ್ಪಿಸುವುದಕ್ಕಾಗಿ ವೇದಿಕೆಯನ್ನು ಪ್ರತಿಷ್ಠೆಗೊಳಿಸಿದನು.
16 ಮೋಶೆಯು ಹೋರಿಯ ಒಳಗಿನ ಭಾಗಗಳ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಆವರಿಸಿರುವ ಕೊಬ್ಬನ್ನೂ ತೆಗೆದುಕೊಂಡು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
17 ಹೋರಿಯ ಚರ್ಮ, ಅದರ ಮಾಂಸ ಮತ್ತು ಅದರ ಶರೀರದ ಕಲ್ಮಶವನ್ನು ಅವನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಬೆಂಕಿಯಿಂದ ಸುಟ್ಟುಹಾಕಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
18 ಬಳಿಕ ಮೋಶೆಯು ಸರ್ವಾಂಗಹೋಮದ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
19 ಆಗ ಮೋಶೆಯು ಟಗರನ್ನು ವಧಿಸಿ ಅದರ ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು.
20 (20-21) ಮೋಶೆಯು ಟಗರನ್ನು ತುಂಡುತುಂಡಾಗಿ ಕಡಿದು ಅದರ ಒಳಗಿನ ಭಾಗಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದನು; ಇಡೀ ಟಗರನ್ನು ವೇದಿಕೆಯ ಮೇಲೆ ಹೋಮಮಾಡಿದನು. ಮೋಶೆಯು ಅದರ ತಲೆ, ತುಂಡುಗಳು ಮತ್ತು ಕೊಬ್ಬನ್ನು ಹೋಮಮಾಡಿದನು. ಅದು ಯೆಹೋವನಿಗೆ ಅಗ್ನಿಯ ಮೂಲಕ ಅರ್ಪಿಸಲ್ಪಟ್ಟ ಸುಗಂಧಕರವಾದ ಸರ್ವಾಂಗಹೋಮವಾಗಿದೆ. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
22 ಬಳಿಕ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವುದಕ್ಕೆ ವಧಿಸಬೇಕಾದ ಎರಡನೆಯ ಟಗರನ್ನು ತಂದನು. ಆರೋನನೂ ಅವನ ಪುತ್ರರೂ ತಮ್ಮ ಕೈಗಳನ್ನು ಟಗರಿನ ತಲೆಯ ಮೇಲೆ ಇಟ್ಟರು.
23 ಆಗ ಮೋಶೆ ಟಗರನ್ನು ವಧಿಸಿ ಅದರ ಸ್ವಲ್ಪ ರಕ್ತವನ್ನು ಆರೋನನ ಬಲಗಿವಿಯ ತುದಿಗೂ ಅವನ ಬಲಗೈಯ ಹೆಬ್ಬೆರಳಿಗೂ ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.
24 ಬಳಿಕ ಮೋಶೆಯು ಆರೋನನ ಪುತ್ರರನ್ನು ವೇದಿಕೆಯ ಸಮೀಪಕ್ಕೆ ಕರೆಸಿ ಸ್ವಲ್ಪ ರಕ್ತವನ್ನು ಅವರ ಬಲಗಿವಿಗಳ ತುದಿಗೂ ಅವರ ಬಲಗೈಗಳ ಹೆಬ್ಬೆರಳಿಗೂ ಮತ್ತು ಅವರ ಬಲಗಾಲುಗಳ ಹೆಬ್ಬೆಟ್ಟಿಗೂ ಹಚ್ಚಿದನು; ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು;
25 ಕೊಬ್ಬನ್ನು ಅಂದರೆ ಬಾಲದ ಮೇಲಿರುವ ಕೊಬ್ಬನ್ನೂ ಒಳಗಿನ ಭಾಗಗಳ ಮೇಲಿರುವ ಕೊಬ್ಬೆಲ್ಲವನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ಮತ್ತು ಬಲತೊಡೆಯನ್ನೂ ತೆಗೆದುಕೊಂಡನು.
26 ಪ್ರತಿದಿನ ಯೆಹೋವನ ಸನ್ನಿಧಿಯಲ್ಲಿ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯು ಇಡಲ್ಪಡುತ್ತಿತ್ತು. ಮೋಶೆಯು ರೊಟ್ಟಿಯಲ್ಲಿ ಒಂದು ತುಂಡನ್ನೂ ಎಣ್ಣೆ ಬೆರಸಿದ ರೊಟ್ಟಿಯಲ್ಲಿ ಒಂದು ತುಂಡನ್ನೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡನು. ಮೋಶೆಯು ಆ ರೊಟ್ಟಿಯ ತುಂಡುಗಳನ್ನು ಕೊಬ್ಬಿನ ಮತ್ತು ಟಗರಿನ ಬಲತೊಡೆಯ ಮೇಲೆ ಇಟ್ಟನು.
27 ಬಳಿಕ ಮೋಶೆಯು ಅವೆಲ್ಲವುಗಳನ್ನು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿ ಇಟ್ಟನು. ಮೋಶೆಯು ತುಂಡುಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.
28 ಬಳಿಕ ಮೋಶೆಯು ಆರೋನನ ಮತ್ತು ಅವನ ಪುತ್ರರ ಕೈಗಳಲ್ಲಿರುವ ಈ ವಸ್ತುಗಳನ್ನು ತೆಗೆದುಕೊಂಡನು. ಮೋಶೆಯು ಅವುಗಳನ್ನು ವೇದಿಕೆಯಲ್ಲಿ ಸರ್ವಾಂಗಹೋಮದ ಮೇಲಿಟ್ಟು ಅವುಗಳನ್ನು ಹೋಮಮಾಡಿದನು. ಅದು ಆರೋನನನ್ನೂ ಅವನ ಪುತ್ರರನ್ನೂ ಯಾಜಕರನ್ನಾಗಿ ನೇಮಿಸುವ ಸಮರ್ಪಣೆಯಾಗಿತ್ತು. ಹೋಮವಾಗಿ ಅರ್ಪಿಸಲ್ಪಟ್ಟ ಈ ಯಜ್ಞವು ಯೆಹೋವನಿಗೆ ಸುಗಂಧಕರವಾಗಿದೆ.
29 ಮೋಶೆಯು ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.
30 ಮೋಶೆಯು ಸ್ವಲ್ಪ ಅಭಿಷೇಕತೈಲವನ್ನು ಮತ್ತು ವೇದಿಕೆಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮೇಲೆ ಮತ್ತು ಅವನ ಯಾಜಕವಸ್ತ್ರದ ಮೇಲೆ ಚಿಮಿಕಿಸಿದನು; ಆರೋನನ ಜೊತೆ ಇದ್ದ ಅವನ ಪುತ್ರರ ಮೇಲೆ ಮತ್ತು ಅವರ ಬಟ್ಟೆಗಳ ಮೇಲೆ ಚಿಮಿಕಿಸಿದನು. ಹೀಗೆ ಮೋಶೆಯು ಆರೋನನನ್ನೂ ಅವನ ಯಾಜಕವಸ್ತ್ರವನ್ನೂ ಅವನ ಪುತ್ರರನ್ನೂ ಅವರ ಯಾಜಕ ವಸ್ತ್ರಗಳನ್ನೂ ಪವಿತ್ರಗೊಳಿಸಿದನು. [*ಪವಿತ್ರಗೊಳಿಸಿದನು ಅಕ್ಷರಶಃ, “ಪ್ರತಿಷ್ಠಿಸಿದನು.”]
31 ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.
32 ಮಾಂಸವಾಗಲಿ ರೊಟ್ಟಿಯಾಗಲಿ ಉಳಿದರೆ ಅದನ್ನು ಸುಟ್ಟುಹಾಕಿರಿ.
33 ಯಾಜಕರಾಗಿ ಪ್ರತಿಷ್ಠಿಸುವ ಆಚಾರವಿಧಿಯು ಏಳು ದಿನಗಳವರೆಗೆ ಇರುವುದು. ಆ ಸಮಯ ಮುಗಿಯುವವರೆಗೆ ನೀವು ದೇವದರ್ಶನಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು.
34 ಈ ದಿನದಲ್ಲಿ ಮಾಡಿದ ಸಕಲಕಾರ್ಯಗಳನ್ನು ಏಳು ದಿನವೂ ಮಾಡಬೇಕು.
35 ನೀವು ಏಳು ದಿನಗಳು ಹಗಲುರಾತ್ರಿ ದೇವದರ್ಶನಗುಡಾರದ ಬಾಗಿಲಿನಲ್ಲಿ ಇರಬೇಕು. ನೀವು ಯೆಹೋವನ ಆಜ್ಞೆಗಳಿಗೆ ವಿಧೇಯರಾಗದಿದ್ದರೆ ಸಾಯುವಿರಿ! ಯೆಹೋವನು ಆ ಆಜ್ಞೆಗಳನ್ನು ನನಗೆ ಕೊಟ್ಟನು.”
36 ಆದ್ದರಿಂದ ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಆರೋನನೂ ಅವನ ಪುತ್ರರೂ ಮಾಡಿದರು.
×

Alert

×