1
|
ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಇಸ್ರೇಲರ ಹಿರಿಯರನ್ನೂ ಕರೆದನು. |
2
|
ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು. |
3
|
ಇಸ್ರೇಲರಿಗೆ ಹೀಗೆ ಹೇಳು: ‘ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ತೆಗೆದುಕೊಳ್ಳಿರಿ; ಸರ್ವಾಂಗಹೋಮಕ್ಕಾಗಿ ಕರುವನ್ನೂ ಕುರಿಮರಿಯನ್ನೂ ತೆಗೆದುಕೊಳ್ಳಿರಿ. ಕರುವೂ ಕುರಿಮರಿಯೂ ಒಂದು ವರ್ಷದ್ದಾಗಿರಬೇಕು. ಆ ಪ್ರಾಣಿಗಳಲ್ಲಿ ಯಾವ ದೋಷವಿರಬಾರದು. |
4
|
ಸಮಾಧಾನ ಯಜ್ಞಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊಂಡು ಎಣ್ಣೆ ಬೆರೆಸಿದ ಧಾನ್ಯಸಮರ್ಪಣೆಗಳೊಡನೆ ಅವುಗಳನ್ನು ಯೆಹೋವನ ಮುಂದೆ ಅರ್ಪಿಸಿರಿ. ಯಾಕೆಂದರೆ ಈ ದಿನ ಯೆಹೋವನು ನಿಮಗೆ ಪ್ರತ್ಯಕ್ಷವಾಗುವನು.” |
5
|
ಆದ್ದರಿಂದ ಜನರೆಲ್ಲರೂ ದೇವದರ್ಶನಗುಡಾರಕ್ಕೆ ಬಂದರು. ಮೋಶೆಯು ಆಜ್ಞಾಪಿಸಿದ ವಸ್ತುಗಳನ್ನು ಅವರು ತಂದರು. ಎಲ್ಲಾ ಜನರು ಯೆಹೋವನ ಸನ್ನಿಧಿಯಲ್ಲಿ ನಿಂತರು. |
6
|
ಮೋಶೆಯು, “ಯೆಹೋವನು ಆಜ್ಞಾಪಿಸಿದವುಗಳನ್ನು ನೀವು ಮಾಡಿದರೆ ಯೆಹೋವನ ಮಹಿಮೆಯು ನಿಮಗೆ ಪ್ರತ್ಯಕ್ಷವಾಗುವುದು” ಎಂದು ಹೇಳಿದನು. |
7
|
ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು. |
8
|
ಆದ್ದರಿಂದ ಆರೋನನು ಯಜ್ಞವೇದಿಕೆಯ ಬಳಿಗೆ ಹೋದನು. ಅವನು ತನಗೋಸ್ಕರ ಪಾಪಪರಿಹಾರಕ ಯಜ್ಞವಾಗಿ ಎಳೆ ಹೋರಿಯನ್ನು ವಧಿಸಿದನು. |
9
|
[This verse may not be a part of this translation] |
10
|
ಆರೋನನು ಪಾಪಪರಿಹಾರಕ ಯಜ್ಞಪಶುವಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಮತ್ತು ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನು ತೆಗೆದುಕೊಂಡನು. ಅವನು ಆ ವಸ್ತುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವನು ಮಾಡಿದನು. |
11
|
ಬಳಿಕ ಆರೋನನು ಮಾಂಸವನ್ನು ಮತ್ತು ಚರ್ಮವನ್ನು ಪಾಳೆಯದ ಹೊರಗೆ ಬೆಂಕಿಯಲ್ಲಿ ಸುಟ್ಟುಹಾಕಿದನು. |
12
|
ನಂತರ ಆರೋನನು ಸರ್ವಾಂಗಹೋಮದ ಪಶುವನ್ನು ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ರಕ್ತವನ್ನು ವೇದಿಕೆಯ ಸುತ್ತಲೂ ಚಿಮಿಕಿಸಿದನು. |
13
|
ಆರೋನನ ಪುತ್ರರು ಸರ್ವಾಂಗಹೋಮದ ಪಶುವಿನ ಮಾಂಸದ ತುಂಡುಗಳನ್ನು ಮತ್ತು ತಲೆಯನ್ನು ಆರೋನನಿಗೆ ಕೊಟ್ಟರು. ಬಳಿಕ ಆರೋನನು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. |
14
|
ಆರೋನನು ಸರ್ವಾಂಗಹೋಮದ ಪಶುವಿನ ಒಳಗಿನ ಭಾಗಗಳನ್ನೂ ಕಾಲುಗಳನ್ನೂ ತೊಳೆದು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು. |
15
|
ತರುವಾಯ ಆರೋನನು ಜನರು ಅರ್ಪಿಸುವ ಪಶುಗಳನ್ನು ತರಿಸಿದನು. ಅವನು ಜನರಿಗಾಗಿ ಪಾಪಪರಿಹಾರಕ ಯಜ್ಞಕ್ಕಾಗಿ ಹೋತವನ್ನು ವಧಿಸಿದನು. ಅವನು ಮೊದಲಿನ ಪಶುವನ್ನು ಸಮರ್ಪಿಸಿದ ರೀತಿಯಲ್ಲಿ ಪಾಪಪರಿಹಾರಕ್ಕಾಗಿ ಹೋತವನ್ನು ಸಮರ್ಪಿಸಿದನು. |
16
|
ಆರೋನನು ಸರ್ವಾಂಗಹೋಮಕ್ಕಾಗಿ ಪಶುವನ್ನು ತರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಅರ್ಪಿಸಿದನು. |
17
|
ಆರೋನನು ಧಾನ್ಯನೈವೇದ್ಯವನ್ನು ಯಜ್ಞವೇದಿಕೆಯ ಬಳಿಗೆ ತಂದನು. ಅವನು ಒಂದು ಹಿಡಿ ಧಾನ್ಯವನ್ನು ತೆಗೆದುಕೊಂಡು ದಿನಂಪ್ರತಿ ಹೊತ್ತಾರೆಯ ವೇಳೆಯಲ್ಲಿ ಅರ್ಪಿಸುವ ಯಜ್ಞವಲ್ಲದೆ ಇದನ್ನೂ ಕೂಡ ಅರ್ಪಿಸಿದನು. |
18
|
ಆರೋನನು ಜನರಿಗಾಗಿ ಸಮಾಧಾನ ಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು. |
19
|
ಆರೋನನ ಪುತ್ರರು ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಆರೋನನ ಬಳಿಗೆ ತಂದರು. ಇವರು ಬಾಲದ ಕೊಬ್ಬನ್ನೂ ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೂ ಮೂತ್ರಪಿಂಡಗಳನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತಂದರು. |
20
|
ಅವರು ಈ ಕೊಬ್ಬಿನ ಭಾಗಗಳನ್ನು ಹೋರಿಯ ಮತ್ತು ಟಗರಿನ ಎದೆಯ ಭಾಗಗಳ ಮೇಲೆ ಇಟ್ಟರು. ಆರೋನನು ಅವೆಲ್ಲವನ್ನು ಯಜ್ಞವೇದಿಕೆಯ ಮೇಲೆ ಹೋಮಮಾಡಿದನು. |
21
|
ಮೋಶೆಯು ಆಜ್ಞಾಪಿಸಿದಂತೆ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ಆರೋನನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು. |
22
|
ತರುವಾಯ ಆರೋನನು ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆರೋನನು ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಮತ್ತು ಸಮಾಧಾನ ಯಜ್ಞವನ್ನೂ ಅರ್ಪಿಸಿ ಮುಗಿಸಿದ ನಂತರ ಯಜ್ಞವೇದಿಕೆಯಿಂದ ಕೆಳಗಿಳಿದು ಬಂದನು. |
23
|
ಮೋಶೆಯು ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು. |
24
|
ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು. |
Leviticus 9:8 Kannada Language Bible Words basic statistical display
COMING SOON ...