ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.
ಆ ಮನೆಯಲ್ಲಿ ಇಳಿದುಕೊಂಡು ಅವರು ಕೊಡುವುದನ್ನು ತಿನ್ನಿರಿ, ಕುಡಿಯಿರಿ. ಕೆಲಸಗಾರನು ಸಂಬಳಕ್ಕೆ ಯೋಗ್ಯನಾಗಿದ್ದಾನೆ. ಆದ್ದರಿಂದ ಇಳಿದುಕೊಳ್ಳುವುದಕ್ಕಾಗಿ ಆ ಮನೆಯನ್ನು ಬಿಟ್ಟು ಇನ್ನೊಂದು ಮನೆಗೆ ಹೋಗಬೇಡಿರಿ.
”ಕೊರಾಜಿನೇ, ಬೆತ್ಸಾಯಿದವೇ, ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
”ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.
ಎಪ್ಪತ್ತೆರಡು ಮಂದಿ ಶಿಷ್ಯರು ತಮ್ಮ ಪ್ರವಾಸದಿಂದ ಹಿಂತಿರುಗಿ ಬಂದಾಗ ಬಹಳ ಸಂತೋಷವಾಗಿದ್ದರು. ಅವರು ಯೇಸುವಿಗೆ, “ಪ್ರಭುವೇ, ನಾವು ನಿನ್ನ ಹೆಸರನ್ನು ಹೇಳಿದಾಗ ದೆವ್ವಗಳು ಸಹ ನಮಗೆ ವಿಧೇಯವಾದವು!” ಎಂದು ಹೇಳಿದರು.
ಕೇಳಿರಿ! ಹಾವುಗಳ ಮತ್ತು ಚೇಳುಗಳ ಮೇಲೆ ನಡೆಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ವೈರಿಗಿರುವ ಅಧಿಕಾರಕ್ಕಿಂತಲೂ (ಸೈತಾನ) ಹೆಚ್ಚಿನ ಅಧಿಕಾರವನ್ನು ನಿಮಗೆ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದಿಲ್ಲ.
ಬಳಿಕ ಯೇಸು ಪವಿತ್ರಾತ್ಮನ ಮೂಲಕ ಬಹಳ ಸಂತೋಷಗೊಂಡು ಹೀಗೆ ಪ್ರಾರ್ಥಿಸಿದನು: “ಪರಲೋಕ ಭೂಲೋಕಗಳ ಪ್ರಭುವಾದ ತಂದೆಯೇ, ನಾನು ನಿನ್ನನ್ನು ಸ್ತುತಿಸುತ್ತೇನೆ. ನೀನು ಜ್ಞಾನಿಗಳಿಗೂ ಬುದ್ಧಿವಂತರಿಗೂ ಈ ಸಂಗತಿಗಳನ್ನು ಮರೆಮಾಡಿದ್ದಕ್ಕಾಗಿ ನಾನು ನಿನ್ನನ್ನು ಸ್ತುತಿಸುತ್ತೇನೆ. ಆದರೆ ನೀನು ಚಿಕ್ಕಮಕ್ಕಳಂತಿರುವ ಜನರಿಗೆ ಈ ಸಂಗತಿಗಳನ್ನು ಪ್ರಕಟಮಾಡಿದೆ. ಹೌದು, ತಂದೆಯೇ, ಅದೇ ನಿನ್ನ ಅಪೇಕ್ಷೆಯಾಗಿತ್ತು.
”ನನ್ನ ತಂದೆಯು ಎಲ್ಲವನ್ನೂ ನನಗೆ ಕೊಟ್ಟಿದ್ದಾನೆ. ಮಗನು ಯಾರೆಂಬುದು ಯಾರಿಗೂ ಗೊತ್ತಿಲ್ಲ. ತಂದೆಯೊಬ್ಬನಿಗೇ ಗೊತ್ತಿದೆ. ತಂದೆಯು ಯಾರೆಂಬುದು ಮಗನಿಗೆ ಮಾತ್ರ ಗೊತ್ತಿದೆ. ಮಗನು ತಂದೆಯ ಬಗ್ಗೆ ಯಾರಿಗೆ ತಿಳಿಸುತ್ತಾನೋ ಅವರು ಮಾತ್ರ ತಂದೆಯ ಬಗ್ಗೆ ತಿಳಿದುಕೊಳ್ಳುವರು.”
ಅನೇಕ ಪ್ರವಾದಿಗಳೂ ಅರಸರೂ ಈಗ ನೀವು ನೋಡುತ್ತಿರುವ ಈ ಸಂಗತಿಗಳನ್ನು ನೋಡಬೇಕೆಂದು ಮತ್ತು ಈಗ ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದನು.
ಅದಕ್ಕೆ ಅವನು, “ನೀನು ನಿನ್ನ ಪ್ರಭುವಾದ ದೇವರನ್ನು ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ಮತ್ತು ಪೂರ್ಣಮನಸ್ಸಿನಿಂದ ಪ್ರೀತಿಸಬೇಕು؆ ಮತ್ತು ನೀನು ನಿನ್ನನ್ನು ಪ್ರೀತಿಸುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು؆ ಎಂದು ಬರೆದಿದೆ” ಎಂಬುದಾಗಿ ಹೇಳಿದನು.
ಆಗ ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬ ಮನುಷ್ಯನು ಜೆರುಸಲೇಮಿನಿಂದ ಇಳಿದು ಜೆರಿಕೋವಿನ ಮಾರ್ಗವಾಗಿ ಹೋಗುತ್ತಿದ್ದನು. ಕೆಲವು ದರೋಡೆಗಾರರು ಅವನನ್ನು ಸುತ್ತುಗಟ್ಟಿದರು. ಅವರು ಅವನ ಬಟ್ಟೆಯನ್ನು ಹರಿದುಹಾಕಿ ಅವನನ್ನು ಹೊಡೆದರು. ಅವನು ಮೇಲೇಳಲಾರದೆ ನೆಲದಮೇಲೆ ಬಿದ್ದುಕೊಂಡನು. ದರೋಡೆಗಾರರು ಅವನನ್ನು ನೆಲದ ಮೇಲೆಯೇ ಬಿಟ್ಟುಹೋದರು. ಅವನು ಸಾಯುವ ಸ್ಥಿತಿಯಲ್ಲಿದ್ದನು.
ಸಮಾರ್ಯದವನು ಅವನ ಬಳಿಗೆ ಹೋಗಿ ಅವನ ಗಾಯಗಳಿಗೆ ಆಲಿವ್ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಬಟ್ಟೆಯಿಂದ ಕಟ್ಟಿದನು. ಸಮಾರ್ಯದವನು ಒಂದು ಕತ್ತೆಯ ಮೇಲೆ ಪ್ರಯಾಣ ಮಾಡುತ್ತಾ ಅಲ್ಲಿಗೆ ಬಂದಿದ್ದನು. ಗಾಯಗೊಂಡಿದ್ದ ಆ ಮನುಷ್ಯನನ್ನು ಅವನು ತನ್ನ ಕತ್ತೆಯ ಮೇಲೆ ಕುಳ್ಳಿರಿಸಿ, ಛತ್ರಕ್ಕೆ ಕರೆದುಕೊಂಡು ಹೋಗಿ, ಅವನನ್ನು ಆರೈಕೆ ಮಾಡಿದನು.
ಮರುದಿನ, ಸಮಾರ್ಯದವನು ಎರಡು ಬೆಳ್ಳಿ ನಾಣ್ಯಗಳನ್ನು ಆ ಛತ್ರದವನಿಗೆ ಕೊಟ್ಟು, ಗಾಯಗೊಂಡ ಇವನನ್ನು ಆರೈಕೆ ಮಾಡು. ಇದಕ್ಕಿಂತ ಹೆಚ್ಚಾಗಿ ಖರ್ಚಾದರೆ ನಾನು ಮತ್ತೆ ಬಂದಾಗ ನಿನಗೆ ಕೊಡುತ್ತೇನೆ؆ ಎಂದು ಹೇಳಿದನು.”
ಮನೆಯಲ್ಲಿ ಬಹಳ ಕೆಲಸವಿದ್ದುದರಿಂದ ಮಾರ್ಥಳು ಕೋಪಗೊಂಡು ಯೇಸುವಿನ ಬಳಿಗೆ ಬಂದು, “ಪ್ರಭುವೇ, ನನ್ನ ತಂಗಿಯು ಮನೆಯ ಕೆಲಸವನ್ನೆಲ್ಲಾ ನನಗೇ ಬಿಟ್ಟುಬಂದಿದ್ದಾಳೆ. ಇದರ ಬಗ್ಗೆ ನಿನಗೆ ಚಿಂತೆಯಿಲ್ಲವೋ? ನನಗೆ ಸಹಾಯ ಮಾಡಲು ಆಕೆಗೆ ಹೇಳು?” ಎಂದಳು.