ಅದೇ ಸಮಯದಲ್ಲಿ ಅಲ್ಲಿದ್ದ ಕೆಲವರು ಯೇಸುವಿನ ಬಳಿಗೆ ಬಂದು ಗಲಿಲಾಯದಲ್ಲಿ ಯಜ್ಞ ಅರ್ಪಿಸುತ್ತಿದ್ದವರನ್ನು ಪಿಲಾತನು [*ಪಿಲಾತನು ಪೊಂತ್ಯ ಪಿಲಾತನು. ಜುದೇಯವನ್ನು ಕ್ರಿ.ಶ. 26ರಿಂದ 36ರವರೆಗೆ ಆಳಿದ ರೋಮಿನ ರಾಜ್ಯಪಾಲ.] ಕೊಲ್ಲಿಸಿದ್ದನ್ನೂ ಅವರು ಯಜ್ಞವಾಗಿ ಅರ್ಪಿಸಿದ್ದ ಪಶುಗಳ ರಕ್ತದೊಡನೆ ಅವರ ರಕ್ತವನ್ನು ಬೆರಸಿದ್ದನ್ನೂ ಯೇಸುವಿಗೆ ತಿಳಿಸಿದರು.
ಸಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ, ಸತ್ತುಹೋದ ಹದಿನೆಂಟು ಮಂದಿಯ ಕುರಿತು ನಿಮ್ಮ ಅಭಿಪ್ರಾಯವೇನು? ಜೆರುಸಲೇಮಿನಲ್ಲಿ ವಾಸವಾಗಿದ್ದ ಇತರರೆಲ್ಲರಿಗಿಂತಲೂ ಅವರು ಹೆಚ್ಚು ಪಾಪಿಗಳಾಗಿದ್ದರೆಂದು ಭಾವಿಸುತ್ತೀರೋ?
ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.
ಯೇಸು ಈ ಸಾಮ್ಯವನ್ನು ಹೇಳಿದನು: “ಒಬ್ಬನು ತನ್ನ ತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದನು. ಒಮ್ಮೆ ಅವನು ಆ ಮರ ಹಣ್ಣು ಫಲಿಸಿರಬಹುದೆಂದು ಅಲ್ಲಿಗೆ ಬಂದನು. ಆದರೆ ಅವನು ಅದರಲ್ಲಿ ಒಂದು ಹಣ್ಣನ್ನೂ ಕಾಣಲಿಲ್ಲ.
ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.
ಯೇಸು ಸಬ್ಬತ್ದಿನದಲ್ಲಿ ವಾಸಿಮಾಡಿದ್ದರಿಂದ ಸಭಾಮಂದಿರದ ಅಧಿಕಾರಿ ಕೋಪಗೊಂಡು ಜನರಿಗೆ, “ಕೆಲಸಕ್ಕಾಗಿ ವಾರದಲ್ಲಿ ಆರು ದಿನಗಳಿವೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ. ಸಬ್ಬತ್ದಿನದಲ್ಲಿ ವಾಸಿಮಾಡಿಸಿಕೊಳ್ಳಬಾರದು” ಎಂದು ಹೇಳಿದನು.
ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ!
ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು.
ಈ ಮಾತನ್ನು ಕೇಳಿದಾಗ, ಆತನನ್ನು ಟೀಕಿಸುತ್ತಿದ್ದ ಜನರೆಲ್ಲರಿಗೂ ತಮ್ಮ ಬಗ್ಗೆ ನಾಚಿಕೆಯಾಯಿತು. ಯೇಸು ಮಾಡುತ್ತಿದ್ದ ಅದ್ಭುತಕಾರ್ಯಗಳಿಗಾಗಿ ಜನರೆಲ್ಲರೂ ಸಂತೋಷಪಟ್ಟರು. ದೇವರ ರಾಜ್ಯ ಯಾವುದಕ್ಕೆ ಹೋಲಿಕೆಯಾಗಿದೆ? (ಮತ್ತಾಯ 13:31-33; ಮಾರ್ಕ 4:30-32)
ದೇವರ ರಾಜ್ಯ ಸಾಸಿವೆಕಾಳಿನಂತಿದೆ. ಒಬ್ಬನು ತನ್ನ ತೋಟದಲ್ಲಿ ಈ ಬೀಜವನ್ನು ಹಾಕುತ್ತಾನೆ. ಅದು ಬೆಳೆದು ಮರವಾಗುತ್ತದೆ. ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ” ಎಂದು ಹೇಳಿದನು.
ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.
“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನು ನೀವು ನೋಡುವಿರಿ. ಆದರೆ ನಿಮ್ಮನ್ನು ಹೊರಗೆ ಹಾಕಲಾಗುವುದು. ಆಗ ನೀವು ಭಯದಿಂದಲೂ ಕೋಪದಿಂದಲೂ ಕೂಗಿಕೊಳ್ಳುವಿರಿ.
ಯೇಸು ಅವರಿಗೆ, “ನೀವು ಹೋಗಿ ಆ ನರಿಗೆ (ಹೆರೋದನಿಗೆ), ‘ಈ ದಿನ ಮತ್ತು ನಾಳೆ ನಾನು ಜನರನ್ನು ದೆವ್ವಗಳಿಂದ ಬಿಡಿಸುತ್ತೇನೆ ಮತ್ತು ರೋಗಿಗಳನ್ನು ಗುಣಪಡಿಸುವ ಕಾರ್ಯವನ್ನು ಪೂರ್ಣಗೊಳಿಸುತ್ತೇನೆ. ನಾಳಿದ್ದು, ನನ್ನ ಕಾರ್ಯವೆಲ್ಲಾ ಸಂಪೂರ್ಣ ಮುಕ್ತಾಯವಾಗುವುದು’ ಎಂದು ಹೇಳಿರಿ.
“ಜೆರುಸಲೇಮೇ, ಜೆರುಸಲೇಮೇ! ನೀನು ಪ್ರವಾದಿಗಳನ್ನು ಕೊಲ್ಲುವವಳು. ದೇವರು ನಿನ್ನ ಬಳಿಗೆ ಕಳುಹಿಸಿದ ಜನರನ್ನು ನೀನು ಕಲ್ಲೆಸೆದು ಕೊಲ್ಲುವೆ. ಕೋಳಿ ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಾನು ನಿನ್ನ ಜನರಿಗೆ ಸಹಾಯ ಮಾಡಲು ಎಷ್ಟೋ ಸಲ ಅಪೇಕ್ಷಿಸಿದೆ. ಆದರೆ ನೀನು ನನಗೆ ಆಸ್ಪದವನ್ನು ಕೊಡಲಿಲ್ಲ.
ನಿನ್ನ ಆಲಯವು ಬರಿದಾಗುವುದು. ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ಆಶೀರ್ವಾದ!’ [✡ಉಲ್ಲೇಖನ: ಕೀರ್ತನೆ. 118:26.] ಎಂದು ಹೇಳುವ ಸಮಯದ ತನಕ ನೀನು ನನ್ನನ್ನು ನೋಡುವುದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ” ಎಂದನು.