(ಮತ್ತಾಯ 18:6-7 21-22; ಮಾರ್ಕ 9:42) ಯೇಸು ತನ್ನ ಶಿಷ್ಯರಿಗೆ, “ಜನರನ್ನು ಪಾಪಕ್ಕೆ ನಡೆಸುವಂಥ ಸಂಗತಿಗಳು ಖಂಡಿತವಾಗಿ ಬರುತ್ತವೆ. ಆದರೆ ಅವುಗಳನ್ನು ಬರಮಾಡುವವನ ಗತಿಯನ್ನು ಏನು ಹೇಳಲಿ!
ನಿನ್ನ ಸಹೋದರನು ನಿನಗೆ ಒಂದು ದಿನದಲ್ಲಿ ಏಳು ಸಲ ತಪ್ಪುಮಾಡಿ, ಪ್ರತಿಸಲವೂ, ‘ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ, ನೀನು ಅವನನ್ನು ಕ್ಷಮಿಸಬೇಕು” ಎಂದು ಹೇಳಿದನು. ನಿಮ್ಮ ನಂಬಿಕೆ ಎಷ್ಟು ದೊಡ್ಡದು?
ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.
“ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ?
(ಮತ್ತಾಯ 24:23-28; 37-41) ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.
ನೋಹನ ಕಾಲದಲ್ಲಿ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ ಮಾಡಿಕೊಡುತ್ತಾ ಇದ್ದರು. ನೋಹನು ನಾವೆಯನ್ನು ಪ್ರವೇಶಿಸಿದ ದಿನದಲ್ಲಿಯೂ ಅವರು ಹಾಗೆಯೇ ಮಾಡುತ್ತಿದ್ದರು. ಆಗ ಜಲಪ್ರಳಯ ಬಂದು ಎಲ್ಲಾ ಜನರನ್ನು ನಾಶಮಾಡಿತು.
“ಲೋಟನ ಕಾಲದಲ್ಲಿ ದೇವರು ಸೊದೋಮನ್ನು ನಾಶಮಾಡಿದಾಗ ಲೋಕದ ಸ್ಥಿತಿಯು ಹೇಗಿತ್ತೋ ಅದೇರೀತಿಯಲ್ಲಿ ಮುಂದೆಯೂ ಇರುವುದು. ಆ ಜನರು ತಿನ್ನುತ್ತಾ, ಕುಡಿಯುತ್ತಾ, ಕೊಂಡುಕೊಳ್ಳುತ್ತಾ, ಮಾರಾಟ ಮಾಡುತ್ತಾ, ಬೀಜ ಬಿತ್ತುತ್ತಾ ಮತ್ತು ತಮಗಾಗಿ ಮನೆಗಳನ್ನು ಕಟ್ಟಿಸಿಕೊಳ್ಳುತ್ತಾ ಇದ್ದರು.
[†ಲೂಕನ ಸುವಾರ್ತೆಯ ಕೆಲವು ಗ್ರೀಕ್ ಪ್ರತಿಗಳಲ್ಲಿ 36ನೇ ವಚನ ಸೇರಿಸಲ್ಪಟ್ಟಿದೆ: “ಇಬ್ಬರು ಗಂಡಸರು ಒಂದೇ ಹೊಲದಲ್ಲಿರುವರು. ಒಬ್ಬನು ತೆಗೆದುಕೊಳ್ಳಲ್ಪಡುವನು, ಆದರೆ ಇನ್ನೊಬ್ಬನು ಬಿಡಲ್ಪಡುವನು.”]
ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.