ಅವನು ಯೇಸುವನ್ನು ನೋಡಲು ಬಯಸಿದನು. ಯೇಸುವನ್ನು ನೋಡುವುದಕ್ಕಾಗಿ ಇತರ ಅನೇಕ ಜನರೂ ಅಲ್ಲಿದ್ದರು. ಜಕ್ಕಾಯನು ಬಹಳ ಗಿಡ್ಡನಾಗಿದ್ದುದರಿಂದ ಆ ಜನರ ಗುಂಪಿನ ದೆಸೆಯಿಂದ ಯೇಸುವನ್ನು ನೋಡಲಾಗಲಿಲ್ಲ.
ಯೇಸು ಆ ಸ್ಥಳಕ್ಕೆ ಬಂದಾಗ, ಮರದ ಮೇಲೆ ಕುಳಿತಿದ್ದ ಜಕ್ಕಾಯನನ್ನು ಕಣ್ಣೆತ್ತಿ ನೋಡಿ ಅವನಿಗೆ, “ಜಕ್ಕಾಯನೇ ಬೇಗನೆ ಕೆಳಗಿಳಿದು ಬಾ! ಈ ದಿನ ನಾನು ನಿನ್ನ ಮನೆಯಲ್ಲಿ ಇಳಿದುಕೊಳ್ಳಬೇಕು” ಎಂದು ಹೇಳಿದನು.
ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.
ಜನರ ಈ ಭಾವನೆಯು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಈ ಸಾಮ್ಯವನ್ನು ಹೇಳಿದನು: “ಬಹಳ ಪ್ರಾಮುಖ್ಯನಾದ ಒಬ್ಬನು ರಾಜ್ಯಾಧಿಕಾರವನ್ನು ಪಡೆದುಕೊಂಡು ಬರುವುದಕ್ಕಾಗಿ ದೂರದೇಶಕ್ಕೆ ಹೊರಟನು. ರಾಜ್ಯಾಧಿಕಾರವನ್ನು ಪಡೆದುಕೊಂಡ ಮೇಲೆ ಹಿಂತಿರುಗಿ ಬಂದು ತನ್ನ ಜನರನ್ನು ಆಳಬೇಕೆಂಬುದು ಅವನ ಬಯಕೆಯಾಗಿತ್ತು.
ಆದ್ದರಿಂದ ಅವನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಒಟ್ಟಾಗಿ ಕರೆದು ಅವರಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಸಾವಿರ ರೂಪಾಯಿ ಕೊಟ್ಟು, ನಾನು ಹಿಂತಿರುಗಿ ಬರುವವರೆಗೆ ಈ ಹಣದಿಂದ ವ್ಯಾಪಾರ ಮಾಡಿರಿ’ ಎಂದು ಹೇಳಿದನು.
ಆದರೆ ಅವನ ದೇಶದ ಜನರು ಅವನನ್ನು ದ್ವೇಷಿಸಿ, ಜನರ ಒಂದು ಗುಂಪನ್ನು ಅವನ ಹಿಂದೆ ಕಳುಹಿಸಿದರು. ಆ ಗುಂಪಿನ ಜನರು ದೂರದೇಶದಲ್ಲಿ, ಇವನು ನಮ್ಮ ರಾಜನಾಗುವುದು ನಮಗೆ ಇಷ್ಟವಿಲ್ಲ!’ ಎಂದು ಹೇಳಿದರು.
”ಆದರೂ ಅವನು ಅರಸನಾದನು. ಅವನು ತನ್ನ ದೇಶಕ್ಕೆ ಹಿಂತಿರುಗಿದಾಗ, ನನ್ನ ಹಣ ಹೊಂದಿರುವ ಸೇವಕರನ್ನು ಕರೆಯಿರಿ. ಅವರು ಅದರಿಂದ ಎಷ್ಟು ಹೆಚ್ಚು ಹಣ ಸಂಪಾದಿಸಿದ್ದಾರೆಂದು ನಾನು ನೋಡಬೇಕು’ ಎಂದು ಹೇಳಿದನು.
ಅರಸನು ಆ ಸೇವಕನಿಗೆ, ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು.
ನೀನು ಬಲಿಷ್ಠನೂ ಕಠಿಣ ಮನುಷ್ಯನೂ ಸ್ವತಃ ಸಂಪಾದನೆ ಮಾಡದ ಹಣವನ್ನು ದೋಚಿಕೊಳ್ಳುವವನೂ ಸ್ವತಃ ನೀನೇ ಬೆಳೆಯದ ದವಸಧಾನ್ಯಗಳನ್ನು ಒಟ್ಟುಗೂಡಿಸುವವನೂ ಆಗಿರುವೆ. ಆದ್ದರಿಂದ ನಿನಗೆ ಹೆದರಿ ನಿನ್ನ ಹಣವನ್ನು ಬಟ್ಟೆಯಲ್ಲಿ ಸುತ್ತಿ ಬಚ್ಚಿಟ್ಟಿದ್ದೆ” ಎಂದನು.
ಆಗ ಅರಸನು ಆ ಸೇವಕನಿಗೆ, ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.
ಯೇಸು ಬೇತ್ಛಗೆ ಮತ್ತು ಬೆಥಾನಿಯ ಎಂಬ ಊರುಗಳ ಸಮೀಪಕ್ಕೆ ಬಂದನು. ಈ ಊರುಗಳು ಆಲಿವ್ ಮರಗಳ ಬೆಟ್ಟ ಎಂದು ಕರೆಯಲ್ಪಟ್ಟ ಗುಡ್ಡದ ಹತ್ತಿರವಿತ್ತು. ಯೇಸು ಇಬ್ಬರು ಶಿಷ್ಯರನ್ನು ಕರೆದು ಅವರಿಗೆ,
”ಅಲ್ಲಿ ಕಾಣುವ ಊರಿಗೆ ಹೋಗಿರಿ. ನೀವು ಆ ಊರನ್ನು ಪ್ರವೇಶಿಸಿದಾಗ ಕಟ್ಟಿಹಾಕಿರುವ ಒಂದು ಪ್ರಾಯದ ಕತ್ತೆಯನ್ನು ಕಾಣುವಿರಿ. ಆ ಕತ್ತೆಯ ಮೇಲೆ ಯಾರೂ ಇದುವರೆಗೆ ಸವಾರಿಮಾಡಿಲ್ಲ. ಆ ಕತ್ತೆಯನ್ನು ಬಿಚ್ಚಿಕೊಂಡು ಇಲ್ಲಿಗೆ ಕರೆತನ್ನಿರಿ.
ಯೇಸು ಜೆರುಸಲೇಮಿಗೆ ಸಮೀಪಿಸಿ ಆಲಿವ್ ಮರಗಳ ಗುಡ್ಡದ ಬಳಿಗೆ ಬಂದನು. ಆತನನ್ನು ಹಿಂಬಾಲಿಸುತ್ತಿದ್ದ ಶಿಷ್ಯ ಸಮೂಹದಲ್ಲಿದ್ದವರೆಲ್ಲರೂ ಸಂತೋಷಪಡುತ್ತಾ ತಾವು ನೋಡಿದ ಎಲ್ಲಾ ಮಹತ್ಕಾರ್ಯಗಳಿಗಾಗಿ ದೇವರನ್ನು ಸ್ತುತಿಸಿದರು.
ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.
ನಿನ್ನನ್ನೂ ನಿನ್ನ ಜನರೆಲ್ಲರನ್ನೂ ನಾಶಮಾಡುವರು. ನಿನ್ನ ಕಟ್ಟಡಗಳಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ದೇವರು ನಿನ್ನನ್ನು ರಕ್ಷಿಸುವುದಕ್ಕೆ ಬಂದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ ಇದೆಲ್ಲಾ ನಿನಗೆ ಸಂಭವಿಸುವುದು” ಎಂದು ಹೇಳಿದನು.
ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.