(ಮತ್ತಾಯ 21:23-27; ಮಾರ್ಕ 11:27-33) ಒಂದು ದಿನ ಯೇಸು ದೇವಾಲಯದಲ್ಲಿದ್ದನು. ಆತನು ಜನರಿಗೆ ಉಪದೇಶಿಸುತ್ತಾ ಸುವಾರ್ತೆಯನ್ನು ತಿಳಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರು ಯೇಸುವಿನ ಬಳಿಗೆ ಬಂದು,
ಅವರೆಲ್ಲರೂ ಇದರ ಬಗ್ಗೆ ಒಟ್ಟಾಗಿ ಚರ್ಚಿಸಿ ಒಬ್ಬರಿಗೊಬ್ಬರು, “ ‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ದೇವರಿಂದ ಬಂದಿತು’ ಎಂದು ಉತ್ತರಕೊಟ್ಟರೆ, ‘ಹಾಗಾದರೆ ನೀವು ಯೋಹಾನನನ್ನು ಏಕೆ ನಂಬಲಿಲ್ಲ?’ ಎಂದು ಆತನು ಕೇಳುವನು.
‘ದೀಕ್ಷಾಸ್ನಾನ ಮಾಡಿಸುವ ಅಧಿಕಾರ ಯೋಹಾನನಿಗೆ ಮನುಷ್ಯರಿಂದ ಬಂದಿತು’ ಎಂದು ಹೇಳಿದರೆ, ಜನರೆಲ್ಲರೂ ಕಲ್ಲೆಸೆದು ನಮ್ಮನ್ನು ಕೊಲ್ಲುವರು. ಏಕೆಂದರೆ ಯೋಹಾನನು ಪ್ರವಾದಿಯಾಗಿದ್ದನೆಂದು ಅವರು ನಂಬಿದ್ದಾರೆ” ಅಂದುಕೊಂಡರು.
(ಮತ್ತಾಯ 21:33-46; ಮಾರ್ಕ 12:1-12) ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ಮನುಷ್ಯನು ಒಂದು ದ್ರಾಕ್ಷಿತೋಟವನ್ನು ಮಾಡಿ ಅದನ್ನು ಕೆಲವು ರೈತರಿಗೆ ಗುತ್ತಿಗೆಗೆ ಕೊಟ್ಟನು. ಬಳಿಕ ಅವನು ಅಲ್ಲಿಂದ ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
ಯೇಸು ಹೇಳಿದ ಈ ಸಾಮ್ಯವನ್ನು ಯೆಹೂದ್ಯ ನಾಯಕರು ಕೇಳಿದರು. ತಮ್ಮನ್ನು ಕುರಿತಾಗಿಯೇ ಆತನು ಈ ಸಾಮ್ಯವನ್ನು ಹೇಳಿದನೆಂದು ಅವರು ತಿಳಿದುಕೊಂಡರು. ಆದ್ದರಿಂದ ಅವರು ಆಗಲೇ ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಅವರು ಜನರಿಗೆ ಭಯಪಟ್ಟು ಆತನನ್ನು ಬಂಧಿಸಲಿಲ್ಲ.
(ಮತ್ತಾಯ 22:15-22; ಮಾರ್ಕ 12:13-17) ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ಆದ್ದರಿಂದ ಅವರು ಯೇಸುವಿಗೆ, “ಉಪದೇಶಕನೇ, ನೀನು ಸತ್ಯವನ್ನೇ ಹೇಳುವೆ ಮತ್ತು ಉಪದೇಶಿಸುವೆ ಎಂದು ನಮಗೆ ಗೊತ್ತಿದೆ. ನೀನು ಮುಖದಾಕ್ಷಿಣ್ಯ ಮಾಡುವವನಲ್ಲ. ದೇವರ ಮಾರ್ಗದ ಕುರಿತಾಗಿ ನೀನು ಯಾವಾಗಲೂ ಸತ್ಯವನ್ನೇ ಬೋಧಿಸುವೆ!
ಆದ್ದರಿಂದ ಯೇಸು ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಆ ನಾಣ್ಯದ ಮೇಲೆ ಯಾರ ಹೆಸರಿದೆ? ಅದರ ಮೇಲೆ ಯಾರ ಮುಖಚಿತ್ರವಿದೆ?” ಎಂದು ಕೇಳಿದನು. ಅವರು, “ಸೀಸರನದು” ಎಂದು ಹೇಳಿದರು.
(ಮತ್ತಾಯ 22:23-33; ಮಾರ್ಕ 12:18-27) ಕೆಲವು ಸದ್ದುಕಾಯರು [†ಸದ್ದುಕಾಯರು ಯೆಹೂದ್ಯರ ಪ್ರಾಮುಖ್ಯ ಧಾರ್ಮಿಕ ಗುಂಪು. ಅವರು ಹಳೆ ಒಡಂಬಡಿಕೆಯ ಮೊದಲಿನ ಐದು ಪುಸ್ತಕಗಳನ್ನು ಮಾತ್ರ ಅಂಗೀಕರಿಸಿದವರಾಗಿದ್ದರು.] ಯೇಸುವಿನ ಬಳಿಗೆ ಬಂದರು. (ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದು ಸದ್ದುಕಾಯರು ನಂಬುತ್ತಾರೆ.) ಅವರು ಯೇಸುವಿಗೆ,
ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ [§ಉರಿಯುವ ಪೊದೆ ನೋಡಿರಿ: ವಿಮೋಚನ. 3:1-12.] ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
ದೇವರು ಅವರೆಲ್ಲರಿಗೆ ದೇವರಾಗಿರುವುದರಿಂದ ಅವರೆಲ್ಲರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ ದೇವರು ಜೀವಿಸುವ ಜನರಿಗೇ ದೇವರಾಗಿದ್ದಾನೆ. ದೇವರಿಗೆ ಸೇರಿದವರೆಲ್ಲರೂ ಜೀವಂತರಾಗಿದ್ದಾರೆ” ಎಂದು ಹೇಳಿದನು.
“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ.
ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.