(ಮತ್ತಾಯ 8:1-4; ಮಾರ್ಕ 1:40-45) ಒಮ್ಮೆ ಯೇಸು ಒಂದು ಊರಿನಲ್ಲಿದ್ದಾಗ ಕುಷ್ಠರೋಗಿಯೊಬ್ಬನು ಆತನನ್ನು ಕಂಡು, ಆತನ ಮುಂದೆ ಅಡ್ಡಬಿದ್ದು, “ಪ್ರಭುವೇ, ನೀನು ಮನಸ್ಸು ಮಾಡಿದರೆ ನನ್ನನ್ನು ಗುಣಪಡಿಸಬಲ್ಲೆ ಎಂದು ನನಗೆ ಗೊತ್ತಿದೆ” ಎಂದು ಬೇಡಿಕೊಂಡನು.
ಯೇಸು ಅವನಿಗೆ, “ನಿನಗೆ ಹೇಗೆ ಗುಣವಾಯಿತು ಎಂಬುದರ ಬಗ್ಗೆ ಯಾರಿಗೂ ಹೇಳದೆ ಯಾಜಕನ ಬಳಿಗೆ ಹೋಗಿ ನಿನ್ನ ಮೈಯನ್ನು ತೋರಿಸಿ ಮೋಶೆಯ ನಿಯಮಗಳಿಗನುಸಾರವಾಗಿ ಕಾಣಿಕೆಯನ್ನು ದೇವರಿಗೆ ಸಮರ್ಪಿಸು. ನಿನಗೆ ವಾಸಿಯಾಯಿತೆಂಬುದಕ್ಕೆ ಇದೇ ಜನರಿಗೆಲ್ಲಾ ಸಾಕ್ಷಿಯಾಗಿರುವುದು” ಎಂದು ಹೇಳಿದನು. ಆದರೆ ಯೇಸುವಿನ ಸುದ್ದಿಯು ಹೆಚ್ಚೆಚ್ಚಾಗಿ ಹಬ್ಬಿತು.
(ಮತ್ತಾಯ 9:1-8; ಮಾರ್ಕ 2:1-12) ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.
ಆದರೆ ಅಲ್ಲಿ ಬಹಳ ಜನ ಇದ್ದುದರಿಂದ ಯೇಸುವಿನ ಬಳಿಗೆ ಹೋಗಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಅವರು ಮನೆಯ ಮೇಲೆ ಹತ್ತಿ ಹೆಂಚುಗಳನ್ನು ತೆಗೆದು ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.
ಯೆಹೂದ್ಯ ಧರ್ಮೋಪದೇಶಕರು ಮತ್ತು ಫರಿಸಾಯರು, “ಈ ಮನುಷ್ಯನು (ಯೇಸು) ಯಾರು? ಈತನು ದೇವರಿಗೆ ವಿರುದ್ಧವಾದ ಸಂಗತಿಗಳನ್ನು ಹೇಳುತ್ತಾನಲ್ಲಾ! ದೇವರೊಬ್ಬನೇ ಪಾಪಗಳನ್ನು ಕ್ಷಮಿಸಬಲ್ಲನು” ಎಂದು ತಮ್ಮತಮ್ಮೊಳಗೆ ಯೋಚಿಸಿದರು.
ಆದರೆ ಮನುಷ್ಯಕುಮಾರನಿಗೆ [*ಮನುಷ್ಯಕುಮಾರನು ಯೇಸು. ದಾನಿಯೇಲ 7:13-14ರಲ್ಲಿ ದೇವರು ತನ್ನ ಜನರನ್ನು ರಕ್ಷಿಸಲು ಆರಿಸಿಕೊಂಡ ಮೆಸ್ಸೀಯನಿಗೆ ಈ ಹೆಸರು ಕೊಡಲಾಗಿದೆ.] ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವ ಅಧಿಕಾರ ಉಂಟೆಂಬುದು ನಿಮಗೆ ಖಚಿತವಾಗಬೇಕು” ಎಂದು ಹೇಳಿ, ಪಾರ್ಶ್ವವಾಯು ರೋಗಿಗೆ, “ಏಳು! ನಿನ್ನ ಹಾಸಿಗೆಯನ್ನು ಹೊತ್ತುಕೊಂಡು ಮನೆಗೆ ಹೋಗು!” ಎಂದು ಹೇಳಿದನು.
(ಮತ್ತಾಯ 9:9-13; ಮಾರ್ಕ 2:13-17) ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
ಆದರೆ ಫರಿಸಾಯರು ಮತ್ತು ಧರ್ಮೋಪದೇಶಕರು ಯೇಸುವಿನ ಶಿಷ್ಯರಿಗೆ, “ನೀವು ಸುಂಕದವರೊಡನೆ ಮತ್ತು ಇತರ ಕೆಟ್ಟ ಜನರೊಂದಿಗೆ ಏಕೆ ಊಟಮಾಡುತ್ತೀರಿ ಮತ್ತು ಕುಡಿಯುತ್ತೀರಿ?” ಎಂದು ಆಕ್ಷೇಪಿಸಿದರು.
(ಮತ್ತಾಯ 9:14-17; ಮಾರ್ಕ 2:18-22) ಅವರು ಯೇಸುವಿಗೆ, “ಫರಿಸಾಯರ ಹಿಂಬಾಲಕರು ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ಯೋಹಾನನ ಶಿಷ್ಯರು ಆಗಾಗ್ಗೆ ಉಪವಾಸವಿದ್ದು ಪ್ರಾರ್ಥಿಸುತ್ತಾರೆ. ನಿನ್ನ ಶಿಷ್ಯರಾದರೋ ಯಾವಾಗಲೂ ತಿಂದುಕುಡಿಯುವುದರಲ್ಲೇ ಇದ್ದಾರೆ” ಎಂದು ಟೀಕಿಸಿದರು.
ಬಳಿಕ ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಹಳೆ ಅಂಗಿಗೆ ತೇಪೆ ಹಚ್ಚುವುದಕ್ಕಾಗಿ ಹೊಸ ಅಂಗಿಯಿಂದ ಬಟ್ಟೆಯನ್ನು ಯಾರೂ ಹರಿದುಕೊಳ್ಳುವುದಿಲ್ಲ. ಹಾಗೆ ಮಾಡಿದ್ದೇಯಾದರೆ, ಹೊಸ ಅಂಗಿಯನ್ನು ಕೆಡಿಸಿಕೊಂಡಂತಾಗುತ್ತದೆ. ಅಲ್ಲದೆ ಹೊಸ ಅಂಗಿಯ ಬಟ್ಟೆಯು ಹಳೆ ಅಂಗಿಗೆ ಹೋಲುವುದೂ ಇಲ್ಲ.
ಅಂತೆಯೇ ಹೊಸ ದ್ರಾಕ್ಷಾರಸವನ್ನು ಹಳೆಯ ದ್ರಾಕ್ಷಾರಸದ ಚೀಲಗಳಲ್ಲಿ ಯಾರೂ ತುಂಬಿಡುವುದಿಲ್ಲ. ಒಂದುವೇಳೆ ತುಂಬಿದರೆ, ಹೊಸ ದ್ರಾಕ್ಷಾರಸವು ಚೀಲಗಳನ್ನು ಒಡೆದುಹಾಕುವುದರಿಂದ ದ್ರಾಕ್ಷಾರಸವೂ ಚೆಲ್ಲಿಹೋಗುತ್ತದೆ, ಚೀಲಗಳೂ ಹಾಳಾಗುತ್ತವೆ.