ದಾವೀದನು ದೇವರ ಮಂದಿರದೊಳಕ್ಕೆ ಹೋಗಿ, ದೇವರಿಗೆ ಸಮರ್ಪಿಸಿದ್ದ ರೊಟ್ಟಿಯನ್ನು ತೆಗೆದುಕೊಂಡು ತಿಂದನು. ತನ್ನ ಜೊತೆ ಇದ್ದ ಜನರಿಗೂ ಸ್ವಲ್ಪ ಕೊಟ್ಟನು. ಇದು ಮೋಶೆಯ ಧರ್ಮಶಾಸ್ತ್ರಕ್ಕೆ ವಿರುದ್ಧ. ಯಾಜಕರು ಮಾತ್ರವೇ ಈ ರೊಟ್ಟಿಯನ್ನು ತಿನ್ನಬಹುದು ಎಂದು ಧರ್ಮಶಾಸ್ತ್ರ ಹೇಳುತ್ತದೆ” ಎಂದು ಉತ್ತರಿಸಿ,
ಆಗ ಯೇಸು ಅವರಿಗೆ, “ಸಬ್ಬತ್‌ದಿನದಲ್ಲಿ ಯಾವ ಕಾರ್ಯವನ್ನು ಮಾಡುವುದು ಸರಿ? ಒಳ್ಳೆಯ ಕಾರ್ಯವನ್ನೋ ಅಥವಾ ಕೆಟ್ಟಕಾರ್ಯವನ್ನೋ? ಜೀವವನ್ನು ಉಳಿಸುವುದೋ? ಅಥವಾ ನಾಶಮಾಡುವುದೋ?” ಎಂದು ಕೇಳಿದನು.
ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:
(ಮತ್ತಾಯ 4:23-25; 5:1-12) ಯೇಸು ಮತ್ತು ಅಪೊಸ್ತಲರು ಬೆಟ್ಟದಿಂದಿಳಿದು ಸಮತಟ್ಟಾದ ಸ್ಥಳಕ್ಕೆ ಬಂದರು. ಆತನ ಹಿಂಬಾಲಕರ ಒಂದು ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮಿನಿಂದಲೂ ಜನಸಮೂಹವು ಅಲ್ಲಿಗೆ ಬಂದಿತ್ತು.
ನೀವು ಯಾರಿಗಾದರೂ ಸಾಲಕೊಟ್ಟು, ಅದನ್ನು ಪೂರ್ತಿಯಾಗಿ ಮತ್ತೆ ಅವರಿಂದ ತೆಗೆದುಕೊಂಡರೆ ಅದರಿಂದ ನಿಮಗೆ ಹೊಗಳಿಕೆ ಬರುವುದೇ? ಪಾಪಿಷ್ಠರು ಸಹ ಹಾಗೆಯೇ ಸಾಲಕೊಟ್ಟು ಮತ್ತೆ ಅದನ್ನು ಪೂರ್ತಿಯಾಗಿ ಮರಳಿ ಪಡೆಯುತ್ತಾರೆ!
“ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.
“ಬೇರೆಯವರಿಗೆ ತೀರ್ಪು ಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಬೇರೆಯವರನ್ನು ಅಪರಾಧಿಗಳೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಇತರರನ್ನು ಕ್ಷಮಿಸಿರಿ, ಆಗ ನಿಮಗೂ ಕ್ಷಮಾಪಣೆ ಆಗುವುದು.
ಇತರರಿಗೆ ಕೊಡಿರಿ, ಆಗ ನಿಮಗೂ ದೊರೆಯುವುದು. ಪಾತ್ರೆಯಲ್ಲಿ ಅದುಮಿ, ಅಲ್ಲಾಡಿಸಿ ಹೊರಚೆಲ್ಲುವಂತೆ ಅಳೆದು ನಿಮ್ಮ ಸೆರಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು.”
ನೀನು ಅವನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆಯುತ್ತೇನೆ’ ಎಂದು ನೀನು ಹೇಗೆ ಹೇಳಬಲ್ಲೆ? ನಿನ್ನ ಸ್ವಂತ ಕಣ್ಣಿನಲ್ಲಿರುವ ತೊಲೆಯೇ ನಿನಗೆ ಕಾಣಿಸದು! ನೀನು ಕಪಟಿ. [†ಕಪಟಿ ಒಳ್ಳೆಯವನಂತೆ ನಟಿಸುವ ಕೆಟ್ಟ ವ್ಯಕ್ತಿ.] ಮೊದಲು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ತೆಗೆದುಹಾಕು. ಆಗ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆಯಲು ನಿನಗೆ ಸ್ಪಷ್ಟವಾಗಿ ಕಾಣಿಸುವುದು.
ಒಳ್ಳೆಯವನ ಹೃದಯದಲ್ಲಿ ಒಳ್ಳೆಯವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಒಳ್ಳೆಯವು ಹೊರಬರುತ್ತವೆ. ಆದರೆ ಕೆಟ್ಟವನ ಹೃದಯದಲ್ಲಿ ಕೆಟ್ಟವು ಇರುತ್ತವೆ. ಆದ್ದರಿಂದ ಅವನ ಹೃದಯದೊಳಗಿಂದ ಕೆಟ್ಟವು ಹೊರಬರುತ್ತವೆ. ಹೃದಯದಲ್ಲಿ ತುಂಬಿರುವುದೇ ಬಾಯಲ್ಲಿ ಬರುವುದು.
ಅವನು ಆಳವಾದ ಅಸ್ತಿವಾರ ಹಾಕಿ, ಬಲವಾದ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟುತ್ತಾನೆ. ಪ್ರವಾಹವು ಏರಿಬಂದು ಆ ಮನೆಗೆ ಅಪ್ಪಳಿಸಿದರೂ ಆ ಮನೆಯನ್ನು ಕದಲಿಸಲಾರದು; ಏಕೆಂದರೆ ಆ ಮನೆಯು ಬಲವಾಗಿ ಕಟ್ಟಲ್ಪಟ್ಟಿದೆ.
“ಅದೇ ರೀತಿಯಲ್ಲಿ, ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದ ವ್ಯಕ್ತಿಯು ಅಸ್ತಿವಾರವಿಲ್ಲದೆ ನೆಲದಮೇಲೆ ಮನೆ ಕಟ್ಟಿದ ಮನುಷ್ಯನಂತಿರುವನು. ಪ್ರವಾಹ ಬಂದಾಗ, ಮನೆಯು ಬೇಗನೆ ಕುಸಿದುಹೋಗಿ ಸಂಪೂರ್ಣವಾಗಿ ನಾಶವಾಗುತ್ತದೆ.”