ನಂತರ ಯೇಸು ಆ ಸ್ಥಳವನ್ನು ಬಿಟ್ಟು ಜುದೇಯ ಪ್ರಾಂತ್ಯಕ್ಕೆ ಹಾಗೂ ಜೋರ್ಡನ್ ನದಿಯ ಆಚೆದಡಕ್ಕೆ ಹೋದನು. ಅನೇಕ ಜನರು ಮತ್ತೆ ಆತನ ಬಳಿಗೆ ಬಂದರು. ಯೇಸು ಎಂದಿನಂತೆ ಆ ಜನರಿಗೆ ಉಪದೇಶಿಸಿದನು.
(ಮತ್ತಾಯ 19:13-15; ಲೂಕ 18:15-17) ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.
(ಮತ್ತಾಯ 19:16-30; ಲೂಕ 18:18-30) ಯೇಸು ಅಲ್ಲಿಂದ ಹೊರಡಬೇಕೆಂದಿದ್ದಾಗ ಒಬ್ಬನು ಓಡಿಬಂದು, ಆತನ ಮುಂದೆ ತನ್ನ ಮೊಣಕಾಲೂರಿ, “ಒಳ್ಳೆಯ ಉಪದೇಶಕನೇ, ನಿತ್ಯಜೀವವನ್ನು ಪಡೆಯಲು ನಾನು ಏನು ಮಾಡಬೇಕು?” ಎಂದು ಕೇಳಿದನು.
ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’ ” ಎಂದು ಉತ್ತರಿಸಿದನು.
ಯೇಸು ಆ ಮನುಷ್ಯನನ್ನು ಪ್ರೀತಿಯಿಂದ ದೃಷ್ಟಿಸಿನೋಡಿ, “ನೀನು ಮಾಡಬೇಕಾದ ಕಾರ್ಯವೊಂದಿದೆ. ಹೋಗಿ, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ಬಡವರಿಗೆ ಕೊಡು. ನಿನಗೆ ಪರಲೋಕದಲ್ಲಿ ಪ್ರತಿಫಲ ಇರುವುದು. ನಂತರ ಬಂದು, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ
ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.
(ಮತ್ತಾಯ 20:17-19; ಲೂಕ 18:31-34) ಯೇಸು ಮತ್ತು ಆತನ ಜೊತೆಯಲ್ಲಿದ್ದ ಜನರು ಜೆರುಸಲೇಮಿಗೆ ಹೋಗುತ್ತಿರಲು ಯೇಸು ಅವರೆಲ್ಲರಿಗಿಂತ ಮುಂದೆ ಹೋಗುತ್ತಿದ್ದನು. ಅದನ್ನು ನೋಡಿ ಯೇಸುವಿನ ಶಿಷ್ಯರು ಬೆರಗಾದರು. ಅವರನ್ನು ಹಿಂಬಾಲಿಸಿ ಬರುತ್ತಿದ್ದ ಜನರು ಭಯಗೊಂಡರು. ಯೇಸು ಹನ್ನೆರಡು ಜನ ಅಪೊಸ್ತಲರನ್ನು ತನ್ನ ಬಳಿಗೆ ಕರೆದು, ಜೆರುಸಲೇಮಿನಲ್ಲಿ ತನಗೆ ಸಂಭವಿಸಲಿರುವುದನ್ನು ಅವರಿಗೆ ಹೇಳುತ್ತಾ,
“ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಮನುಷ್ಯಕುಮಾರನನ್ನು ಮಹಾಯಾಜಕರಿಗೂ ಧರ್ಮೋಪದೇಶಕರಿಗೂ ಒಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನರಿಗೆ ಒಪ್ಪಿಸುತ್ತಾರೆ.
ಆ ಜನರು ಆತನನ್ನು ನೋಡಿ ಅಪಹಾಸ್ಯ ಮಾಡುತ್ತಾರೆ, ಆತನ ಮೇಲೆ ಉಗುಳುತ್ತಾರೆ, ಆತನನ್ನು ಬಾರುಕೋಲಿನಿಂದ ಹೊಡೆಯುತ್ತಾರೆ ಮತ್ತು ಕೊಲ್ಲುತ್ತಾರೆ. ಆದರೆ ಆತನು ಮೂರನೆಯ ದಿನದಂದು ಮತ್ತೆ ಜೀವಂತನಾಗಿ ಎದ್ದುಬರುತ್ತಾನೆ” ಎಂದು ತಿಳಿಸಿದನು.
ಅವರು, “ನೀನು ನಿನ್ನ ರಾಜ್ಯದಲ್ಲಿ ವೈಭವದಿಂದಿರುವಾಗ ನಮ್ಮಲ್ಲಿ ಒಬ್ಬನು ನಿನ್ನ ಬಲಗಡೆಯಲ್ಲಿಯೂ ಮತ್ತೊಬ್ಬನು ನಿನ್ನ ಎಡಗಡೆಯಲ್ಲಿಯೂ ಕುಳಿತುಕೊಳ್ಳುವಂತೆ ಅನುಗ್ರಹಿಸು” ಎಂದು ಉತ್ತರಿಸಿದರು.
ಯೇಸು, “ನೀವು ಏನು ಕೇಳುತ್ತಿದ್ದೀರಿ ಎಂಬುದು ನಿಮಗೆ ತಿಳಿದಿಲ್ಲ. ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ಕುಡಿಯಲು ನಿಮಗೆ ಸಾಧ್ಯವೇ? ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವು ಹೊಂದಲು ಸಾಧ್ಯವೇ?” ಎಂದನು.
ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.
ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.
ಯೇಸು ಎಲ್ಲಾ ಶಿಷ್ಯರನ್ನು ಒಟ್ಟಾಗಿ ಕರೆದು, “ಯೆಹೂದ್ಯರಲ್ಲದವರು ಅಧಿಪತಿಗಳನ್ನು ಹೊಂದಿದ್ದಾರೆ. ಆ ಅಧಿಪತಿಗಳು ಜನರ ಮೇಲೆ ತಮಗಿರುವ ಅಧಿಕಾರವನ್ನು ತೋರಿಸಲು ಇಷ್ಟಪಡುತ್ತಾರೆಂಬುದು ನಿಮಗೆ ತಿಳಿದಿದೆ. ಅವರ ಪ್ರಮುಖ ನಾಯಕರುಗಳು ಜನರ ಮೇಲೆ ತಮಗಿರುವ ಅಧಿಕಾರವನ್ನೆಲ್ಲಾ ಉಪಯೋಗಿಸಲು ಇಷ್ಟಪಡುತ್ತಾರೆ.
ಅದೇ ರೀತಿ ಮನುಷ್ಯಕುಮಾರನು ಜನರಿಂದ ಸೇವೆ ಮಾಡಿಸಿಕೊಳ್ಳಲು ಬರದೆ, ಜನರ ಸೇವೆಮಾಡಲು ಬಂದನು. ಮನುಷ್ಯಕುಮಾರನು ಅನೇಕ ಜನರನ್ನು ರಕ್ಷಿಸುವುದಕ್ಕಾಗಿ ತನ್ನ ಪ್ರಾಣವನ್ನೇ ಈಡುಕೊಡಲು ಬಂದನು” ಎಂದು ಹೇಳಿದನು.
(ಮತ್ತಾಯ 20:29-34; ಲೂಕ 18:35-43) ನಂತರ ಅವರು ಜೆರಿಕೊ ಎಂಬ ಊರಿಗೆ ಬಂದರು. ಯೇಸು ತನ್ನ ಶಿಷ್ಯರೊಂದಿಗೆ ಮತ್ತು ಇತರ ಅನೇಕ ಜನರೊಂದಿಗೆ ಆ ಊರನ್ನು ಬಿಟ್ಟು ಹೊರಟಿದ್ದನು. ತಿಮಾಯನ ಮಗನಾದ ಬಾರ್ತಿಮಾಯ ಎಂಬ ಕುರುಡನು ರಸ್ತೆಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದನು.