ಅಲ್ಲಿದ್ದ ಕೆಲವು ಯೆಹೂದ್ಯರು, ಯೇಸುವನ್ನು ದೂಷಿಸುವುದಕ್ಕಾಗಿ ಆತನಲ್ಲಿ ಏನಾದರೂ ತಪ್ಪನ್ನು ಕಂಡುಹಿಡಿಯಲು ಎದುರು ನೋಡುತ್ತಿದ್ದರು. ಸಬ್ಬತ್ದಿನದಂದು ಆ ಮನುಷ್ಯನನ್ನು ಯೇಸು ಗುಣಪಡಿಸಬಹುದೆಂದು ಅವರು ಆತನ ಸಮೀಪದಲ್ಲಿಯೇ ಇದ್ದರು.
ನಂತರ ಯೇಸು ಜನರಿಗೆ, “ಸಬ್ಬತ್ದಿನದಂದು ಯಾವ ಕಾರ್ಯಗಳನ್ನು ಮಾಡಬೇಕು? ಒಳ್ಳೆಯ ಕಾರ್ಯವನ್ನೇ? ಕೆಟ್ಟಕಾರ್ಯವನ್ನೇ? ಒಂದು ಜೀವವನ್ನು ರಕ್ಷಿಸಬೇಕೇ? ಅಥವಾ ನಾಶಪಡಿಸಬೇಕೇ?” ಎಂದು ಕೇಳಿದನು. ಆಗ ಅವರು ಏನೂ ಉತ್ತರ ಕೊಡಲಾರದೆ ಮೌನವಾಗಿದ್ದರು.
ಯೇಸು ಕೋಪಗೊಂಡು ಜನರ ಕಡೆಗೆ ನೋಡಿದನು. ಅವರ ಮೊಂಡುತನವನ್ನು ಕಂಡು ಆತನಿಗೆ ದುಃಖವಾಯಿತು. ಯೇಸು ಆ ಮನುಷ್ಯನಿಗೆ, “ನಿನ್ನ ಕೈ ಚಾಚು” ಎಂದು ಹೇಳಿದನು. ಅವನು ತನ್ನ ಕೈಯನ್ನು ಯೇಸುವಿನತ್ತ ಚಾಚಿದನು. ಕೂಡಲೇ ಅವನ ಕೈ ವಾಸಿಯಾಯಿತು.
ಅನೇಕಾನೇಕ ಜನರು ಜುದೇಯದಿಂದ, ಜೆರುಸಲೇಮಿನಿಂದ, ಇದೂಮಾಯದಿಂದ, ಜೋರ್ಡನ್ ನದಿಯ ಆಚೆಗಿರುವ ಪ್ರದೇಶದಿಂದ ಮತ್ತು ಟೈರ್, ಸೀದೋನ್ಗಳ ಸುತ್ತಲಿನ ಪ್ರದೇಶಗಳಿಂದ ಬಂದರು. ಯೇಸುವು ಮಾಡುತ್ತಿದ್ದ ಕಾರ್ಯಗಳ ಬಗ್ಗೆ ಅವರು ಕೇಳಿ ಬಂದಿದ್ದರು.
ಯೇಸು ಅನೇಕ ಜನರನ್ನು ಗುಣಪಡಿಸಿದನು. ಆದ್ದರಿಂದ ಕಾಯಿಲೆಯಾಗಿದ್ದ ಜನರೆಲ್ಲರೂ ಆತನನ್ನು ಮುಟ್ಟುವುದಕ್ಕಾಗಿ ಆತನ ಮೇಲೆ ಬೀಳುತ್ತಿದ್ದರು. ದೆವ್ವಗಳಿಂದ ಪೀಡಿತರಾಗಿದ್ದ ಕೆಲವು ಜನರು ಅಲ್ಲಿದ್ದರು.
(ಮತ್ತಾಯ 10:1-4; ಲೂಕ 6:12-16) ನಂತರ ಯೇಸು ಒಂದು ಬೆಟ್ಟದ ಮೇಲಕ್ಕೆ ಹೋದನು. ಯೇಸು ಕೆಲವು ಜನರಿಗೆ ತನ್ನೊಂದಿಗೆ ಬರಲು ಹೇಳಿದನು. ಯೇಸು ಅಪೇಕ್ಷಿಸಿದ ಜನರು ಇವರೇ. ಈ ಜನರು ಯೇಸುವಿನೊಂದಿಗೆ ಮೇಲಕ್ಕೆ ಹೋದರು.
ಆತನು ಅವರಲ್ಲಿ ಹನ್ನೆರಡು ಮಂದಿಯನ್ನು ತನ್ನ ಅಪೊಸ್ತಲರನ್ನಾಗಿ ಆರಿಸಿಕೊಂಡನು. ಈ ಹನ್ನೆರಡು ಮಂದಿ ತನ್ನೊಂದಿಗಿರಬೇಕೆಂಬುದು ಮತ್ತು ಉಪದೇಶ ಮಾಡುವುದಕ್ಕಾಗಿ ಅವರನ್ನು ಬೇರೆ ಸ್ಥಳಗಳಿಗೆ ಕಳುಹಿಸಬೇಕೆಂಬುದು
(ಮತ್ತಾಯ 12:22-32; ಲೂಕ 11:14-23; 12:10) ನಂತರ ಯೇಸು ಮನೆಗೆ ಹೋದನು. ಮತ್ತೆ ಅನೇಕ ಜನರು ಅಲ್ಲಿಗೆ ಸೇರಿಬಂದರು. ಆದ್ದರಿಂದ ಯೇಸು ಮತ್ತು ಅವನ ಶಿಷ್ಯರಿಗೆ ಊಟಮಾಡಲೂ ಸಾಧ್ಯವಾಗಲಿಲ್ಲ.
“ಒಬ್ಬ ವ್ಯಕ್ತಿಯು ಬಲಾಢ್ಯನ ಮನೆಗೆ ಪ್ರವೇಶಿಸಿ ಅವನ ವಸ್ತುಗಳನ್ನು ಕದಿಯಲು ಇಚ್ಛಿಸಿದರೆ, ಮೊದಲು ಅವನು ಬಲಾಢ್ಯನನ್ನು ಕಟ್ಟಿಹಾಕಬೇಕು. ಆಗ ಅವನು ಬಲಾಢ್ಯನ ಮನೆಯಿಂದ ವಸ್ತುಗಳನ್ನು ಕದಿಯಲು ಸಾಧ್ಯವಾಗುವುದು.