(7-8) ಯೇಸು ಅವನಿಗೆ, “ಎಲೈ ದೆವ್ವವೇ, ಅವನೊಳಗಿಂದ ಹೊರಗೆ ಬಾ” ಎಂದು ಹೇಳಿದನು. ಆಗ ಅವನು ಗಟ್ಟಿಯಾದ ಧ್ವನಿಯಿಂದ ಅರಚುತ್ತಾ, “ಯೇಸುವೇ, ಪರಾತ್ಪರನಾದ ದೇವಕುಮಾರನೇ, ನನ್ನಿಂದ ನಿನಗೆ ಏನಾಗಬೇಕಾಗಿದೆ? ದೇವರಾಣೆಯಿಟ್ಟು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ” ಎಂದು ಕೇಳಿಕೊಂಡನು.
ಆಗ ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದನು. ಅವನು “ನನ್ನ ಹೆಸರು ದಂಡು, [*ದಂಡು ಅಂದರೆ 6,000 ಸೈನಿಕರುಳ್ಳ ಸೈನ್ಯದಳ.] ಏಕೆಂದರೆ ನನ್ನಲ್ಲಿ ಅನೇಕ ದೆವ್ವಗಳಿವೆ” ಎಂದು ಉತ್ತರಕೊಟ್ಟನು.
ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.
ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು.
ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.
ಆದರೆ ಯೇಸು ಅವನನ್ನು ಕರೆದುಕೊಂಡು ಹೋಗಲು ಒಪ್ಪದೆ, “ನಿನ್ನ ಮನೆಗೂ ನಿನ್ನ ಸ್ನೇಹಿತರ ಬಳಿಗೂ ಹೋಗು. ಪ್ರಭುವು ನಿನಗೆ ಮಾಡಿದ ಒಳ್ಳೆಯದನ್ನೂ ಆತನು ನಿನಗೆ ತೋರಿದ ಕರುಣೆಯನ್ನೂ ಅವರಿಗೆ ತಿಳಿಸು” ಎಂದು ಹೇಳಿದನು.
ಆಕೆಯು ಬಹಳ ಸಂಕಟಪಟ್ಟಿದ್ದಳು. ಅವಳಿಗೆ ಸಹಾಯ ಮಾಡಲು ಅನೇಕ ವೈದ್ಯರು ಪ್ರಯತ್ನಿಸಿದ್ದರು. ಆಕೆಯಲ್ಲಿದ್ದ ಹಣವೆಲ್ಲವೂ ವೆಚ್ಚವಾಯಿತು. ಆದರೆ ಆಕೆಗೆ ವಾಸಿಯಾಗಲಿಲ್ಲ. ಅವಳ ಕಾಯಿಲೆಯು ಇನ್ನೂ ಹೆಚ್ಚಾಗುತ್ತಿತ್ತು.
ಯೇಸು ಅಲ್ಲಿ ಇನ್ನೂ ಮಾತನಾಡುತ್ತಿದ್ದನು. ಅಷ್ಟರಲ್ಲಿ ಕೆಲವು ಜನರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಯಿಂದ ಬಂದು ಯಾಯಿರನಿಗೆ, “ನಿನ್ನ ಮಗಳು ಸತ್ತುಹೋದಳು. ಈಗ ಬೋಧಕನಿಗೆ ತೊಂದರೆ ಕೊಡುವ ಅಗತ್ಯವಿಲ್ಲ” ಎಂದು ಹೇಳಿದರು.
ಆದರೆ ಆ ಜನರೆಲ್ಲರೂ ಯೇಸುವನ್ನು ಗೇಲಿ ಮಾಡಿದರು. ಯೇಸು ಆ ಜನರೆಲ್ಲರನ್ನು ಹೊರಗೆ ಕಳುಹಿಸಿ, ಆ ಬಾಲಕಿಯ ತಂದೆತಾಯಿಗಳನ್ನು ಮತ್ತು ತನ್ನ ಮೂವರು ಶಿಷ್ಯರನ್ನು ಮಾತ್ರ ತನ್ನೊಂದಿಗೆ ಕರೆದುಕೊಂಡು ಆ ಬಾಲಕಿಯ ಕೊಠಡಿಯೊಳಕ್ಕೆ ಹೋದನು.